LSG vs MI: ಅಬ್ಬರಿಸಿ ಬೊಬ್ಬಿರಿದ ಪೂರಣ್, ಲಕ್ನೋ ಜೈಂಟ್ಸ್ ಗೆ 18 ರನ್ ಗಳ ಭರ್ಜರಿ ಗೆಲುವು 

ಇಲ್ಲಿನ ವಾಂಖೆಡ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್ ಗಳ ಗೆಲುವು ಸಾಧಿಸಿದೆ.

Written by - Manjunath Naragund | Last Updated : May 18, 2024, 01:04 AM IST
  • ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ ಪೂರಣ್ ಕೇವಲ 29 ಎಸೆತಗಳಲ್ಲಿ ಎಂಟು ಸಿಕ್ಸರ್ ಹಾಗೂ ಐದು ಬೌಂಡರಿಗಳ ನೆರವಿನಿಂದ 75 ರನ್ ಗಳಿಸಿದರು.
  • ಇದರಿಂದಾಗಿ ಅಂತಿಮವಾಗಿ ಲಕ್ನೋ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 214 ರನ್ ಗಳಿಸಿತು.
  • ಲಕ್ನೋ ತಂಡ ನೀಡಿದ 215 ರನ್ ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ತಂಡವು ಉತ್ತಮ ಆರಂಭವನ್ನೇ ಕಂಡಿತು,
LSG vs MI: ಅಬ್ಬರಿಸಿ ಬೊಬ್ಬಿರಿದ ಪೂರಣ್, ಲಕ್ನೋ ಜೈಂಟ್ಸ್ ಗೆ 18 ರನ್ ಗಳ ಭರ್ಜರಿ ಗೆಲುವು  title=

ಮುಂಬೈ: ಇಲ್ಲಿನ ವಾಂಖೆಡ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್ ಗಳ ಗೆಲುವು ಸಾಧಿಸಿದೆ.

ಮೊದಲು ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಫಿಲ್ಡಿಂಗ್ ಆಯ್ದುಕೊಂಡಿತು, ಇದೆ ವೇಳೆ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಲಕ್ನೋ ತಂಡವು ಆರಂಭದಲ್ಲಿಯೇ ಪಡಿಕಲ್ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.ನಂತರ ಕೆ.ಎಲ್ ರಾಹುಲ್ ಮತ್ತು ಸ್ತೋನಿಸ್ ಅವರ ಸಮಯೋಚಿತ ಆಟದ ನೆರವಿನಿಂದ ಸುಸ್ಥಿತಿಗೆ ತಲುಪಿತು ಒಂದೆಡೆ ಕೆ.ಎಲ್ ರಾಹುಲ್ 41 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದ 55 ರನ್ ಗಳಿಸಿದರೆ, ಇನ್ನೊಂದೆಡೆಗೆ ಸ್ಟೋನಿಸ್ 22 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 28 ರನ್ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ ಪೂರಣ್ ಕೇವಲ 29 ಎಸೆತಗಳಲ್ಲಿ ಎಂಟು ಸಿಕ್ಸರ್ ಹಾಗೂ ಐದು ಬೌಂಡರಿಗಳ ನೆರವಿನಿಂದ 75 ರನ್ ಗಳಿಸಿದರು. ಇದರಿಂದಾಗಿ ಅಂತಿಮವಾಗಿ ಲಕ್ನೋ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 214 ರನ್ ಗಳಿಸಿತು.ಲಕ್ನೋ ತಂಡ ನೀಡಿದ 215 ರನ್ ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ತಂಡವು ಉತ್ತಮ ಆರಂಭವನ್ನೇ ಕಂಡಿತು, ಕೇವಲ 8.4 ಓವರ್ ಗಳಲ್ಲಿ ರೋಹಿತ್ ಶರ್ಮಾ ಹಾಗೂ ಡೆವಾಲ್ಡ್ ಬ್ರೆವಿಸ್ 88 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಉತ್ತಮ ಅಡಿಪಾಯವನ್ನು ಹಾಕಿದರು.

ಶರ್ಮಾ 38 ಎಸೆತಗಳಲ್ಲಿ 10 ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದ 68 ರನ್ ಗಳಿಸಿದರೆ ಇನ್ನೊಂದೆಡೆಗೆ ಕೊನೆಯಲ್ಲಿ ನಾಮನ್ ಧೀರ್ 28 ಎಸೆತಗಳಲ್ಲಿ ಐದು ಸಿಕ್ಸರ್ ಹಾಗೂ ನಾಲ್ಕು ಬೌಂಡರಿಗಳ ನೆರವಿನೊಂದಿಗೆ 62 ರನ್ ಗಳಿಸಿ ಅಜೇಯರಾಗಿ ಉಳಿದರು.ಆದಾಗ್ಯೂ ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ದಡ ತಲುಪುವಲ್ಲಿ ವಿಫಲವಾಯಿತು.ಅಂತಿಮವಾಗಿ ಮುಂಬೈ ಇಂಡಿಯನ್ಸ್ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 196 ರನ್ ಗಳಿಸಲಷ್ಟೇ ಶಕ್ತವಾಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

 

Trending News