ಪುಷ್ಪ..ಪುಷ್ಪ…ಬಂದ ಪುಷ್ಪರಾಜ್..ಕಾರ್ಮಿಕರ ದಿನಕ್ಕೆ ಪುಷ್ಪ 2 ಮೊದಲ ಹಾಡು ರಿಲೀಸ್

Pushpa Sequel First Song Release: ಪುಷ್ಪ ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಕಂಠ ನೀಡಿದ್ದಾರೆ. 

Written by - Yashaswini V | Last Updated : May 2, 2024, 08:07 AM IST
  • ಪುಷ್ಪ ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ.
  • ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ.
  • ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಕಂಠ ನೀಡಿದ್ದಾರೆ.
ಪುಷ್ಪ..ಪುಷ್ಪ…ಬಂದ ಪುಷ್ಪರಾಜ್..ಕಾರ್ಮಿಕರ ದಿನಕ್ಕೆ ಪುಷ್ಪ 2 ಮೊದಲ ಹಾಡು ರಿಲೀಸ್ title=

Pushpa Sequel First Song Release: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ಪುಷ್ಪ 2 ಸಿನಿಮಾದ (Pushpa 2 Movie) ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಸೇರಿ 6 ಭಾಷೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಸಾಮಾನ್ಯ ಕಾರ್ಮಿಕ ಪುಷ್ಪರಾಜ್ ಶ್ರೀಮಂತನಾಗಿ ಬೆಳೆದ ರೀತಿಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

ಪುಷ್ಪ ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ (Rock Star Devisree Prasad) ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ (Vijay Prakash) ಕಂಠ ನೀಡಿದ್ದಾರೆ. 

ಇದನ್ನೂ ಓದಿ- Aditirao Hydari : ಮೋಡಿಮಾಡುವ ಫೋಟೋಸ್ ನಲ್ಲಿ ಅದಿತಿ, ವಿಭಿನ್ನ ರೀತಿಯಲ್ಲಿ ಸೌಂದರ್ಯದ ಸೆರೆ

ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ (Allu Arjun) ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ (Maitri Movie Makers) ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಇದನ್ನೂ ಓದಿ- ರತ್ನಂ ವಿಮರ್ಶೆ : ಸಿನಿಮಾ ಹೇಳಲು ಹೊರಟಿರುವ ಕಥೆ ಪುರಾತನವಾದದ್ದು

ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ (Dolly Dhananjay) ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ (Pan India)  ಮಾತ್ರವಲ್ಲದೆ ಪ್ಯಾನ್ ವರ್ಲ್ಡ್  (Pan World) ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News