ಚಿನ್ನಸ್ವಾಮಿ ಮೈದಾನದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ: ಈ ಇತಿಹಾಸ ಸೃಷ್ಟಿಸಿದ ಮೊದಲಿಗ ಇವರೇ!

Virat Kohli Chinnaswamy Maidan Record: 13 ರನ್‌ ತಲುಪುತ್ತಿದ್ದಂತೆ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 17 ಆವೃತ್ತಿಗಳಲ್ಲಿ ಒಂದೇ ಮೈದಾನದಲ್ಲಿ 3000 ರನ್‌ ತಲುಪಿದ ಮೊದಲ ಐಪಿಎಲ್ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

Written by - Bhavishya Shetty | Last Updated : May 18, 2024, 09:14 PM IST
    • ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3000 ಐಪಿಎಲ್ ರನ್ ಪೂರೈಸಿದ ಮೊದಲ ಆಟಗಾರ
    • 13 ರನ್‌ ತಲುಪುತ್ತಿದ್ದಂತೆ ಕೊಹ್ಲಿ ಈ ಸಾಧನೆ ಮಾಡಿದ್ದಾರೆ
    • ಐಪಿಎಲ್ ಇತಿಹಾಸದಲ್ಲಿ 700 ಬೌಂಡರಿ ಬಾರಿಸಿದ ಎರಡನೇ ಬ್ಯಾಟ್ಸ್‌ಮನ್
ಚಿನ್ನಸ್ವಾಮಿ ಮೈದಾನದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ: ಈ ಇತಿಹಾಸ ಸೃಷ್ಟಿಸಿದ ಮೊದಲಿಗ ಇವರೇ! title=
Virat Kohli

Virat Kohli: ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ 2024ರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3000 ಐಪಿಎಲ್ ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಮಧುಮೇಹಿಗಳಿಗೆ ಅಮೃತಕ್ಕೆ ಸಮ ಈ ಹಣ್ಣು: ತಿಂದ ತಕ್ಷಣ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್ ಲೆವೆಲ್!

13 ರನ್‌ ತಲುಪುತ್ತಿದ್ದಂತೆ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 17 ಆವೃತ್ತಿಗಳಲ್ಲಿ ಒಂದೇ ಮೈದಾನದಲ್ಲಿ 3000 ರನ್‌ ತಲುಪಿದ ಮೊದಲ ಐಪಿಎಲ್ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ರೋಹಿತ್ ಶರ್ಮಾ ಒಂದೇ ಐಪಿಎಲ್ ಮೈದಾನದಲ್ಲಿ (ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2295 ರನ್) 2000ಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂದೆನಿಸಿಕೊಂಡಿದ್ದರು.

ಇದನ್ನೂ ಓದಿ: T20 World Cup: ಮೇ 25ರಂದು ಅಮೆರಿಕಾಗೆ ಹಾರಲಿದೆ ಟೀಂ ಇಂಡಿಯಾ ಮೊದಲ ತಂಡ

ಇದಲ್ಲದೇ ಐಪಿಎಲ್ ಇತಿಹಾಸದಲ್ಲಿ 700 ಬೌಂಡರಿ ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಶಾರ್ದೂಲ್ ಠಾಕೂರ್ ಎಸೆದ ಇನಿಂಗ್ಸ್’ನ ಎರಡನೇ ಓವರ್’ನ ಎರಡನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 700 ಅಥವಾ ಅದಕ್ಕಿಂತ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಏಕೈಕ ಬ್ಯಾಟ್ಸ್‌ಮನ್ ಶಿಖರ್ ಧವನ್, ಅವರ ಹೆಸರಿನಲ್ಲಿ 768 ಬೌಂಡರಿಗಳಿವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News