Latest Railway Vacancies: ರೈಲ್ವೇ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಗುಡ್ ನ್ಯೂಸ್!

Recruitment Updates in Indian Railway Sector:  ರೈಲ್ವೇ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಪ್ರತಿ ವರ್ಷ ನಿಯಮಿತ ಆಧಾರದ ಮೇಲೆ ನೇಮಕಾತಿ ನಡೆಯಲಿದೆ ಎಂದು ಈಸ್ಟ್ ಸೆಂಟ್ರಲ್ ರೈಲ್ವೇಯ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಖಂಡೇಲ್ವಾಲ್ ಮಾಹಿತಿ ನೀಡಿದ್ದಾರೆ. 

Written by - Yashaswini V | Last Updated : Jan 29, 2024, 02:36 PM IST
  • ರೈಲ್ವೇ ಮೂಲಸೌಕರ್ಯ ಮತ್ತು ಕಾರ್ಯಾಚರಣೆಯು ನಿರಂತರವಾಗಿ ವಿಸ್ತರಿಸುತ್ತಿದೆ.
  • ರೈಲ್ವೇ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ
  • ಪ್ರತಿ ವರ್ಷ ನಿಯಮಿತ ಆಧಾರದ ಮೇಲೆ ನೇಮಕ ಪ್ರಕ್ರಿಯೆ ನಡೆಯಲಿದೆ.
Latest Railway Vacancies: ರೈಲ್ವೇ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಗುಡ್ ನ್ಯೂಸ್!  title=

Job Opportunities in Indian Railways: ನೀವು ಸರ್ಕಾರಿ ಉದ್ಯೋಗಕ್ಕಾಗಿ ಅದರಲ್ಲೂ ಭಾರತೀಯ ರೈಲ್ವೇಯಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಇದೋ ನಿಮಗಿದೆ ಗುಡ್ ನ್ಯೂಸ್. ಇನ್ನು ಮುಂದೆ ಪ್ರತಿ ವರ್ಷ ನಿಯಮಿತ ಆಧಾರದ ಮೇಲೆ ನೇಮಕಾತಿ ನಡೆಸಲು ರೈಲ್ವೆ ಇಲಾಖೆ ಯೋಚಿಸುತ್ತಿದ್ದು ದೇಶದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಕೋಟ್ಯಂತರ ಯುವಕರಿಗೆ ಒಳ್ಳೆಯ ಸುದ್ದಿ ಸಿಕ್ಕಂತಾಗಿದೆ. 

ಈ ಕುರಿತಂತೆ ಮಾತನಾಡಿರುವ ಈಸ್ಟ್ ಸೆಂಟ್ರಲ್ ರೈಲ್ವೇ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಖಂಡೇಲ್ವಾಲ್, ಕಳೆದ ವರ್ಷ ರೈಲ್ವೇ 1.5 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡಿತ್ತು. ಇನ್ನು ಮುಂದೆ ಪ್ರತಿ ವರ್ಷ ನಿಯಮಿತ ಆಧಾರದ ಮೇಲೆ ನೇಮಕಾತಿ ನಡೆಸಲು ಯೋಜಿಸುತ್ತಿದೆ. ಇದರಿಂದ ಗರಿಷ್ಠ ಸಂಖ್ಯೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬಹುದು ಮತ್ತು ಜನರಿಗೆ ಉದ್ಯೋಗ ಸಿಗುತ್ತದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ- ಆತ್ಮ ಯೋಜನೆ: ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಹಲವು ಹುದ್ದೆಗಳಿಗೆ ನೇಮಕಾತಿ ಆರಂಭ:
ರೈಲ್ವೇ ಮೂಲಸೌಕರ್ಯ ಮತ್ತು ಕಾರ್ಯಾಚರಣೆಯು ನಿರಂತರವಾಗಿ ವಿಸ್ತರಿಸುತ್ತಿದೆ. ಇದರಿಂದಾಗಿ ವಾರ್ಷಿಕ ಆಧಾರದ ಮೇಲೆ ಅನೇಕ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಈ ದಿಕ್ಕಿನಲ್ಲಿ, 5,696 ALP (ಸಹಾಯಕ ಲೋಕೋ ಪೈಲಟ್) ನೇಮಕಾತಿಯು ಜನವರಿ 20 ರಿಂದ ಪ್ರಾರಂಭವಾಗಿದೆ. ಇದರಲ್ಲಿ, ಅರ್ಜಿದಾರರು ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವನ್ನು ಪಡೆಯುತ್ತಾರೆ ಎಂದು ಅನಿಲ್ ಕುಮಾರ್ ಖಂಡೇಲ್ವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಇನ್ನು ರೈಲ್ವೆ ಇಲಾಖೆಯ ಈ ಕ್ರಮದಿಂದಾಗಿ ರೈಲ್ವೆ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಹೆಚ್ಚಿನ ಅನುಕೂಲವಾಗಲಿದೆ. ರೈಲ್ವೇ ನೇಮಕಾತಿಗಳು ಪ್ರತಿ ವರ್ಷ ಹೊರಬರುವುದರಿಂದ, ಕೆಲವು ಕಾರಣಗಳಿಂದ ಈ ವರ್ಷ ಅಭ್ಯರ್ಥಿಗಳು ಯಶಸ್ವಿಯಾಗದಿದ್ದರೆ, ಮುಂದಿನ ವರ್ಷ ಅವರು ಮತ್ತೆ ಪ್ರಯತ್ನಿಸಲು ಅನುವು ಮಾಡಿಕೊಟ್ಟಂತಾಗುತ್ತದೆ ಎಂದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  

ಇದನ್ನೂ ಓದಿ- ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ?

ಗಮನಾರ್ಹವಾಗಿ, ಈ ಹಿಂದೆ ರೈಲ್ವೇ ಇಲಾಖೆಯಲ್ಲಿ 3-4 ವರ್ಷಗಳಿಗೊಮ್ಮೆ ನೇಮಕಾತಿ ನಡೆಯುತ್ತಿತ್ತು, ಈಗ ಪ್ರತಿ ವರ್ಷ ಖಾಲಿ ಹುದ್ದೆಗಳಿಗೆ ರೈಲ್ವೇ ನೇಮಕಾತಿ ನಡೆಸಲಿದೆ. ಇಲ್ಲಿಯವರೆಗೆ, 5,696 ಲೋಕ ಪೈಲಟ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಅಧಿಸೂಚನೆಯನ್ನು ಜನವರಿ 20 ರಂದು ಹೊರಡಿಸಲಾಗಿದೆ. ರೈಲ್ವೇ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಯುವಕರಿಗೆ ಹಿಂದಿಗಿಂತ ಹೆಚ್ಚಿನ ಅವಕಾಶಗಳು ಈಗ ಸಿಗಲಿವೆ ಎಂದವರು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News