ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಬಸ್ ಡಿಕ್ಕಿ: ನಾಲ್ವರು ಮೃತ, 15ಕ್ಕೂ ಹೆಚ್ಚು ಜನರಿಗೆ ಗಾಯ

Road Accident: ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂನಲ್ಲಿ ಬಸ್ ಓವರ್ ಟೇಕ್ ಮಾಡಲು ಯತ್ನಿಸುವಾಗ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಸುಮಾರು 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

Written by - Yashaswini V | Last Updated : May 16, 2024, 11:35 AM IST
  • ಓವರ್ ಟೇಕ್ ಮಾಡಲು ಯತ್ನಿಸುವಾಗ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಬಸ್
  • ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂನಲ್ಲಿ ಘಟನೆ
  • ಈ ದುರ್ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ಸಾವು
ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಬಸ್ ಡಿಕ್ಕಿ: ನಾಲ್ವರು ಮೃತ, 15ಕ್ಕೂ ಹೆಚ್ಚು ಜನರಿಗೆ ಗಾಯ  title=
Image Source : VIDEO SCREENGRAB (ANI)

Accident In Chennai-Trichy National Highway: ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂನಲ್ಲಿ ಬಸ್-ಲಾರಿ ನಡುವೆ ಭೀಕರ ಅಪಘಾತ (Terrible accident between bus and lorry) ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಇದೇ ವೇಳೆ 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು  ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂ (Maduranthakam on the Chennai-Trichy National Highway) ಬಳಿ ಲಾರಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ಬಸ್  ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. 

ಇದನ್ನೂ ಓದಿ- ಯಾದಗಿರಿ : ಗ್ಯಾಸ್ ಸಿಲಿಂಡರ್ ‌‌ಸ್ಪೋಟ... ಹತ್ತಾರು ಗುಡಿಸಲುಗಳು ಬೆಂಕಿಗೆ ಆಹುತಿ

ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ (Chengalpattu Government Hospital)  ದಾಖಲಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

ಇದನ್ನೂ ಓದಿ- ಕೊಳ್ಳೇಗಾಲ ಶಾಸಕ ಎಆರ್‌ಕೆ ಕಾರು ಅಪಫಾತ: ಅದೃಷ್ಟವಶಾತ್ ಪಾರು

ಘಟನೆ ಸ್ಥಳದ ವಿಡಿಯೋ ಇಲ್ಲಿದೆ... 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=O-hDphMYFMg

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News