ನಟಿ ರಶ್ಮಿಕಾ ಮಂದಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಪ್ರಮುಖ ಆರೋಪಿ ಬಂಧನ

Rashmika deepfake video case : ರಶ್ಮಿಕಾ ಡೀಪ್ ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಇದೀಗ ವಿಡಿಯೋ ಕ್ರಿಯೇಟ್‌ ಮಾಡಿದ್ದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ ಓದಿ..

Written by - Krishna N K | Last Updated : Jan 20, 2024, 05:30 PM IST
  • ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಪ್ರಕರಣ
  • ವಿಡಿಯೋ ಕ್ರಿಯೇಟ್‌ ಮಾಡಿದ್ದ ಪ್ರಮುಖ ಆರೋಪಿ ಬಂಧನ
  • ದೆಹಲಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು
ನಟಿ ರಶ್ಮಿಕಾ ಮಂದಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಪ್ರಮುಖ ಆರೋಪಿ ಬಂಧನ title=

Rashmika Mandanna : ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವಿಡಿಯೋ ನೋಡಿ ಸ್ವತಃ ರಶ್ಮಿಕಾ ಶಾಕ್‌ ಆಗಿದ್ದರು. ಅಲ್ಲದೆ, ಹಲವು ಹಿರಿಯ ನಟ ನಟಿಯರು ಈ ಪ್ರಕರಣದ ಕುರಿತು ಧ್ವನಿ ಎತ್ತಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಸಧ್ಯ ಪ್ರಕರಣ ಪ್ರಮುಖ ಆರೋಪಿ ಬಂಧನವಾಗಿದೆ ಎಂದು ತಿಳಿದು ಬಂದಿದೆ.

ಹೌದು.. ವಿಡಿಯೋ ರಚಿಸಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಸೃಷ್ಟಿಸಿದ ಪ್ರಮುಖ ಆರೋಪಿಯನ್ನು ಆಂಧ್ರಪ್ರದೇಶದ ಮೂಲದವನು ಎಂದು ಪತ್ತೆ ಹಚ್ಚಿದ ದೆಹಲಿ ಪೊಲೀಸರು, ಆಂಧ್ರಪ್ರದೇಶಕ್ಕೆ ತೆರೆಳಿ ಆರೋಪಿಗಳನ್ನು ಬಂಧಿಸಿರುವಂತಿದೆ. 

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೊ ದೇಶಾದ್ಯಂತ ವಿವಾದವನ್ನು ಸೃಷ್ಟಿಸಿತು. ಕಳೆದ ವರ್ಷ ನವೆಂಬರ್‌ನಲ್ಲಿ ರಶ್ಮಿಕಾ ಅವರ ವೀಡಿಯೊ ವೈರಲ್ ಆಗಿತ್ತು. ಜರಾಪಟೇಲ್ ವೀಡಿಯೊಗೆ ರಶ್ಮಿಕಾ ಅವರ ಮುಖವನ್ನು ಮಾರ್ಫಿಂಗ್ ಮಾಡಲಾಗಿತ್ತು. ಆ ವಿಡಿಯೋ ನೋಡಿದ ಹಲವರು ಇದು ರಶ್ಮಿಕಾ ಅವರ ವಿಡಿಯೋ ಎಂದುಕೊಂಡಿದ್ದರು. ನಂತರ ಅದು ಎಐ ಮಾರ್ಫ್ ಅಂತ ತಿಳಿದು ಬಂದಿತ್ತು.

ಚಿತ್ರರಂಗದ ಹಿರಿಯ ನಟ ನಟಿಯರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೆ ದೆಹಲಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 465 (ನಕಲಿ) ಮತ್ತು 469 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಸಿ ಮತ್ತು 66 ಇ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿ ಪೊಲೀಸರು, ಬಿಹಾರ ಮೂಲದ 19 ವರ್ಷದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ತನ್ನ ಸೋಷಿಯಲ್‌ ಮೀಡಿಯಾ ಖಾತೆಯಿಂದ ರಶ್ಮಿಕಾ ವಿಡಿಯೋ ಅಪ್‌ಲೋಡ್ ಮಾಡಿರುವುದು ಪೊಲೀಸರಿಗೆ ತಿಳಿದು ಬಂದಿದೆ.

ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್, ಕತ್ರಿನಾ ಕೈಫ್, ಕಾಜೋಲ್ ಸೇರಿದಂತೆ ಹಲವು ನಟಿಯರುವ ಡೀಪ್‌ ಫೇಕ್‌ ವಿಡಿಯೋಗಳು ಹೊರ ಬಂದಿದ್ದವು. ನಿನ್ನೆ ಸೋನುಸೂದ್ ಅವರ ವಿಡಿಯೋ ಕೂಡ ಬಿಡುಗಡೆಯಾಗಿದೆ. ತನ್ನ ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿ ಸೈಬರ್ ಕ್ರಿಮಿನಲ್‌ಗಳು ಹಣ ಕೇಳುತ್ತಿದ್ದಾರೆ, ದಯವಿಟ್ಟು ನಂಬಬೇಡಿ ಎಂದು ಸೋನುಸೂದ್ ವಿಡಿಯೋ ಹಂಚಿಕೊಂಡು, ಅಭಿಮಾನಿಗಳನ್ನು ಎಚ್ಚರಿಸಿದ್ದರು. 

ತಂತ್ರಜ್ಞಾನದ ಬೆಳವಣಿಗೆಯಲ್ಲಿ ಎಷ್ಟು ಅನುಕೂಲಗಳಿವೆಯೋ ಅಷ್ಟೇ ಅನಾನುಕೂಲಗಳೂ ಇವೆ. ಅದಕ್ಕೆ ಉದಾಹರಣೆ ಈ ಡೀಪ್‌ಫೇಕ್ ವಿಡಿಯೋ. ರಶ್ಮಿಕಾ ಅವರ ವೀಡಿಯೊ ಬಿಡುಗಡೆಯಾದ ನಂತರ, ಅನೇಕ ಸೆಲೆಬ್ರಿಟಿಗಳು ಇದಕ್ಕೆ ಪ್ರತಿಕ್ರಿಯಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಅಲ್ಲದೆ, ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಇದಕ್ಕೆ ಪ್ರತಿಕ್ರಿಯಿಸಿ, ಐಟಿ ಕಾಯ್ದೆಯಲ್ಲಿ ಕಟ್ಟುನಿಟ್ಟಿನ ನಿಬಂಧನೆಗಳನ್ನು ತರಲಾಗುವುದು ಎಂದು ಭರವಸೆ ನೀಡಿದ್ದರು.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News