ಪುಷ್ಪಾ 2 ವಿಲನ್‌ ಅನಸೂಯಾ ಫಸ್ಟ್ ಲುಕ್ ಔಟ್‌..! ರಗಡ್‌ ಲುಕ್‌ನಲ್ಲಿ ಜಬರದಸ್ತ್‌ ಆ್ಯಂಕರ್ 

Pushpa 2 updates : ಆಂಕರ್‌, ನಟಿ ಅನಸೂಯ ಹುಟ್ಟು ಹಬ್ಬದ ಪ್ರಯುಕ್ತ ಪುಷ್ಪ-2 ಚಿತ್ರತಂಡ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಈ ಹಿಂದೆ ಪುಷ್ಪ ಚಿತ್ರದಲ್ಲಿ ದಾಕ್ಷಾಯಣಿ ಪಾತ್ರದ ಮೂಲಕ ಜನಮನ ಸೆಳೆದಿದ್ದ ಈ ಸುಂದರಿ ಇದೀಗ ಪುಷ್ಪ-2 ಚಿತ್ರದಲ್ಲಿ ಇನ್ನಷ್ಟು ಮಾಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ..

Written by - Krishna N K | Last Updated : May 16, 2024, 05:24 PM IST
    • ಅಲ್ಲು ಅರ್ಜುನ್ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ಪುಷ್ಪ 2.
    • ಕ್ರಿಯೇಟಿವ್ ಡೈರೆಕ್ಟರ್ ಸುಕುಮಾರ್ ನಿರ್ದೇಶನದ ಪುಷ್ಪಾ 2 ಸಿನಿಮಾ.
    • ಅನಸೂಯ ಫಸ್ಟ್‌ ಲುಕ್‌ ಹಂಚಿಕೊಂಡ ಪುಷ್ಪ-2 ಚಿತ್ರತಂಡ.
ಪುಷ್ಪಾ 2 ವಿಲನ್‌ ಅನಸೂಯಾ ಫಸ್ಟ್ ಲುಕ್ ಔಟ್‌..! ರಗಡ್‌ ಲುಕ್‌ನಲ್ಲಿ ಜಬರದಸ್ತ್‌ ಆ್ಯಂಕರ್  title=

Pushpa 2 Anasuya : ರಾಷ್ಟ್ರ ಪ್ರಶಸ್ತಿ ವಿಜೇತ ಮತ್ತು ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ಪುಷ್ಪ 2. ಕ್ರಿಯೇಟಿವ್ ಡೈರೆಕ್ಟರ್ ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಪುಷ್ಪಾ ಚಿತ್ರದ ಮುಂದುವರಿದ ಭಾಗವಾಗಿ ಪುಷ್ಪ 2. ಮೊದಲ ಭಾಗದ ಯಶಸ್ಸಿನ ನಂತರ ಪುಷ್ಪ 2 ಬಗ್ಗೆ ನಿರೀಕ್ಷೆಗಳು ಹೆಚ್ಚಿವೆ. ಇದರೊಂದಿಗೆ ಕಾಲಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಸಿನಿಮಾದ ಅಪ್ ಡೇಟ್‌ಗಳು ಬನ್ನಿ ಅಭಿಮಾನಿಗಳ ಕುತೂಹಲ ಕೆರಳಿಸುತ್ತಿವೆ.

ಅನಸೂಯ ಹುಟ್ಟು ಹಬ್ಬದ ಪ್ರಯುಕ್ತ ಪುಷ್ಪ-2 ಚಿತ್ರತಂಡ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಈ ಹಿಂದೆ ಪುಷ್ಪ ಚಿತ್ರದಲ್ಲಿ ದಾಕ್ಷಾಯಣಿ ಪಾತ್ರದ ಮೂಲಕ ಜನಮನ ಸೆಳೆದಿದ್ದ ಈ ಸುಂದರಿ ಇದೀಗ ಪುಷ್ಪ-2 ಚಿತ್ರದಲ್ಲಿ ಇನ್ನಷ್ಟು ಮಾಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಈ ಪೋಸ್ಟರ್ ನೋಡಿದರೆ ತಿಳಿಯುತ್ತೆ. ಸಧ್ಯ ಈ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಫಸ್ಟ್‌ ಟೈಮ್‌ ಬಾಯ್‌ ಫ್ರೇಂಡ್‌ ಜೊತೆ ಕಾಣಿಸಿಕೊಂಡ ಮೃಣಾಲ್‌..! ಯಾರ್‌ ಗೊತ್ತಾ ಆ ಹುಡುಗ..?

ಸುಕುಮಾರ್ ರೈಟಿಂಗ್ಸ್ ಜೊತೆಗೆ ಮೈತ್ರಿ ಮೂವಿ ಮೇಕರ್ಸ್ ಅಸೋಸಿಯೇಷನ್ ​​ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಅನಸೂಯಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಫಹದ್ ಫಾಜಿಲ್, ಧನಂಜಯ್‌ ಮತ್ತು ಸುನೀಲ್ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಚಿತ್ರವು ಆಗಸ್ಟ್ 15, 2024 ರಂದು ಸ್ವಾತಂತ್ರ್ಯ ದಿನಾಚರಣೆಯಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಪುಷ್ಪ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ಅಲ್ಲು ಅರ್ಜುನ್ ತಮ್ಮ ರೇಂಜ್ ಅನ್ನು ದುಪ್ಪಟ್ಟು ಮಾಡಿಕೊಂಡಿದ್ದಾರೆ. ದಕ್ಷಿಣದ ಪ್ರೇಕ್ಷಕರನ್ನು ಹೊರತುಪಡಿಸಿ, ಉತ್ತರದ ಪ್ರೇಕ್ಷಕರನ್ನೂ ರಂಜಿಸಿದ ಬನ್ನಿ ಭಾರತದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆ. 

ಇದನ್ನೂ ಓದಿ:ಕಂಗನಾ ನಟನೆಯ ಬಹುನಿರೀಕ್ಷಿತ 'ಎಮರ್ಜೆನ್ಸಿ' ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಫೋನ್

ಈ ಕ್ರಮದಲ್ಲಿ ಪುಷ್ಪ-2 ಚಿತ್ರಕ್ಕೆ ಅಲ್ಲು ಅರ್ಜುನ್ ಭಾರೀ ಪ್ರಮಾಣದಲ್ಲಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಸಿನಿಮಾಗೆ ಬನ್ನಿ ಸಂಭಾವನೆ ಎಷ್ಟು ಎಂಬುದು ಈಗ ಟಾಕ್ ಆಫ್ ದಿ ಟೌನ್ ಆಗಿದೆ. ಅಲ್ಲು ಅರ್ಜುನ್ ಈ ಚಿತ್ರಕ್ಕಾಗಿ 150 ರಿಂದ 170 ಕೋಟಿ ತೆಗೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News