ಅವರ ಜೊತೆ ಮಾತಾಡುವುದು ನನಗಿಷ್ಟ : ವರ್ತೂರು ಸಂತೋಷ್ ಬಗ್ಗೆ ಮನದ ಮಾತು ಹೇಳಿದ ತನಿಷಾ

BBK 10 : ತನಿಷಾ ಕುಪ್ಪಂಡ ಕಳೆದ ವಾರ ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ ಮನೆಯಿಂದ ಹೊರಗೆ ಬಂದಿದ್ದರು. ‘ಇನ್ನಷ್ಟು ದಿನ ಉಳಿದುಕೊಳ್ಳುತ್ತೇನೆ’ ಎಂಬ ವಿಶ್ವಾಸದಲ್ಲಿಯೇ ಇದ್ದ ಅವರಿಗೆ ಎಲಿಮಿನೇಷನ್ ಶಾಕ್ ಕೊಟ್ಟಿತ್ತು. 

Written by - Ranjitha R K | Last Updated : Jan 22, 2024, 01:28 PM IST
  • ಬಿಗ್‌ಬಾಸ್ ಮನೆಯಲ್ಲಿ ‘ಬೆಂಕಿ’ ಎಂದೇ ಹೆಸರಾದವರು ತನಿಷಾ ಕುಪ್ಪಂಡ.
  • ತನಿಶಾಗೆ ಬೆಂಕಿ ಎನ್ನುವ ಹೆಸರು ಸೂಕ್ತವಾಗಿದೆ.
  • ಛಲ ಬಿಡದೇ ಆಡಿ 100 ದಿನ ಬಿಗ್ ಬಾಸ್ ಮನೆಯಲ್ಲಿ ಪೂರೈಸಿದ್ದಾರೆ
ಅವರ ಜೊತೆ ಮಾತಾಡುವುದು ನನಗಿಷ್ಟ : ವರ್ತೂರು ಸಂತೋಷ್ ಬಗ್ಗೆ ಮನದ ಮಾತು ಹೇಳಿದ ತನಿಷಾ title=

BBK 10 : ಬಿಗ್‌ಬಾಸ್ ಮನೆಯಲ್ಲಿ ‘ಬೆಂಕಿ’ ಎಂದೇ  ಹೆಸರಾದವರು ತನಿಷಾ ಕುಪ್ಪಂಡ. ಸ್ನೇಹಿತರಿಗೆ ಬೆಚ್ಚನೆಯ ಭಾವ ನೀಡುತ್ತ, ಎದುರಾಳಿಯಾಗಿ ನಿಂತರೆ ಸುಡುವ ಕೋಪವನ್ನೂ ತೋರುತ್ತಿದ್ದ  ತನಿಶಾಗೆ ಬೆಂಕಿ ಎನ್ನುವ ಹೆಸರು ಸೂಕ್ತವಾಗಿದೆ.ಕಾಲು ನೋವಿನ ಹೊ ರತಾಗಿಯೂ ಛಲ ಬಿಡದೇ ಆಡಿ 100 ದಿನ ಬಿಗ್ ಬಾಸ್ ಮನೆಯಲ್ಲಿ ಪೂರೈಸಿದ ತನಿಷಾ ಕುಪ್ಪಂಡ ಕಳೆದ ವಾರ ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ ಮನೆಯಿಂದ ಹೊರಗೆ ಬಂದಿದ್ದರು. ‘ಇನ್ನಷ್ಟು ದಿನ ಉಳಿದುಕೊಳ್ಳುತ್ತೇನೆ’ ಎಂಬ ವಿಶ್ವಾಸದಲ್ಲಿಯೇ ಇದ್ದ ಅವರಿಗೆ ಎಲಿಮಿನೇಷನ್ ಶಾಕ್ ಕೊಟ್ಟಿತ್ತು. 

ತನಿಷಾ ಮನೆಯಿಂದ ಹೊರಗೆ ಕಾಲಿಡುವುದಕ್ಕೂ ಮುನ್ನ ಕಣ್ಣೀರು ಹಾಕುತ್ತ ಮನೆಯ ಸದಸ್ಯರಿಗೂ ಬೈದು, ‘ಬಿಗ್‌ಬಾಸ್ ಯಾಕಿಷ್ಟುಕೆಟ್ಟದಾಗಿ ಕಳಿಸಿಕೊಡ್ತೀರಾ?’ ಎಂದು ಕೇಳುತ್ತಲೇ ಹೊರಗೆ ಹೋದರು. ಆದರೆ ಈ ವಾರದ ವೀಕೆಂಡ್ ಎಪಿಸೋಡ್‌ನಲ್ಲಿ ಮತ್ತೆ ವೇದಿಕೆಗೆ ಬಂದು ಕಿಚ್ಚನ ಜೊತೆಗೆ ಬಿಚ್ಚುಮಾತುಗಳನ್ನಾಡಿದ್ದಾರೆ. 

ಇದನ್ನೂ ಓದಿ : BBK10: ಬಿಗ್‌ಬಾಸ್‌ ಸ್ಪರ್ಧಿಗಳಿಗೆ ಪ್ರಶ್ನೆಗಳ ಬಾಣ ಬಿರುಸು!

ಮಿಡ್ ವೀಕ್ ಎಲಿಮಿನೇಷನ್ ಅನುಭವ : 
ಆ ಸಂದರ್ಭದಲ್ಲಿ ತುಂಬ ಬೇಜಾರಾಯ್ತು. ಇನ್ನಷ್ಟು ದಿನ ಉಳಿದುಕೊಳ್ಳಲು ಅರ್ಹಳು ಎಂಬ ಆತ್ಮವಿಶ್ವಾಸದಲ್ಲಿಯೇ ನಾನಿದ್ದೆ. ಆ ನಂಬಿಕೆ ಮುರಿದುಹೋಯಿತು ಎಂದು  ಬೇಜಾರಿದೆ. ಆದರೆ ಆಚೆ ಬಂದು ಸ್ವಲ್ಪ ರಿಲ್ಯಾಕ್ಸ್ ಆಗಿ ಯೋಚಿಸಿದಾಗ ನನ್ನ ಜರ್ನಿ ನನಗೆ ಖುಷಿ ಕೊಟ್ಟಿದೆ. ನಾನು ಮಾಡಬೇಕಾದ ಎಲ್ಲ ಕೆಲಸಗಳನ್ನೂ ಅಚ್ಚುಕಟ್ಟಾಗಿ ಮಾಡಿ ಮುಗಿಸಿದ್ದೇನೆ ಎಂದಿದ್ದಾರೆ. 

ಮತ್ತೆ ಮನೆಯೊಳಗೆ ಹೋಗುವ ಅವಕಾಶ ಸಿಕ್ಕರೆ ? :  
ನನ್ನಲ್ಲಿ ನಾನು ಏನೂ ಬದಲಾವಣೆ ಮಾಡಿಕೊಳ್ಳಲ್ಲ. ಎಷ್ಟೋ ಜನರನ್ನು ಮನೆಯೊಳಗಿದ್ದಾಗ ಅಯ್ಯೋ ಪಾಪ ಎಂದು ನೋಡುತ್ತಿದ್ದೆ. ಆದರೆ ಹೊರಗೆ ಬಂದು ನೋಡಿದಾಗ, ಅವರು ಕೊಡುವ ರಿಯಾಕ್ಷನ್ ನೋಡಿ, ಇವರನ್ನು ಅಯ್ಯೋ ಪಾಪ ಎಂದು ಕ್ಷಮಿಸಿದ್ದು ತಪ್ಪು ಅಂತ ನನಗನಿಸಿತು. ಸಾಮಾನ್ಯವಾಗಿ ನಾನು ಏನಾದ್ರೂ ಅನಿಸಿದ್ರೆ ನೇರವಾಗಿ ಹೇಳಿ ಅಷ್ಟಕ್ಕೆ ಬಿಟ್ಟುಬಿಡ್ತಿದ್ದೆ.ಆದರೆ ಹಾಗೆ ಬಿಡುವುದನ್ನು ಕಡಿಮೆ ಮಾಡುತ್ತಿದ್ದೆ ಅನ್ನಿಸುತ್ತದೆ,  ಇನ್ನೊಂಚೂರು ಡ್ರಾಮಾ ಮಾಡ್ತಿದ್ನೇನೋ ಎಂದು ಹೇಳಿದ್ದಾರೆ.

ಇದನ್ನೂ ಓದಿ :  BBK 10 : ವೋಟಿಂಗ್ ನಲ್ಲಿ ನೆಕ್ ಟು ನೆಕ್ ಫೈಟ್ ಕೊಡುತ್ತಿರುವ ಸ್ಪರ್ಧಿಗಳಿವರು!ಇವರಿಗೇ ಬಿಗ್ ಬಾಸ್ ಸೀಸನ್ 10 ರ ಕಿರೀಟ

ಕಾರ್ತಿಕ್ ಫ್ರೆಂಡ್‌ಷಿಪ್‌ ಬಗ್ಗೆ…?
ಕಾರ್ತಿಕ್ ಸ್ವಲ್ಪ ತಡವಾಗಿ ಅರ್ಥ ಮಾಡಿಕೊಳ್ತ್ತಾರೆ. ಕೊನೆ ಕ್ಷಣದಲ್ಲಿ ಬೇರೆ ಯಾರದೋ ಮಾತು ಕೇಳಿಕೊಂಡು ಎಡವಿದರು. ಆದರೂ ಮನೆಯಿಂದ ಹೊರ ಬಂದ ನಂತರವೂ ನಾನು ಕಾರ್ತಿಕ್ ಜೊತೆ ಸ್ನೇಹ ಮುಂದುವರಿಸ್ತೀನಿ ಅಂದಿದ್ದಾರೆ ತನಿಷಾ. 

ಮನೆಯೊಳಗೆ ಯಾರು ಇಷ್ಟ? ಯಾರು ಫೇಕ್? 
ನನಗೆ ವರ್ತೂರು ಅವರ ಮುಗ್ಧತೆ ಇಷ್ಟ. ಯಾರದ್ದೋ ಮಾತು ಕೇಳಿಸಿಕೊಂಡು, ಯಾರ ಬಗ್ಗೆಯೋ ಕ್ಯಾರೆಕ್ಟರ್ ಸರ್ಟಿಫಿಕೇಟ್ ಕೊಡುವುದಿಲ್ಲ ಅವರು. ಹಾಗಾಗಿ ಅವರ ಜೊತೆಗೆ ಮಾತಾಡುವುದು ನನಗೆ ಮೊದಲಿನಿಂದಲೂ ಇಷ್ಟ.ಆದರೆ ಸಂಗೀತಾ ಫೇಕ್.  ಜೆನ್ಯೂನ್ ಅನಿಸುವುದು ವರ್ತೂರು ಸಂತೋಷ್ ಎಂದಿದ್ದಾರೆ. ಇನ್ನು ಈ ಬಾರಿ ಕಾರ್ತಿಕ ಗೆಲ್ಲಬೇಕು ಎನ್ನುವ ಮನದಾಸೆಯನ್ನು ಕೂಡಾ ತನಿಷಾ ಹೊರ ಹಾಕಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News