IFFI Goa 2023: ಗೋವಾ ಫಿಲ್ಮ್‌ ಫೆಸ್ಟ್‌ನಲ್ಲಿ ಮಾಧುರಿ ದೀಕ್ಷಿತ್ ಗೆ ವಿಶೇಷ ಗೌರವ

IFFI Goa 2023: ಮಾಧುರಿ ದೀಕ್ಷಿತ್ ಅವರಿಗೆ 54 ನೇ IFFI ನಲ್ಲಿ ವಿಶೇಷ ಗೌರವ ನೀಡಲಾಯಿತು. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಮಾಧುರಿ ದೀಕ್ಷಿತ್ ಅವರನ್ನು ಟ್ವಿಟರ್‌ನಲ್ಲಿ ಅಭಿನಂದಿಸಿದ್ದಾರೆ.   

Written by - Chetana Devarmani | Last Updated : Nov 21, 2023, 12:21 PM IST
  • 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
  • ಮಾಧುರಿ ದೀಕ್ಷಿತ್ ಅವರಿಗೆ ವಿಶೇಷ ಗೌರವ
  • ನಾಲ್ಕು ದಶಕಗಳ ಕಾಲದ ಸುಪ್ರಸಿದ್ಧ ವೃತ್ತಿಜೀವನ
IFFI Goa 2023: ಗೋವಾ ಫಿಲ್ಮ್‌ ಫೆಸ್ಟ್‌ನಲ್ಲಿ ಮಾಧುರಿ ದೀಕ್ಷಿತ್ ಗೆ ವಿಶೇಷ ಗೌರವ title=
ಮಾಧುರಿ ದೀಕ್ಷಿತ್

Madhuri Dixit honoured: 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಲೆಜೆಂಡರಿ ನಟಿ ಮಾಧುರಿ ದೀಕ್ಷಿತ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಭಾರತದ 54 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾಧುರಿ ದೀಕ್ಷಿತ್ ಅವರಿಗೆ 'ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿಶೇಷ ಮನ್ನಣೆ' ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ನಾಲ್ಕು ದಶಕಗಳ ಕಾಲದ ಸುಪ್ರಸಿದ್ಧ ವೃತ್ತಿಜೀವನದೊಂದಿಗೆ, ಮಾಧುರಿ ದೀಕ್ಷಿತ್ ಭಾರತೀಯ ಚಲನಚಿತ್ರೋದ್ಯಮದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ : BBK10: ಕಾರ್ತಿಕ್‌ - ತನಿಷಾ ಜೊತೆ ಮುನಿಸು.. ವಿನಯ್‌ ಟೀಮ್‌ ಸೇರಿದ್ರಾ ಸಂಗೀತಾ!

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಚಿವ ಅನುರಾಗ್ ಠಾಕೂರ್ ಅವರು ಮಾಧುರಿ ದೀಕ್ಷಿತ್ ಅವರಿಗೆ ಪ್ರಶಸ್ತಿ ನೀಡುತ್ತಿರುವ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.  

ಮಾಧುರಿ ದೀಕ್ಷಿತ್ ಯಾವಾಗಲೂ ಭಾರತೀಯ ಚಲನಚಿತ್ರಗಳಲ್ಲಿ ತನ್ನ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. 1980 ರ ದಶಕ, 1990 ರ ದಶಕ ಮತ್ತು 2000 ರ ದಶಕದ ಆರಂಭದಲ್ಲಿ ಹಿಂದಿ ಚಲನಚಿತ್ರ ನಟಿ ಮಾಧುರಿ ದೀಕ್ಷಿತ್ ಅವರು ಆರು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಪಡೆದರು. ಅತ್ಯುತ್ತಮ ನಟಿ ಫಿಲ್ಮ್‌ಫೇರ್ ಪ್ರಶಸ್ತಿಗೆ 14 ಬಾರಿ ನಾಮನಿರ್ದೇಶನಗೊಂಡರು. ಮಾಧುರಿ ದೀಕ್ಷಿತ್ 'ಅಬೋಧ್' (1984) ಚಿತ್ರದೊಂದಿಗೆ ಸಿನಿ ಜರ್ನಿ ಪ್ರಾರಂಭಿಸಿದರು. 2014 ರಲ್ಲಿ, ಅವರು ಭಾರತದಲ್ಲಿ UNICEF ಸದ್ಭಾವನಾ ರಾಯಭಾರಿಯಾಗಿ ನೇಮಕಗೊಂಡರು.

ಇದನ್ನೂ ಓದಿ : Bigg Boss 10 : ಈ ವಾರ ಮನೆಯಿಂದ ಹೊರ ಹೋಗಲು ನಾಮಿನೇಟ್ ಆದವರು ಯಾರು? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News