ನೇಹಾ ಸಾವಿಗೆ ಆಕ್ರೋಶ ಹೊರ ಹಾಕಿದ ಆಂಜನೇಯ ಭಕ್ತ ಧ್ರುವ ಸರ್ಜಾ..! ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದ ನಟ

Neha Hiremath death : ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ನಡೆದಿದೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಬಂಧನವೂ ಸಹ ಆಗಿದೆ. ಅಲ್ಲದೆ, ಅವಳಿ ನಗರದ ವಿದ್ಯಾರ್ಥಿಗಳು ಸೇರಿದಂತೆ ಕರುನಾಡಿನ ಜನ ನ್ಯಾಯಕ್ಕಾರಿ ಆಗ್ರಹಿಸುತ್ತಿದ್ದಾರೆ.

Written by - Krishna N K | Last Updated : Apr 19, 2024, 08:28 PM IST
    • ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ
    • ನಟ ಧ್ರುವ ಸರ್ಜಾ ನೇಹಾ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಒತ್ತಾಯ
    • ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ನಟ
ನೇಹಾ ಸಾವಿಗೆ ಆಕ್ರೋಶ ಹೊರ ಹಾಕಿದ ಆಂಜನೇಯ ಭಕ್ತ ಧ್ರುವ ಸರ್ಜಾ..! ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದ ನಟ title=

Dhruva Sarja on neha hiremath death : ಹುಬ್ಬಳ್ಳಿ ನಗರ ಅಕ್ಷರಶಃ ಬೆಚ್ಚಿ ಬಿದ್ದಿದೆ. ನಿನ್ನೆ ಬಿವಿಬಿ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಅವಳಿ ನಗರದ ಜನತೆಯ ನಿದ್ದೆಗೆಡಿಸಿದೆ. ಅಲ್ಲದೆ, ಪ್ರೀತಿ ಮಾಡಲ್ಲ ಎಂದ ಯುವತಿಗೆ ಚಾಕುವಿನಿಂದ ಇರಿದು ಕೊಂದ ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಮಾತು ಸೋಷಿಯಲ್‌ ಮೀಡಿಯಾದಲ್ಲಿ ಕೇಳಿ ಬರುತ್ತಿದೆ.

ಇದೀಗ, ನಟ ಧ್ರುವ ಸರ್ಜಾ ನೇಹಾ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಒತ್ತಾಯ ಮಾಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ನಟ, ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು.. ಜೈ ಆಂಜನೇಯ .. ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್​ ಶ್ರಾಫ್​ ಜೊತೆ ಲಿಫ್ಟ್​ ನಲ್ಲಿ ಸಿಕ್ಕಿಬಿದ್ದಿದ್ದರು..!

ಇನ್ನು ನಿನ್ನೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ನಡೆದಿತ್ತು. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಬಂಧನವೂ ಸಹ ಆಗಿದೆ. ಅಲ್ಲದೆ, ಅವಳಿ ನಗರದ ವಿದ್ಯಾರ್ಥಿಗಳು ಸೇರಿದಂತೆ ಕರುನಾಡಿನ ಜನ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News