ಇಂದಿನ ಪೆಟ್ರೋಲ್‌, ಡೀಸೆಲ್‌ಗಳ ಬೆಲೆ: ಏರಿಕೆಯಾಗಿದೆಯಾ ಅಥವಾ ಇಳಿಕೆಯಾಗಿದೆಯಾ?

Petrol and Diesel Price: ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಗೆ ಪರಿಷ್ಕರಣ್‌ ಮಾಡಲಾಗಿದೆ. ಹಾಗಾದ್ರೆ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ,  ಮತ್ತು ಚೆನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತಿಳಿಯೋಣ.

Written by - Zee Kannada News Desk | Last Updated : Nov 2, 2023, 02:33 PM IST
  • ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಸ್ಥಿರವಾಗಿದೆ.
  • ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 101.94 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 87.89 ರೂ.ಗೆ ಮಾರಾಟವಾಗುತ್ತಿದೆ.
  • ಭಾರತದಲ್ಲಿ, ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.
ಇಂದಿನ ಪೆಟ್ರೋಲ್‌, ಡೀಸೆಲ್‌ಗಳ ಬೆಲೆ: ಏರಿಕೆಯಾಗಿದೆಯಾ ಅಥವಾ ಇಳಿಕೆಯಾಗಿದೆಯಾ? title=

November 2nd Petrol and Diesel Price: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಸ್ಥಿರವಾಗಿದ್ದು, ಗುರುವಾರ ಬೆಳಗ್ಗೆ ಸುಮಾರು  6 ಗಂಟೆ   ವಿಶ್ವ ವ್ಯಾಪಾರ ಸಂಸ್ಥೆ(WTO) ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 81.07 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ $ 85.16 ನಲ್ಲಿ ವಹಿವಾಟು ನಡೆಸುತ್ತಿದೆ. ಸದ್ಯ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದ್ದು, ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಿದ್ದಾರೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಛತ್ತೀಸ್‌ಗಢದಲ್ಲಿ ಪೆಟ್ರೋಲ್ 50 ಪೈಸೆ ಮತ್ತು ಡೀಸೆಲ್ 49 ಪೈಸೆ ಹೆಚ್ಚಾಗಿದ್ದು, ಮಹಾರಾಷ್ಟ್ರದಲ್ಲಿ ಪೆಟ್ರೋಲ್ 56 ಪೈಸೆ ಮತ್ತು ಡೀಸೆಲ್ 52 ಪೈಸೆ ಹೆಚ್ಚಾಗಿದೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 30 ಪೈಸೆ ಏರಿಕೆಯಾಗುವುದಲ್ಲದೇ ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಮತ್ತೊಂದೆಡೆ, ಹರಿಯಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ 28 ಪೈಸೆಗಳಷ್ಟು ಅಗ್ಗವಾಗಿದ್ದು, ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಒಡಿಶಾದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

ಇದನ್ನು ಓದಿ: ಮತ್ತೆ ಹೊಳಪು ಪಡೆದ ಚಿನ್ನ ಮತ್ತು ಬೆಳ್ಳಿ ! ಇಂದು ಎಷ್ಟಿದೆ ನೋಡಿ ಬಂಗಾರದ ಬೆಲೆ

ಪ್ರಸ್ತುತ, ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 96.72 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 89.62 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಮತ್ತೊಂದೆಡೆ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 102.63 ರೂ ಮತ್ತು ಡೀಸೆಲ್ ರೂ 94.24 ಕ್ಕೆ ಮಾರಾಟ ಮಾಡಲಾಗುತ್ತಿದೆ. ಹಾಗೆಯೇ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 101.94 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 87.89 ರೂ.ಗೆ ಮಾರಾಟವಾಗುತ್ತಿದೆ. 

ಭಾರತದಲ್ಲಿ, ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇದನ್ನು ಪ್ರತಿದಿನವೂ ಮಾಡಲಾಗುತ್ತದೆ ಮತ್ತು ಪ್ರಪಂಚದಾದ್ಯಂತ ಕಚ್ಚಾ ತೈಲದ ಬೆಲೆಗೆ ಅನುಗುಣವಾಗಿ ದರಗಳನ್ನು ನಿರ್ಧರಿಸಲಾಗುತ್ತದೆ. ಪ್ರತಿ ದಿನದ ದರಗಳು, ಹೊಸದಾಗದೆಯಿರಲಿ ಅಥವಾ ಬದಲಾಗದೆ ಇರಲಿ, ದಿನದಂದು ಬೆಳಿಗ್ಗೆ 6 ಗಂಟೆಗೆ ಘೋಷಿಸಲಾಗುತ್ತದೆ. ಇವುಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತಿದ್ದು, ಇದು ಮೌಲ್ಯವರ್ಧಿತ ತೆರಿಗೆ (VAT), ಸರಕು ಸಾಗಣೆ ಶುಲ್ಕಗಳು, ಸ್ಥಳೀಯ ತೆರಿಗೆಗಳ ಮೇಲೆ ಪರಿಷ್ಕರಣೆ ಮಾಡಲಾಗುತ್ತದೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News