Devara release date : ಜ್ಯೂ. ಎನ್‌ಟಿಆರ್‌ ನಟನೆಯ ʼದೇವರʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌..!

Devara movie release date : ಕೊರಟಾಲ ಶಿವ ನಿರ್ದೇಶನದ ಜೂ. ಎನ್‌ಟಿಆರ್ ಅಭಿನಯದ ಬಹುನಿರೀಕ್ಷಿತ ದೇವರ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಚಿತ್ರತಂಡ ಸಿನಿಮಾದ ಅಧಿಕೃತ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ.. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ..

Written by - Krishna N K | Last Updated : Feb 16, 2024, 06:49 PM IST
  • ಜೂ. ಎನ್‌ಟಿಆರ್ ಅಭಿನಯದ ಬಹುನಿರೀಕ್ಷಿತ ಚಿತ್ರ ದೇವರ
  • 'ದೇವರ' ಸಿನಿಮಾದ ಮೇಲೆ ಭಾರೀ ನಿರೀಕ್ಷೆಗಳಿವೆ
  • ಚಿತ್ರತಂಡ ಸಿನಿಮಾದ ಅಧಿಕೃತ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ
Devara release date : ಜ್ಯೂ. ಎನ್‌ಟಿಆರ್‌ ನಟನೆಯ ʼದೇವರʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌..! title=

Jr NTR Devara movie : ಕೊರಟಾಲ ಶಿವ ನಿರ್ದೇಶನದಲ್ಲಿ ಜೂನಿಯರ್‌ ಎನ್‌ಟಿಆರ್‌ ಅಭಿನಯದ 'ದೇವರ' ಸಿನಿಮಾದ ಮೇಲೆ ಭಾರೀ ನಿರೀಕ್ಷೆಗಳಿವೆ. ಅಲ್ಲದೆ, ಆರ್‌ಆರ್‌ಆರ್‌ ಸಿನಿಮಾ ಹಿಟ್‌ ಬಳಿಕ ಎನ್‌ಟಿಆರ್‌ ಈ ಚಿತ್ರದ ಮೂಲಕ ತೆರೆ ಮೇಲೆ ಬರಲು ರೆಡಿಯಾಗಿದ್ದು, ಕುತೂಹಲ ಹೆಚ್ಚಿಸಿದೆ. ಸಧ್ಯ ಮಾಸ್ ಎಂಟರ್‌ಟೈನರ್ ದೇವರ ಚಿತ್ರದ ಬಿಡುಗಡೆ ದಿನಾಂಕ್‌ ರಿವೀಲ್‌ ಆಗಿದೆ.

ಹೌದು.. ದೇವರ ಚಿತ್ರದ ಮೊದಲ ಭಾಗ ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ಈ ಚಿತ್ರದ ಶೂಟಿಂಗ್, ವಿಎಫ್‌ಎಕ್ಸ್ ಕೆಲಸಗಳು ಬಾಕಿ ಇದ್ದು ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಸಿನಿಮಾದ ರಿಲೀಸ್‌ ಡೇಟ್‌ ಮುಂದೂಡಲ್ಪಡುತ್ತದೆ ಎಂಬ ಮಾತು ಕೇಳಿ ಬಂದಿತ್ತು. 

 
 
 
 

 
 
 
 
 
 
 
 
 
 
 

A post shared by Jr NTR (@jrntr)

ಇದನ್ನೂ ಓದಿ: ಹೃದಯಾಘಾತದಿಂದ ಖ್ಯಾತ ಹಿರಿಯ ನಟಿ ಕವಿತಾ ಚೌಧರಿ ನಿಧನ..!

ಸಧ್ಯ ಚಿತ್ರತಂಡ ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಸಿನಿಮಾದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ದೇವರ ಚಿತ್ರ ಅಕ್ಟೋಬರ್ 10 ರಂದು ಬಿಡುಗಡೆಯಾಗಲಿದ್ದು, ದಸರಾ ಹಬ್ಬದಂದು ದೇವರ ಅಬ್ಬರ ಶುರುವಾಗಲಿದೆ ಎಂದು ತಂಡ ಮಾಹಿತಿ ನೀಡಿದೆ. 

ಇನ್ನು ಹೊಸ ಪೋಸ್ಟರ್‌ನಲ್ಲಿ, ಜೂನಿಯರ್ ಎನ್‌ಟಿಆರ್ ತುಂಬಾ ಪವರ್‌ಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ಕೊನೆಗೂ ತಮ್ಮ ನೆಚ್ಚಿನ ನಟನ ಸಿನಿಮಾ ಬಿಡುಗಡೆ ದಿನಾಂಕ ನಿಗದಿಯಾಗಿದ್ದಕ್ಕೆ ಫುಲ್‌ ಖುಷಿಯಾಗಿದ್ದಾರೆ. ಕೊರಟಾಲ ಶಿವ ನಿರ್ದೇಶನಕ ದೇವರ ಸಿನಿಮಾದಲ್ಲಿ, ಜೂ. ಎನ್‌ಟಿಆರ್‌ಗೆ ಜೊತೆಯಾಗಿ ಜಾನ್ವಿ ಕಪೂರ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಮುಖ್ಯ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News