ದುಪ್ಪಟ್ಟಾಯ್ತಾ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಸಂಭಾವನೆ!

ದಕ್ಷಿಣ ಭಾರತದ ಬಹು ಬೇಡಿಕೆಯ ನಟಿ ಈ ಕಿರಿಕ್ ಬೆಡಗಿ.

Last Updated : May 27, 2019, 02:19 PM IST
ದುಪ್ಪಟ್ಟಾಯ್ತಾ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ  ಸಂಭಾವನೆ! title=
File Image

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಹು ಬೇಡಿಕೆ ನಟಿಯಾಗಿ ಹೊರ ಹೊಮ್ಮಿರುವ ಕಿರಿಕ್ ಪಾರ್ಟಿಯ ಸಾನ್ವಿ, ಕೊಡಗಿನ ರಶ್ಮಿಕಾ ಮಂದಣ್ಣ ಅವರ ಸಂಭಾವನೆ ದುಪ್ಪಟ್ಟಾಗಿದೆ ಎಂದು ಹೇಳಲಾಗುತ್ತಿದೆ.

ತೆಲುಗಿನಲ್ಲಿ ತೆರೆಕಂಡ 'ಗೀತಾ ಗೋವಿಂದ' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸೌಂಡ್ ಮಾಡಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೆ ಟಾಲಿವುಡ್, ಕಾಲಿವುಡ್ ನಲ್ಲಿ ರಶ್ಮಿಕಾ ಸಖತ್ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ. ಏತನ್ಮಧ್ಯೆ ರಶ್ಮಿಕಾ ತಮ್ಮ ಸಂಭಾವನೆಯ ಗ್ರಾಫ್ ಕೂಡ ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈವರೆಗೂ ಸಿನಿಮಾ ಒಂದಕ್ಕೆ 40 ಲಕ್ಷ ರೂ. ಸಂಭಾವನೆ ಪಡೆಯುತ್ತಿದ್ದ ರಶ್ಮಿಕಾ ಇದೀಗ ತಮ್ಮ ಸಂಭಾವನೆಯ ಗ್ರಾಫ್ ಅನ್ನು 80 ಲಕ್ಷ ರೂ.ಗೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಕನ್ನಡದಲ್ಲಿ ಕಿರಿಕ್ ಪಾರ್ಟಿ ಸಿನಿಮಾದಿಂದ ಜನಪ್ರಿಯತೆ ಪಡೆದ ನಟಿ ರಶ್ಮಿಕಾ ಮಂದಣ್ಣ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಂತಹ ಅಗ್ರ ನಾಯಕರೊಂದಿಗೆ ಅಭಿನಯಿಸಿದರು. ಕರುನಾಡಲ್ಲಿ ಮಾತ್ರವಲ್ಲದೆ ತೆಲುಗಿನಲ್ಲಿಯೂ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದರು. 

ಹೀಗೆ ದಕ್ಷಿಣ ಭಾರತದಲ್ಲಿ ತನ್ನದೇ ಛಾಪು ಮೂಡಿಸಿರುವ ರಶ್ಮಿಕಾ ಬಾಲಿವುಡ್ ನಲ್ಲೂ ಅಭಿನಯಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ರಶ್ಮಿಕಾ ಬಾಲಿವುಡ್ ಗೆ ಪದಾರ್ಪಣೆ ಮಾಡುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಂದಿಲ್ಲ.

Trending News