ಮೆಗಾ ಪ್ರಿನ್ಸ್ ವರುಣ್ ತೇಜ್ 14ನೇ ಸಿನಿಮಾಗೆ ʼಮಟ್ಕಾʼ ಟೈಟಲ್ ಫಿಕ್ಸ್..!

Varun tej matka movie : ವರುಣ್ ತೇಜ್ ನಟನೆಯ 14ನೇ ಸಿನಿಮಾಗೆ ಮಟ್ಕಾ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದು ಜೂಟಾಟದ ಕಥೆಯಾಧಾರಿತ ಸಿನಿಮಾ. 1958ರಿಂದ 82ರ ಅವಧಿಯಲ್ಲಿ ವೈಜಾಗ್ ನಲ್ಲಿ ನಡೆದ ಸತ್ಯ ಘಟನೆಯಾಧಾರಿತ ಚಿತ್ರವಾಗಿದೆ.

Written by - Krishna N K | Last Updated : Jul 27, 2023, 06:25 PM IST
  • ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಸುಪುತ್ರ ವರುಣ್ ತೇಜ್.
  • ವರುಣ್ ತೇಜ್ ನಟನೆಯ 14ನೇ ಸಿನಿಮಾದ ಮುಹೂರ್ತ ಸಮಾರಂಭ ಹೈದರಾಬಾದ್ ನಡೆಯಿತು.
  • ವರುಣ್ ತೇಜ್ ನಟನೆಯ 14ನೇ ಸಿನಿಮಾಗೆ ಮಟ್ಕಾ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.
ಮೆಗಾ ಪ್ರಿನ್ಸ್ ವರುಣ್ ತೇಜ್ 14ನೇ ಸಿನಿಮಾಗೆ ʼಮಟ್ಕಾʼ ಟೈಟಲ್ ಫಿಕ್ಸ್..! title=

Matka telugu movie : ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಸುಪುತ್ರ ವರುಣ್ ತೇಜ್ ನಟನೆಯ 14ನೇ ಸಿನಿಮಾದ ಮುಹೂರ್ತ ಸಮಾರಂಭ ಹೈದರಾಬಾದ್ ನಲ್ಲಿಂದು ಅದ್ಧೂರಿಯಾಗಿ ನೆರವೇರಿದೆ. ನಿರ್ದೇಶಕ ಮಾರುತಿ ಕ್ಯಾಮೆರಾಗೆ ಚಾಲನೆ ಕೊಟ್ಟಿದ್ದಾರೆ. ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಹರೀಶ್ ಶಂಕರ್ ಮಟ್ಕಾ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.

ವರುಣ್ ತೇಜ್ ನಟನೆಯ 14ನೇ ಸಿನಿಮಾಗೆ ಮಟ್ಕಾ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದು ಜೂಟಾಟದ ಕಥೆಯಾಧಾರಿತ ಸಿನಿಮಾ. 1958ರಿಂದ 82ರ ಅವಧಿಯಲ್ಲಿ ವೈಜಾಗ್ ನಲ್ಲಿ ನಡೆದ ಸತ್ಯ ಘಟನೆಯಾಧಾರಿತ ಚಿತ್ರವಾಗಿದೆ. ಬರೋಬ್ಬರಿ 24 ವರ್ಷದ ಹಿಂದಿನ ಕಥೆಯಾಧಾರಿತ ಸಿನಿಮಾವಾಗಿರುವ ಮಟ್ಕಾದಲ್ಲಿ ವರುಣ್ ತೇಜ್ ನಾಲ್ಕು ವಿಭಿನ್ನ ಶೇಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೆಗಾ ಪ್ರಿನ್ಸ್ ಸಿನಿಕರಿಯರ್ ನ ಅತಿ ಹೆಚ್ಚು ಬಜೆಟ್‌ನ ಚಿತ್ರ ಎಂಬ ನಿರೀಕ್ಷೆ ಹುಟ್ಟಿಸಿದೆ. 

ಇದನ್ನೂ ಓದಿ: ಮೆಗಾಸ್ಟಾರ್ 'ಭೋಲಾ ಶಂಕರ್' ಟ್ರೈಲರ್ ರಿಲೀಸ್‌..! ಚಿರು ಮಾಸ್‌ ಆಕ್ಷನ್‌ಗೆ ಫ್ಯಾನ್ಸ್‌ ಫಿದಾ

ಫಲಾಸ ಸಿನಿಮಾ ಖ್ಯಾತಿಯ ಕರುಣ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಟ್ಕಾ ಸಿನಿಮಾದಲ್ಲಿ ನಾಯಕಿಯಾಗಿ ಮೀನಾಕ್ಷಿ ಚೌಧರಿ ನಟಿಸುತ್ತಿದ್ದು, ನವೀನ್ ಚಂದ್ರ, ಕನ್ನಡದ ಕಿಶೋರ್, ಅಜಯ್ ಘೋಷ್, ಮೈಮ್ ಗೋಪಿ, ರೂಪಲಕ್ಷ್ಮಿ, ವಿಜಯರಾಮ ರಾಜು, ಜಗದೀಶ್, ರಾಜ್ ತಿರಂದಾಸ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಇನ್ನು, ಮಟ್ಕಾದ ಸ್ಪೆಷಲ್ ನಂಬರ್ ಗೆ ಬಾಲಿವುಡ್ ಬ್ಯೂಟಿ ನೋರಾ ಫತೇಹಿ ಮೆಗಾ ಪ್ರಿನ್ಸ್ ವರುಣ್ ತೇಜ್ ಜೊತೆ ಸೊಂಟ ಬಳುಕಿಸಲಿದ್ದಾರೆ.

ವೈರಾ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್‌ನಡಿಯಲ್ಲಿ ಮೋಹನ್ ಚೆರುಕುರಿ ಮತ್ತು ಡಾ ವಿಜೇಂದರ್ ರೆಡ್ಡಿ ಟೀಗಾಲ ಅದ್ಧೂರಿಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಜಿ ವಿ ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಪ್ರಿಯ ಸೇಠ್ ಛಾಯಾಗ್ರಹಣ, ಕಾರ್ತಿಕ್ ಶ್ರೀನಿವಾಸ್ ಆರ್ ಸಂಕಲನ, ಸುರೇಶ್ ಕಲಾ ನಿರ್ದೇಶನವಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಮಟ್ಕಾ ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News