ನಿರುದ್ಯೋಗಿ ಯುವಕರಿಗೆ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.

Last Updated : May 23, 2022, 10:58 PM IST
  • ಅರ್ಜಿದಾರರು 18 ರಿಂದ 45 ವರ್ಷದೊಳಗಿರಬೇಕು.
  • ಕನಿಷ್ಠ 8 ನೇ ತರಗತಿ ಪಾಸ್ ಆಗಿರಬೇಕು.ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು.
  • ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿದ್ದು, ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು
ನಿರುದ್ಯೋಗಿ ಯುವಕರಿಗೆ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ  title=

ಬೆಂಗಳೂರು: ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು 18 ರಿಂದ 45 ವರ್ಷದೊಳಗಿರಬೇಕು. ಕನಿಷ್ಠ 8 ನೇ ತರಗತಿ ಪಾಸ್ ಆಗಿರಬೇಕು.ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿದ್ದು, ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ:'ತುರ್ತು ನಿರ್ಗಮನ' ಸಿನಿಮಾದಿಂದ ಅಪ್ಪುಗೆ ಗಾನ ನಮನ...ಹೇಗಿದೆ 'ಜೀವ' ಹಾಡು ಕೇಳಿ ಈಗ?

ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದ್ದು, ಮೇ 31 ರಿಂದ ತರಬೇತಿಯು ಆರಂಭಗೊಳ್ಳುತ್ತದೆ. ಆಸಕ್ತರು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಹಾಗೂ ಇತ್ತೀಚಿನ 3 ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು.

ಇದನ್ನೂ ಓದಿ: Vikrant Rona: ‘ಗಡಂಗ್​ ರಕ್ಕಮ್ಮ’ ಎಂಟ್ರಿಗೆ ಡೇಟ್‌ ಫಿಕ್ಸ್.. ಇಲ್ಲಿದೆ ವಿಕ್ರಾಂತ್‌ ರೋಣ ಹೊಸ ಅಪ್‌ಡೇಟ್ಸ್‌

ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539-231038 ಗೆ ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News