ಜೀ5 ಒಟಿಟಿಯಲ್ಲಿ ಏಕ್ ಲವ್ ಯಾ ಧಮಾಕಾ...ಜಸ್ಟ್ 7 ದಿನದಲ್ಲಿ ಭರ್ಜರಿ ಸ್ಟ್ರೀಮಿಂಗ್

ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಮ್ಯೂಸಿಕಲ್ ಹಿಟ್ ಮೂವಿ ಏಕ್ ಲವ್ ಯಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.ಏಪ್ರಿಲ್ 8ರಂದು ಜೀ5ಗೆ ಲಗ್ಗೆ ಇಟ್ಟ ಈ ಸಿನಿಮಾ ಜಸ್ಟ್ ಏಳು ದಿನದಲ್ಲಿ 5 ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ.

Written by - YASHODHA POOJARI | Edited by - Manjunath Naragund | Last Updated : Apr 15, 2022, 04:08 PM IST
  • ಏಪ್ರಿಲ್ 8ರಂದು ಜೀ5ಗೆ ಲಗ್ಗೆ ಇಟ್ಟ ಈ ಸಿನಿಮಾ ಜಸ್ಟ್ ಏಳು ದಿನದಲ್ಲಿ 5 ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ.
 ಜೀ5 ಒಟಿಟಿಯಲ್ಲಿ ಏಕ್ ಲವ್ ಯಾ ಧಮಾಕಾ...ಜಸ್ಟ್ 7 ದಿನದಲ್ಲಿ ಭರ್ಜರಿ ಸ್ಟ್ರೀಮಿಂಗ್ title=

ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಮ್ಯೂಸಿಕಲ್ ಹಿಟ್ ಮೂವಿ ಏಕ್ ಲವ್ ಯಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.ಏಪ್ರಿಲ್ 8ರಂದು ಜೀ5ಗೆ ಲಗ್ಗೆ ಇಟ್ಟ ಈ ಸಿನಿಮಾ ಜಸ್ಟ್ ಏಳು ದಿನದಲ್ಲಿ 5 ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ.

ಇದನ್ನೂ ಓದಿ: KGF Chapter 2: ‘ಕೆಜಿಎಫ್ – 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ..?

ರಕ್ಷಿತಾ ಪ್ರೇಮ್ ಸಹೋದರ, ಹೊಸ ಪ್ರತಿಭೆ ರಾಣಾ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಏಕ್ ಲವ್ ಯಾ ಸಿನಿಮಾ‌‌ ಕಳೆದ ಫೆಬ್ರವರಿ 24 ರಂದು ಅದ್ದೂರಿಯಾಗಿ ತೆರೆಗೆ ಅಪ್ಪಳಿಸಿತ್ತು.ಬಾಕ್ಸ್ ಆಫೀಸ್‌ನಲ್ಲಿ ಸೌಂಡ್ ಮಾಡಿದ್ದ ಏಕ್ ಲವ್ ಯಾ ಸಿನಿಮಾದಲ್ಲಿ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಹಾಗೂ ರಚಿತಾ ರಾಮ್ ರಾಣಾಗೆ ಜೋಡಿಯಾಗಿ ನಟಿಸಿದ್ದರು. ಪ್ರೀತಿ ಜೊತೆ ಒಂದೊಳ್ಳೆ ಸಂದೇಶ ನೀಡಿದ್ದ ಮ್ಯೂಸಿಕಲ್ ಹಿಟ್ ಸಿನಿಮಾ ಏಕ್ ಲವ್ ಯಾ ಸಿನಿಮಾ ಜೀ5 ಒಟಿಟಿಯಲ್ಲಿ ಕಮಾಲ್ ಮಾಡ್ತಿದೆ.

ಇದನ್ನೂ ಓದಿ: Kantara Teaser: ಕಾಂತಾರ ಟೀಸರ್‌ ರಿಲೀಸ್‌! ದೆವ್ವದ ಕಥೆ ಹೇಳಲು ಬರುತ್ತಿದ್ದರಾ ರಿಷಬ್ ಶೆಟ್ಟಿ?

ಚರಣ್ ರಾಜ್, ಶಶಿಕುಮಾರ್, ಸೂರಜ್, 'ಶಿಷ್ಯ' ದೀಪಕ್ ಸೇರಿದಂತೆ ದೊಡ್ಡ ತಾರಾಬಳಗ ನಟಿಸಿದ್ದ ಏಕ್ ಲವ್ ಯಾ ಸಿನಿಮಾವನ್ನು ರಕ್ಷಿತಾ ತಮ್ಮದೇ ರಕ್ಷಿತಾ ಫಿಲ್ಮಂ ಫ್ಯಾಕ್ಟರಿ ಬ್ಯಾನರ್‌ನಡಿ ನಿರ್ಮಾಣ ಮಾಡಿದ್ದರು. ಅರ್ಜುನ್ ಜನ್ಯ ಸಂಗೀತ, ಮಹೇನ್ ಸಿಂಹ ಕ್ಯಾಮರಾ ಕೈಚಳಕ ಏಕ್ ಲವ್ ಯಾ ಸಿನಿಮಾಕ್ಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News