ಲಿಯೋ OTT ರಿಲೀಸ್‌ ಡೇಟ್‌ ಫಿಕ್ಸ್‌..! ಈ ಪ್ಲಾಟ್‌ಫಾರ್ಮ್‌ನಲ್ಲಿ ದಳಪತಿ ಸಿನಿಮಾ ಸ್ಟ್ರೀಮಿಂಗ್‌

Leo OTT Release Date: ‘ಲಿಯೋ’ ಸಿನಿಮಾದ ಒಟಿಟಿ ರಿಲೀಸ್ ಬಗ್ಗೆ ಹೊಸ ಮಾಹಿತಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

Written by - Savita M B | Last Updated : Oct 27, 2023, 05:11 PM IST
  • ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್ ಕಾಂಬಿನೇಷನ್‌ನ ಎರಡನೇ ಸಿನಿಮಾ 'ಲಿಯೋ'
  • 'ಲಿಯೋ' ಚಿತ್ರ ಬಿಡುಗಡೆಯಾದ ಮೊದಲ ದಿನವೇ 140 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ
  • ಈ ವೇಳೆ ಲಿಯೋ ಒಟಿಟಿ ರಿಲೀಸ್ ಡೇಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಹರಿದಾಡುತ್ತಿದೆ.
ಲಿಯೋ OTT ರಿಲೀಸ್‌ ಡೇಟ್‌ ಫಿಕ್ಸ್‌..! ಈ ಪ್ಲಾಟ್‌ಫಾರ್ಮ್‌ನಲ್ಲಿ ದಳಪತಿ ಸಿನಿಮಾ ಸ್ಟ್ರೀಮಿಂಗ್‌  title=

Vijay Thalapathy: ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್ ಕಾಂಬಿನೇಷನ್‌ನ ಎರಡನೇ ಸಿನಿಮಾ 'ಲಿಯೋ' ವಿಶ್ವದಾದ್ಯಂತ ದಳಪತಿ ಅಭಿಮಾನಿಗಳ ಭಾರಿ ನಿರೀಕ್ಷೆಯ ನಡುವೆ ಅಕ್ಟೋಬರ್ 19 ರಂದು ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಲನಚಿತ್ರವಾಗಿ ಬಿಡುಗಡೆಯಾಯಿತು, 

ಲಿಯೋ ಬಾಕ್ಸ್ ಆಫೀಸ್ ವಿವರಗಳು: 
'ಲಿಯೋ' ಚಿತ್ರ ಬಿಡುಗಡೆಯಾದ ಮೊದಲ ದಿನವೇ 140 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಒಂದು ವಾರದ ಅಂತ್ಯಕ್ಕೆ 461 ಕೋಟಿ ಕಲೆಕ್ಷನ್ ಮಾಡಿದೆ ಎಂದು 'ಲಿಯೋ' ನಿರ್ಮಾಪಕ 7 ಸ್ಕ್ರೀನ್ ಸ್ಟುಡಿಯೋಸ್ ಅಧಿಕೃತವಾಗಿ ಘೋಷಿಸಿದೆ. ಆದರೆ, 6 ದಿನದಲ್ಲಿ ಚಿತ್ರ 500 ಕೋಟಿ ತಲುಪಿದೆ ಎಂಬ ವರದಿ ಸುಳ್ಳಲ್ಲ ಎಂದು ತಿಳಿದು ಬಂದಿದೆ. ಅದೇ ರೀತಿ ಅತಿ ಕಡಿಮೆ ದಿನಗಳಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆಯನ್ನು 'ಲಿಯೋ' ನಿರ್ಮಿಸಿದೆ.

ಅದೇ ರೀತಿ ಕಳೆದೆರಡು ದಿನಗಳಿಂದ ‘ಲಿಯೋ’ ಚಿತ್ರ ಕಡಿಮೆ ಕಲೆಕ್ಷನ್‌ ಮಾಡುತ್ತಿದೆ ಎಂಬ ಒಂದಷ್ಟು ಮಾಹಿತಿ ಹೊರ ಬಂದಿದ್ದು, ಕೆಲವು ಥಿಯೇಟರ್ ಮಾಲೀಕರು ಲಿಯೋ ಚಿತ್ರದಿಂದ ಯಾವುದೇ ಲಾಭ ಪಡೆದುಕೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಚಿತ್ರದ ಬಗ್ಗೆ ನಕಾರಾತ್ಮಕ ವಿಮರ್ಶೆಗಳು ಮತ್ತು ಕೆಲವು ವೆಬ್‌ಸೈಟ್‌ಗಳಲ್ಲಿ ಚಲನಚಿತ್ರವನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡಿರುವುದು ಚಿತ್ರದ ಕಲೆಕ್ಷನ್ ಮೇಲೆ ಪರಿಣಾಮ ಬೀರಿತು.

ಲಿಯೋ ಒಟಿಟಿ ಬಿಡುಗಡೆ ದಿನಾಂಕ:
ಈ ವೇಳೆ ಲಿಯೋ ಒಟಿಟಿ ರಿಲೀಸ್ ಡೇಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಹರಿದಾಡುತ್ತಿದೆ. 'ಲಿಯೋ' ಚಿತ್ರದ ಡಿಜಿಟಲ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿರುವುದರಿಂದ, ನವೆಂಬರ್ 21 ರಂದು ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಲಿಯೋ ಚಿತ್ರ ಸ್ಟ್ರೀಮ್ ಆಗಲಿದೆ ಎಂದು ಹೇಳಲಾಗಿದೆ. ಈ ಮಾಹಿತಿ ಎಷ್ಟರ ಮಟ್ಟಿಗೆ ನಿಜ ಎಂಬುದು ಸದ್ಯದಲ್ಲೇ ತಿಳಿಯಲಿದೆ.

ಸುಮಾರು 300 ಕೋಟಿ ಬಜೆಟ್‌ನಲ್ಲಿ ತಯಾರಾದ 'ಲಿಯೋ' ಚಿತ್ರದಲ್ಲಿ ವಿಜಯ್‌ಗೆ ಜೋಡಿಯಾಗಿ ನಟಿ ತ್ರಿಶಾ ನಟಿಸಿದ್ದರು. ಜೊತೆಗೆ ಸಂಜಯ್ ದತ್, ಅರ್ಜುನ್, ಗೌತಮ್ ವಾಸುದೇವ್ ಮೆನನ್, ಮಿಶ್ಕಿನ್, ಪ್ರಿಯಾ ಆನಂದ್ ಸೇರಿದಂತೆ ಹಲವರು ನಟಿಸಿದ್ದಾರೆ. ಅನಿರುದ್ಧ್ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳು ಮತ್ತು ಬಿಜಿಎಂ ಅಭಿಮಾನಿಗಳ ಗಮನ ಸೆಳೆದಿರುವುದು ಗಮನಾರ್ಹ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News