ʼಅಚಾತುರ್ಯದಿಂದ ನಿಮಗೆ ನೋವು ಮಾಡಿದ್ದೇನೆ‌ʼ..! ಮಾಧ್ಯಮಗಳಿಗೆ ʼಡಿಬಾಸ್‌ʼ ಬಹಿರಂಗ ಪತ್ರ

Darshan thoogudeepa : ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬಾ ಚಿಕ್ಕದ್ದು. ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ ಎಂದು ಮಾಧ್ಯಮಕ್ಕೆ ಪತ್ರ ಬರೆದ ಡಿಬಾಸ್‌.

Written by - Krishna N K | Last Updated : Apr 24, 2023, 08:08 PM IST
  • ಮಾಧ್ಯಮಗಳಿಗೆ ನಟ ದರ್ಶನ್ ತೂಗುದೀಪ ಪತ್ರ.
  • ಅಚಾತುರ್ಯದಿಂದ ನಿಮಗೆ ನೋವು ಮಾಡಿದ್ದೇನೆ.
  • ಅದನ್ನು ನಾನು ವಿಷಾದಿಸುತ್ತೇನೆ, ಎಲ್ಲರೂ ನಗು ನಗುತಾ ಬಾಳೋಣ ಎಂದ ಡಿಬಾಸ್‌.
ʼಅಚಾತುರ್ಯದಿಂದ ನಿಮಗೆ ನೋವು ಮಾಡಿದ್ದೇನೆ‌ʼ..! ಮಾಧ್ಯಮಗಳಿಗೆ ʼಡಿಬಾಸ್‌ʼ ಬಹಿರಂಗ ಪತ್ರ title=

DBoss Letter : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಮಾಧ್ಯಮಕ್ಕೆ ಬಹಿರಂಗವಾಗಿ ಪತ್ರವನ್ನು ಕಳುಹಿಸಿದ್ದು, ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಎಲ್ಲರೂ ನಗು ನಗುತಾ ಬಾಳೋಣ ಎಂದು ಹೇಳಿದ್ದಾರೆ.

ಈ ಕುರಿತು ಸುದೀರ್ಘವಾದ ಬರಹದೊಂದಿಗೆ ಪತ್ರವನ್ನು ಬರೆದಿರುವ ದಾಸ, ʼ75 ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಕೆಲವು ವ್ಯಕ್ತಿಗಳು ಮತ್ತು ಕೆಲವು ಹೆಸರುಗಳು ಮಾತ್ರ ಚರಿತ್ರೆಯಲ್ಲಿ ಉಳಿದಿರುತ್ತವೆ. ಆ ಸಾಲಿನಲ್ಲಿ ಡಾ| ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ತೂಗುದೀಪ ಶ್ರೀನಿವಾಸ್, ಬಾಲಕೃಷ್ಣ, ದಿನೇಶ್, ಇವರ ಸಮಕಾಲೀನ ದಿಗ್ಗಜರುಗಳನ್ನು ಕರ್ನಾಟಕದ ಜನತೆ ಮೆಚ್ಚಿಕೊಂಡು ಮೆರೆಸಿದರು. 

ಇದನ್ನೂ ಓದಿ: RRR ಹಿಂದಿ ರಿಮೇಕ್‌ಗೆ ರಣವೀರ್, ವಿಕ್ಕಿ ನಟರು..! ಡೈರೆಕ್ಟರ್‌ ʼರಾಜಮೌಳಿʼ ಅಲ್ಲ

ಒಪ್ಪುವ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರೋತ್ಸಾಹಿಸಿರುತ್ತೀರಿ. ಈ ಸಾಲಿನಲ್ಲಿ ಇದ್ದಂತಹ ಕನ್ನಡ ಚಿತ್ರರಂಗ ಮರೆಯಲಾಗದಂತಹ ನಟ ತೂಗುದೀಪ ಶ್ರೀನಿವಾಸ್ ರವರ ಕುಟುಂಬದಿಂದ ಬಂದಂತಹ ಸಣ್ಣ ಕುಡಿ ನಾನು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗ ನನ್ನನ್ನು ಆಶೀರ್ವದಿಸಿ ಪ್ರೋತ್ಸಾಹಿಸಿ ಹಲವಾರು ಬಾರಿ ನಾನು ಮಾಡಿರುವ ಪಾತ್ರಗಳ ಬಗ್ಗೆ ವಿಶ್ಲೇಷಣೆ ಮಾಡಿ, ನನ್ನ ಪಾತ್ರದಲ್ಲಿರುವ ತಪ್ಪುಗಳನ್ನು ತಿದ್ದಿ ಹೇಳಿರುವಿರಿ, ನಾನು ಸಹ ಮುಂದಿನ ದಿನಗಳಲ್ಲಿ ಮಾಡಿರುವಂತೆ ಚಿತ್ರಗಳಲ್ಲಿ ನನ್ನ ಪಾತ್ರಗಳಲ್ಲಿ ಬರುವ ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವೆನು,

ಅದೇ ರೀತಿಯಲ್ಲಿ ನಿಜ ಜೀವನದಲ್ಲಿ ಸಹ. ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬಾ ಚಿಕ್ಕದ್ದು. ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ, ನನ್ನ ಈ ಭಾವನೆಯನ್ನು ನನ್ನ ಎಲ್ಲಾ ಮಿತ್ರರು ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಂಡು ಗೌರವಿಸಬೇಕು.... ಇಂತಿ ನಿಮ್ಮ ದಾಸ.. ಎಂದು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News