750 ಚೀಲ ಅಕ್ರಮ ಪಡಿತರ ಅಕ್ಕಿ ದಾಸ್ತಾನು ವಶ, ಅಂಗಡಿ ಪರವಾನಿಗೆ ರದ್ದು...!

ನಗರದ ಹೊರವಲಯದಲ್ಲಿನ ಗುಗ್ಗರಹಟ್ಟಿಯ ನ್ಯಾಯಬೆಲೆ ಅಂಗಡಿ 115 ರ ಬದಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಸುಮಾರು 750 ಚೀಲ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡು ಮುಂದಿನ ಅಗತ್ಯ ಕ್ರಮ ವಹಿಸಿದೆ.

Written by - Manjunath Naragund | Last Updated : May 17, 2024, 04:59 PM IST
  • ಆಹಾರ ಇಲಾಖೆಯ ಆಹಾರ ನಿರೀಕ್ಷಕರು, ಸಿಬ್ಬಂದಿ ಒಟ್ಟುಗೂಡಿ ಈ ಕಾರ್ಯಾಚರಣೆ ಮಾಡಲಾಗಿದ್ದು,
  • ಅಕ್ರಮ ಪಡಿತರ ಅಕ್ಕಿಯನ್ನು ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಬಳ್ಳಾರಿ ನಗರದ ಎಪಿಎಂಸಿ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡು ಎಫ್‍ಐಆರ್ ದಾಖಲಿಸಲಾಗಿದೆ.
 750 ಚೀಲ ಅಕ್ರಮ ಪಡಿತರ ಅಕ್ಕಿ ದಾಸ್ತಾನು ವಶ, ಅಂಗಡಿ ಪರವಾನಿಗೆ ರದ್ದು...! title=

ಬಳ್ಳಾರಿ: ನಗರದ ಹೊರವಲಯದಲ್ಲಿನ ಗುಗ್ಗರಹಟ್ಟಿಯ ನ್ಯಾಯಬೆಲೆ ಅಂಗಡಿ 115 ರ ಬದಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಸುಮಾರು 750 ಚೀಲ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡು ಮುಂದಿನ ಅಗತ್ಯ ಕ್ರಮ ವಹಿಸಿದೆ.

ವಶಪಡಿಸಿಕೊಳ್ಳಲಾದ ಪಡಿತರ ಅಕ್ಕಿಯನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿದ್ದು, ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಬಿಡಿ ಅದು ಐದು ವರ್ಷ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯMay be an image of 2 people

ಆಹಾರ ಇಲಾಖೆಯ ಆಹಾರ ನಿರೀಕ್ಷಕರು, ಸಿಬ್ಬಂದಿ ಒಟ್ಟುಗೂಡಿ ಈ ಕಾರ್ಯಾಚರಣೆ ಮಾಡಲಾಗಿದ್ದು, ಅಕ್ರಮ ಪಡಿತರ ಅಕ್ಕಿಯನ್ನು ಸಾಗಾಣೆ ಮಾಡುತ್ತಿದ್ದ ಲಾರಿಯನ್ನು ಬಳ್ಳಾರಿ ನಗರದ ಎಪಿಎಂಸಿ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡು ಎಫ್‍ಐಆರ್ ದಾಖಲಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಹಾಗೂ ಆಹಾರ ಇಲಾಖೆ ಉಪನಿರ್ದೇಶಕಿ ಸಕೀನಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಬಡ ಜನರಿಗೆ ತಲುಪಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುವವರಿಗೆ ಇದು ಆಹಾರ ಇಲಾಖೆಯ ಈ ಕ್ರಮ ಎಚ್ಚರಿಕೆಯ ಸಂದೇಶವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News