ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ "ದ ಜಡ್ಜ್ ಮೆಂಟ್" ಟ್ರೇಲರ್

"ಯದ್ದಕಾಂಡ" ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಮಾಡಿರುವ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ಮತ್ತೆ ರವಿಚಂದ್ರನ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.    

Written by - Ranjitha R K | Last Updated : May 17, 2024, 01:50 PM IST
  • ರವಿಚಂದ್ರನ್ ಅಭಿನಯದ "ದ ಜಡ್ಜ್ ಮೆಂಟ್" ಟ್ರೇಲರ್ ಬಿಡುಗಡೆ
  • ಬಹು ನಿರೀಕ್ಷಿತ ಈ ಚಿತ್ರ‌ ಮೇ 24 ರಂದು ದೇಶಾದ್ಯಂತ ಬಿಡುಗಡೆ .
  • ವಕೀಲನಾಗಿ ಮಿಂಚಲಿದ್ದಾರೆ ರವಿಚಂದ್ರನ್
ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ "ದ ಜಡ್ಜ್ ಮೆಂಟ್" ಟ್ರೇಲರ್  title=

ಬೆಂಗಳೂರು : G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.ಚಿತ್ರದಲ್ಲಿ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. MMB legacyಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿದರು.    

"ಯದ್ದಕಾಂಡ" ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಮಾಡಿರುವ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ಮತ್ತೆ ರವಿಚಂದ್ರನ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಈ ಚಿತ್ರ ಮೇ 24 ಚಿತ್ರರಂದು ಕರ್ನಾಟಕ ಮಾತ್ರವಲ್ಲದೆ,ದೆಹಲಿ, ಮುಂಬೈ, ಲಕ್ನೋ, ಗೋವಾ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ  ಕಡೆ ಪ್ರತಿಷ್ಠಿತ ರಿಲಯನ್ಸ್ ಎಂಟರ್ ಟೈನ್ಮೆಂಟ್ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆ. 

ಇದನ್ನೂ ಓದಿ : ಖ್ಯಾತ ಕನ್ನಡ ನಿರ್ಮಾಪಕರೊಂದಿಗೆ ಅನುಷ್ಕಾ ಶೆಟ್ಟಿ ಮದುವೆ?! ಸ್ವೀಟಿ ಕೈಹಿಡಿಯೋ ವರ ಯಾರು ಗೊತ್ತಾ?

ನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ಸಾಮಾನ್ಯವಾಗಿ ನನ್ನ ಸಿನಿಮಾ‌ ಹಾಡುಗಳ ಮೂಲಕ ಜನಪ್ರಿಯ.‌ ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು "ಜಡ್ಜ್ ಮೆಂಟ್". ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ " ಜಡ್ಜ್ ಮೆಂಟ್ " ಅಂತಿಮ ಎಂದು  ನಟ ರವಿಚಂದ್ರನ್ ಹೇಳಿದ್ದಾರೆ.

ಚಿತ್ರದಲ್ಲಿ ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದ ಕಲಾವಿದರು ಕಾಣಿಸಿಕೊಂಡಿದ್ದಾರೆ. ಗುರುರಾಜ್ ಕುಲಕರ್ಣಿ ನಿರ್ಮಾಣದ ಈ ಚಿತ್ರಕ್ಕೆ   ಅನೂಪ್ ಸೀಳಿನ್ ಸಂಗೀತವಿದೆ. ಪ್ರಮೋದ್ ಮರವಂತೆ ಹಾಡನ್ನು ಹಾಗೂ ಎಂ.ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ : ದೀಪಿಕಾ ಮುಡಿಗೇರಿತು ವಿಶ್ವ ಮಟ್ಟದ ವಿಶೇಷ ಪ್ರಶಸ್ತಿ..! ಈ ಗೌರವಕ್ಕೆ ಪಾತ್ರರಾದ ಭಾರತೀಯ ಮೊದಲ ತಾರೆ ಈಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News