ಮೊದಲ ವಾರ 100 ಕೋಟಿ ಕ್ಲಬ್‌ ಸೇರಿದ ಕಾಟೇರ ಚಿತ್ರ: ವಿದೇಶದಲ್ಲೂ ಡಿಬಾಸ್‌ ಹವಾ!

Kaatera First Week Collection: ಸ್ಯಾಂಡಲ್‌ವುಡ್‌ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಮೊದಲ ವಾದರಲ್ಲಿಯೇ 100 ಕೋಟಿ ರುಪಾಯಿ ಕ್ಲಬ್‌ ಸೇರಿ, ರಾಜ್ಯ, ನೆರೆಯ ರಾಜ್ಯದಲ್ಲಿ ಮಾತ್ರವಲ್ಲದೇ, ಇದೀಗ ವಿದೇಶದಲ್ಲಿಯೂ ಚಿತ್ರದ ಅಬ್ಬರಿಸೋಕೆ ಸಜ್ಜಾಗುತ್ತಿದೆ.

Written by - Zee Kannada News Desk | Last Updated : Jan 5, 2024, 10:28 AM IST
  • ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹುನಿರೀಕ್ಷಿತ ಕಾಟೇರ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ.
  • ಕಾಟೇರ ಚಿತ್ರದಲ್ಲಿ ನಟ ದರ್ಶನ್‌ ಅಭಿನಯದಿಂದ ಹವಾ ಜೋರಾಗಿದ್ದು, ಕರ್ನಾಟಕದಲ್ಲೇ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ರೂಪಾಯಿ ಹಣ ಹರಿದು ಬರುತ್ತಿದೆ.
  • ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದ್ದು, ಚಿತ್ರ ರಿಲೀಸ್‌ ಆದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು.
ಮೊದಲ ವಾರ 100 ಕೋಟಿ ಕ್ಲಬ್‌ ಸೇರಿದ ಕಾಟೇರ ಚಿತ್ರ: ವಿದೇಶದಲ್ಲೂ ಡಿಬಾಸ್‌ ಹವಾ! title=

Kaatera First Week Box Office Collection: ರಾಜ್ಯದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹುನಿರೀಕ್ಷಿತ ಕಾಟೇರ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ಮೊನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು ದರ್ಶನ್‌ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್‌ ಡಿಬಾಸ್‌ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.

ಕಾಟೇರ ಚಿತ್ರದಲ್ಲಿ ನಟ ದರ್ಶನ್‌ ಅಭಿನಯದಿಂದ ಹವಾ ಜೋರಾಗಿದ್ದು, ಕರ್ನಾಟಕದಲ್ಲೇ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ರೂಪಾಯಿ ಹಣ ಹರಿದು ಬರುತ್ತಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಜೊತೆಗೆ ನೆರೆಯ ರಾಜ್ಯದಲ್ಲೂ ಕಾಟೇರ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಗೋವಾ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಚಿತ್ರ ಬಿಡುಗಡೆಯಾಗಿದ್ದು, ಅಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಥಿಯೇಟರ್ ಆಗಮಿಸಿದ್ದಾರೆ. 

ಇದನ್ನೂ ಓದಿ: ಯಶ್‌ ಬರ್ತ್‌ಡೇ ಹಿನ್ನಲೆ ಫ್ಯಾನ್ಸ್‌ಗೆ ಶಾಕಿಂಗ್‌ ನ್ಯೂಸ್:‌ ರಾಕಿಂಗ್‌ ಸ್ಟಾರ್‌ ಬರೆದ ಪತ್ರ!

ಸದ್ಯ ಕಾಟೇರ ಚಿತ್ರ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದ್ದು, ಈ ಕುರಿತಂತೆ ದರ್ಶನ್ ಅಭಿಮಾನಿಗಳು ಪೋಸ್ಟ್ ಮಾಡಿದ್ದು, ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು  ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದ್ದು, ಚಿತ್ರ ರಿಲೀಸ್‌ ಆದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇದೀಗ ಕಾಟೇರ ಸಿನಿಮಾಗೆ ಅತ್ಯುತ್ತಮ ರೆಸ್ಪಾನ್ಸ್ ಬಂದಿರುವ ಹಿನ್ನೆಲೆಯಲ್ಲಿ ವಿದೇಶದಲ್ಲೂ ಚಿತ್ರವನ್ನು ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News