ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !

Remedy For Diabetes:ಈ ಪುಡಿಯನ್ನು ಒಂದು ಲೋಟ ನೀರಿಗೆ ಬೆರೆಸಿ ಕುಡಿದರೆ ಸಾಕು. ಶುಗರ್ ಎಷ್ಟೇ ಹೈ ಇದ್ದರೂ ನಿಯಂತ್ರಣಕ್ಕೆ ಬರುತ್ತದೆ. 

Home Remedy For Diabetes :ಇಂದಿನ ಕಾಲದಲ್ಲಿ ಮಧುಮೇಹವು ಗಂಭೀರ ಸಮಸ್ಯೆಯಾಗಿದೆ.ಇತ್ತೀಚಿನ ದಿನಗಳಲ್ಲಿ, ವೃದ್ಧರು ಮಾತ್ರವಲ್ಲ,ಯುವಕರು ಮತ್ತು ಮಕ್ಕಳನ್ನು ಕೂಡಾ ಈ ಗಂಭೀರ ಕಾಯಿಲೆ ಕಾಡುತ್ತಿದೆ.ಮಧುಮೇಹ ಕಾಯಿಲೆ ಇದ್ದಾಗ ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸುವುದಿಲ್ಲ.ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ವೇಗವಾಗಿ ಹೆಚ್ಚಾಗುತ್ತದೆ.ಇದನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಣಕ್ಕೆ ತಾರದೆ ಹೋದರೆ  ಈ ರೋಗವು ದೇಹದ ಪ್ರಮುಖ ಅಂಗಗಳಿಗೆ ಹಾನಿ ಮಾಡುತ್ತದೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಯಾರಿಗೆ ಮಧುಮೇಹ ಇರುತ್ತದೆಯೋ ಅವರು ಜೀವನದುದ್ದಕ್ಕೂ ಔಷಧಿಗಳನ್ನು ಅವಲಂಬಿಸಬೇಕಾಗುತ್ತದೆ.ಆದರೆ, ಸರಿಯಾದ ಆಹಾರ ಮತ್ತು ಜೀವನಶೈಲಿಯನ್ನು ಅನುಸರಿಸುವ ಮೂಲಕ ಈ ರೋಗವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇದಲ್ಲದೆ, ಮನೆಮದ್ದುಗಳ ಸಹಾಯದಿಂದಲೂ ಇದನ್ನು ಕಂಟ್ರೋಲ್ ಮಾಡಬಹುದು.

2 /6

ಹುರಿಗಡಲೆ ಪುಡಿ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ.ಇದರ ಸೇವನೆ ಮೂಲಕ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಸುಲಭವಾಗುತ್ತದೆ.

3 /6

ಹುರಿಗಡಲೆ ಹಿಟ್ಟು ಬೀಟಾ ಗ್ಲುಕನ್ ಅನ್ನು ಹೊಂದಿರುತ್ತದೆ.ಇದು ದೇಹದಲ್ಲಿ ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಇದರ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು,ಇದು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ. 

4 /6

ಇದಲ್ಲದೆ,ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಇದರ ನಿಯಮಿತ ಸೇವನೆಯು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ.ಇದು ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

5 /6

ಒಂದು ಲೋಟ ನೀರಿನಲ್ಲಿ ಒಂದು ಚಮಚ ಹುರಿಗಡಲೆ ಪುಡಿಯನ್ನು ಬೆರೆಸಿ ಕುಡಿಯಬಹುದು.ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಬಹಳಷ್ಟು ಸಹಾಯ ಮಾಡುತ್ತದೆ.  

6 /6

ಸೂಚನೆ:ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.