ರಶ್ಮಿಕಾಗೆ ಡಿಸೆಂಬರ್ ತಿಂಗಳು ತುಂಬಾ ಸ್ಪೆಷಲ್ ಅಂತೆ, ಕಾರಣ ಕೂಡ ಅವರೇ ಹೇಳಿದ್ದಾರೆ ಕೇಳಿ

Rashmika Mandanna : ಸೌತ್‌ನ ಟಾಪ್ ನಟಿಯರಲ್ಲಿ ಒಬ್ಬರಾದ ರಶ್ಮಿಕಾ ಬಾಲಿವುಡ್‌ಗೂ ಕಾಲಿಡುತ್ತಿದ್ದಾರೆ. ಶೀಘ್ರದಲ್ಲೇ ಅವರು ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  

Written by - Chetana Devarmani | Last Updated : Aug 12, 2023, 07:04 AM IST
  • ಸೌತ್‌ನ ಟಾಪ್ ನಟಿಯರಲ್ಲಿ ಒಬ್ಬರಾದ ರಶ್ಮಿಕಾ
  • ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ಕಿರಿಕ್‌ ಬೆಡಗಿ
  • ರಶ್ಮಿಕಾಗೆ ಡಿಸೆಂಬರ್ ತಿಂಗಳು ತುಂಬಾ ಸ್ಪೆಷಲ್ ಅಂತೆ
ರಶ್ಮಿಕಾಗೆ ಡಿಸೆಂಬರ್ ತಿಂಗಳು ತುಂಬಾ ಸ್ಪೆಷಲ್ ಅಂತೆ, ಕಾರಣ ಕೂಡ ಅವರೇ ಹೇಳಿದ್ದಾರೆ ಕೇಳಿ  title=

Rashmika Mandanna Lucky Month : ನ್ಯಾಶನಲ್ ಕ್ರಶ್ ಎಂದೇ ಖ್ಯಾತಿ ಪಡೆದಿರುವ ನಟಿ ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳಿಗೆ ಕೊರತೆ ಇಲ್ಲ. ಸೌತ್‌ನ ಟಾಪ್ ನಟಿಯರಲ್ಲಿ ಒಬ್ಬರಾದ ರಶ್ಮಿಕಾ ಬಾಲಿವುಡ್‌ಗೂ ಕಾಲಿಡುತ್ತಿದ್ದಾರೆ. ಶೀಘ್ರದಲ್ಲೇ ಅವರು ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವರ್ಷದ ಡಿಸೆಂಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದ ಬಗ್ಗೆ ರಶ್ಮಿಕಾ ಇತ್ತೀಚೆಗೆ ಮಾತನಾಡಿದ್ದಾರೆ.

'ಅನಿಮಲ್' ಡಿಸೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಐದನೇ ಚಿತ್ರ.‌ ಡಿಸೆಂಬರ್ ತಿಂಗಳು ನನ್ನ ಪಾಲಿಗೆ ಯಾವತ್ತೂ ಅದೃಷ್ಟ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ನನ್ನ ಚೊಚ್ಚಲ ಚಿತ್ರ ಕಿರಿಕ್ ಪಾರ್ಟಿ, ಪುಷ್ಪ, ಚಮಕ್, ಅಂಜನಿ ಪುತ್ರ ಚಿತ್ರಗಳೆಲ್ಲ ಡಿಸೆಂಬರ್‌ನಲ್ಲಿ ಬಂದಿವೆ. ಈ ತಿಂಗಳಿನಲ್ಲಿ ಬಂದ ಎಲ್ಲಾ ಚಿತ್ರಗಳು ಸಾಕಷ್ಟು ಪ್ರೀತಿ ಪಡೆದಿವೆ. ಡಿಸೆಂಬರ್‌ನಲ್ಲಿ ಬಿಡುಗಡೆಯಾದ ನನ್ನ ಐದನೇ ಚಿತ್ರ ಅನಿಮಲ್‌. ಈ ಚಿತ್ರದ ಬಗ್ಗೆ ನಾನು ತುಂಬಾ ಉತ್ಸುಕಳಾಗಿದ್ದೇನೆ ಎಂದಿದ್ದಾರೆ. 

ಇದನ್ನೂ ಓದಿ: ಆಗಸ್ಟ್ 20ರಂದು ಬಿಡುಗಡೆಗೊಳ್ಳಲಿದೆ `ಚೋಳ’ ಟೀಸರ್!

ಅನಿಮಲ್ ಚಿತ್ರದಲ್ಲಿನ ಪಾತ್ರದ ಬಗ್ಗೆ ಮಾತನಾಡಿದ ರಶ್ಮಿಕಾ, 'ನನ್ನ ಈ ಚಿತ್ರವನ್ನು ಪ್ರೇಕ್ಷಕರು ವೀಕ್ಷಿಸಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ಅವರ ಪ್ರತಿಕ್ರಿಯೆಯನ್ನು ತಿಳಿಯಲು ನಾನು ತುಂಬಾ ಉತ್ಸುಕಳಾಗಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ತುಂಬಾ ವಿಭಿನ್ನವಾಗಿದೆ. ಈ ಹಿಂದೆ ಇಂತಹ ಪಾತ್ರದಲ್ಲಿ ನಟಿಸುತ್ತೇನೆ ಎಂದು ಊಹಿಸಿರಲಿಲ್ಲ. ವಿಮರ್ಶಕರು ಮತ್ತು ನನ್ನ ಅಭಿಮಾನಿಗಳು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ನಾನು ಕಾತುರದಿಂದ ಕಾಯುತ್ತಿರುವೆ ಎಂದು ಹೇಳಿದ್ದಾರೆ. 

ಅನಿಮಲ್ ಜೊತೆಗೆ ಪುಷ್ಪ 2 ನಲ್ಲಿ ರಶ್ಮಿಕಾ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೇ ರೇನ್‌ ಬೋ ಚಿತ್ರದಲ್ಲಿಯೂ ರಶ್ಮಿಕಾ ನಟಿಸಲಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆಯಾದ 'ಗುಡ್‌ಬೈ' ಚಿತ್ರದ ಮೂಲಕ ನಟಿ ತಮ್ಮ ಬಾಲಿವುಡ್ ಇನ್ನಿಂಗ್ಸ್ ಅನ್ನು ಪ್ರಾರಂಭಿಸಿದರು. ವಿಕಾಸ್ ಬಹ್ಲ್ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಕೂಡ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ:  ಸ್ಕಾಟ್​ಲೆಂಡ್​ನಲ್ಲಿ ಮಹೇಶ್ ಬಾಬು ಪುತ್ರಿ ಸಿತಾರಾ..ಪೋಟೋಸ್‌ ನೋಡಿ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News