Railway Recruitment: 3624 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಆದವರು ಇಂದೇ ಅರ್ಜಿ ಸಲ್ಲಿಸಿ

Indian Railway Recruitment: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇನ್ನು ಸಂಬಂಧಿತ ಟ್ರೇಡ್‌ನಿಂದ ITI ಪ್ರಮಾಣಪತ್ರವನ್ನು ಪಡೆದಿರಬೇಕು. ಇದಲ್ಲದೆ ಜುಲೈ 26ಕ್ಕೆ ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳಾಗಿರಬೇಕು.

Written by - Puttaraj K Alur | Last Updated : Jun 23, 2023, 07:47 PM IST
  • ರೈಲ್ವೆ ನೇಮಕಾತಿ ಸೆಲ್ (RRC) ಪಶ್ಚಿಮ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ
  • ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು
  • ಒಟ್ಟು 3624 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 26 ಕೊನೆಯ ದಿನವಾಗಿದೆ
Railway Recruitment: 3624 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಆದವರು ಇಂದೇ ಅರ್ಜಿ ಸಲ್ಲಿಸಿ title=
3624 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ರೈಲ್ವೆ ನೇಮಕಾತಿ ಸೆಲ್ (RRC) ಪಶ್ಚಿಮ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRC WR-rrc-wr.comನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿರುವ ಭಾರತೀಯ ರೈಲ್ವೆ ಇಲಾಖೆಯು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಒಟ್ಟು 3,624 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: Panipuri Video: ಬಾಯಿ ಚಪ್ಪರಿಸಿ ಗೋಲಗಪ್ಪಾ ತಿನ್ನೋ ಮುನ್ನ ಈ ವಿಡಿಯೋ ನೋಡಿ.. ಜನ್ಮದಲ್ಲೇ ಪಾನಿಪುರಿ ಹೆಸರೆತ್ತಲ್ಲ!

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇದೇ ತಿಂಗಳ 27ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇನ್ನು ಸಂಬಂಧಿತ ಟ್ರೇಡ್‌ನಿಂದ ITI ಪ್ರಮಾಣಪತ್ರವನ್ನು ಪಡೆದಿರಬೇಕು. ಇದಲ್ಲದೆ ಜುಲೈ 26ಕ್ಕೆ ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳಾಗಿರಬೇಕು.

ಇದನ್ನೂ ಓದಿ: Rahul Gandhi Marriage: 'ಗಡ್ಡ ಬಿಡಬೇಡಿ... ಮದುವೆ ಮಾಡ್ಕೊಳ್ಳಿ' ರಾಹುಲ್ ಗಾಂಧಿಗೆ ಸಲಹೆ ನೀಡಿದ ಲಾಲೂ ಯಾದವ್

ಅಭ್ಯರ್ಥಿಗಳ ಆಯ್ಕೆ: ಅಭ್ಯರ್ಥಿಗಳ ಆಯ್ಕೆಯು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇತರೆ ಸಂಪೂರ್ಣ ವಿವರಗಳನ್ನು ನೀವು ಅಧಿಸೂಚನೆಯಲ್ಲಿ ನೋಡಬಹುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು100 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕ್ ಮೂಲಕ ಶುಲ್ಕವನ್ನ ಪಾವತಿಸಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News