Sugar Factory: ಡಾರ್ಲಿಂಗ್ ಕೃಷ್ಣನ ‘ಶುಗರ್ ಫ್ಯಾಕ್ಟರಿ’ ಟ್ರೈಲರ್​ಗೆ ಸಿನಿರಸಿಕರು ಫಿದಾ!

Sugar Factory: ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡೆಗಡೆಯಾಗಿರುವ ಈ ಚಿತ್ರದ ಟ್ರೈಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ.

Written by - YASHODHA POOJARI | Edited by - Puttaraj K Alur | Last Updated : Sep 30, 2023, 06:03 PM IST
  • ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣರ "ಶುಗರ್ ಫ್ಯಾಕ್ಟರಿ" ಸಖತ್ ಸೌಂಡ್ ಮಾಡುತ್ತಿದೆ
  • ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ 2 ನಿಮಿಷಗಳ ಟ್ರೈಲರ್‍ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ
  • ದೀಪಕ್ ಅರಸ್ ನಿರ್ದೇಶನದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24ರಂದು ಬಿಡುಗಡೆಯಾಗಲಿದೆ
Sugar Factory: ಡಾರ್ಲಿಂಗ್ ಕೃಷ್ಣನ ‘ಶುಗರ್ ಫ್ಯಾಕ್ಟರಿ’ ಟ್ರೈಲರ್​ಗೆ ಸಿನಿರಸಿಕರು ಫಿದಾ! title=
"ಶುಗರ್ ಫ್ಯಾಕ್ಟರಿ" ಸಖತ್ ಸೌಂಡ್ ಮಾಡುತ್ತಿದೆ!

ಬೆಂಗಳೂರು: ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರ ಭಾರೀ ಸುದ್ದಿಯಲ್ಲಿದೆ. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡೆಗಡೆಯಾಗಿರುವ ಈ ಚಿತ್ರದ ಟ್ರೈಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಟ್ರೈಲರ್‍ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ.

ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ತೇಜಸ್ವಿನಿ : ಬೇಬಿ ಬಂಪ್ಸ್ ಫೋಟೋಸ್‌ ಇಲ್ಲಿವೆ

2 ನಿಮಿಷಗಳ ಟ್ರೈಲರ್‍ನಲ್ಲಿಯೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ ಚಿತ್ರದುದ್ದಕ್ಕೂ ನಾನ್‍ಸ್ಟಾಪ್ ಮನರಂಜನೆ ಖಚಿತ ಎಂಬುದಕ್ಕೆ ಟ್ರೈಲರ್ ಮುನ್ನುಡಿಯಾಗಿದೆ. ಅಪಾರ ವೆಚ್ಚದಲ್ಲಿ ಹಾಗೂ ಅದ್ದೂರಿಯಾಗಿ ಮೂಡಿಬಂದಿರುವ ‘ಶುಗರ್ ಫ್ಯಾಕ್ಟರಿ’ ನವೆಂಬರ್ 24ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಬಿಗ್ ಬಾಸ್‌ ಧ್ವನಿಯ ಹಿಂದಿರುವ ಆ ವ್ಯಕ್ತಿ ಯಾರು ಗೊತ್ತಾ?

ಗಿರೀಶ್ ನಿರ್ಮಿಸಿರುವ, ದೀಪಕ್ ಅರಸ್ ನಿರ್ದೇಶಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರದ ಹಾಡಗಳು ಹಾಗೂ ಟ್ರೈಲರ್ ಈಗಾಗಲೇ ಜನಪ್ರಿಯವಾಗಿದೆ. ಡಾರ್ಲಿಂಗ್ ಕೃಷ್ಣ ಅವರ ಸಿನಿ ಜರ್ನಿಯಲ್ಲೇ "ಶುಗರ್ ಫ್ಯಾಕ್ಟರಿ" ಬಿಗ್ ಬಜೆಟ್‍ನ ಚಿತ್ರವಾಗಿದೆ. ಸೋನಾಲ್‌ ಮಾಂತೆರೋ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News