"ಲವ್ ಬರ್ಡ್ಸ್" ಚಿತ್ರದ ಟೀಸರ್ ಗೆ ಹರಿದು ಬಂದ ಮೆಚ್ಚುಗೆಯ ಮಹಾಪೂರ

ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

Written by - YASHODHA POOJARI | Edited by - Manjunath Naragund | Last Updated : Jan 17, 2023, 05:54 PM IST
  • ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್
  • ನಿರ್ಮಾಪಕ ಚಂದ್ರು ಅವರು ತುಂಬಾ ಫಾಸ್ಟ್. ನಾನಿದ್ದ ಜಾಗಕ್ಕೆ ಬಂದು ಈ ಚಿತ್ರದ ಕುರಿತು ಹೇಳಿದರು
  • ಕಥೆ ಇಷ್ಟವಾಯಿತು. ಪಿ.ಸಿ.ಶೇಖರ್ ಸುಂದರವಾದ ಕಥೆ ಬರೆದಿದ್ದಾರೆ
"ಲವ್ ಬರ್ಡ್ಸ್" ಚಿತ್ರದ ಟೀಸರ್ ಗೆ ಹರಿದು ಬಂದ ಮೆಚ್ಚುಗೆಯ ಮಹಾಪೂರ title=

ಬೆಂಗಳೂರು: ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಇದನ್ನೂ ಓದಿ: Miss Universe 2022 : ಯುಸ್‌ನ ಚೆಲುವೆಯ ಮುಡಿಗೆ ಭುವನ ಸುಂದರಿ ಕಿರೀಟ, ಭಾರತದ ದಿವಿತಾ ರೈಗೆ ನಿರಾಸೆ

ನಾನು ಸಾಮಾನ್ಯವಾಗಿ ಒಂದೇ ತರಹದ ಚಿತ್ರ ಮಾಡುವುದಿಲ್ಲ. ಬೇರೆಬೇರೆ ರೀತಿಯ ಚಿತ್ರ ಮಾಡುತ್ತಿರುತ್ತೇನೆ. ಲಾಕ್ ಡೌನ್ ಸಮಯದಲ್ಲಿ ಬರೆದ ಕಥೆಯಿದು. ಮದುವೆಯಾದ ನನ್ನ ಸ್ನೇಹಿತರು ಹಂಚಿಕೊಳ್ಳುತ್ತಿದ್ದ ಕೆಲವು ವಿಷಯಗಳು ಈ ಕಥೆ ಬರೆಯಲು ಸ್ಪೂರ್ತಿ. ಕಥೆ ಬರೆಯಬೇಕಾದರೆ ಕೃಷ್ಣ - ಮಿಲನ ನಾಗರಾಜ್ ಅವರೆ ನಾಯಕ-ನಾಯಕಿ ಅಂತ ನಿರ್ಧರಿಸಿದ್ದೆ. ಆನಂತರ ನಿರ್ಮಾಪಕ ಚಂದ್ರು ಅವರಿಗೆ ಕಥೆ ಹೇಳಿದೆ. ಅವರು ಚಿತ್ರ ಮಾಡಲು ಮುಂದಾದರು.  ಚಿತ್ರತಂಡದ ಸಹಕಾರದಿಂದ "ಲವ್ ಬರ್ಡ್ಸ್" ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ದೇಶಕ ಪಿ.ಸಿ.ಶೇಖರ್.

ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಬೆದರಿಕೆ ಕರೆ; ಸಂಪೂರ್ಣ ತನಿಖೆ: ಸಿಎಂ ಬೊಮ್ಮಾಯಿ

ಚಿತ್ರ ಚೆನ್ನಾಗಿ ಬಂದಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ವಿಜಯ ರಾಘವೇಂದ್ರ - ಅಜಯ್ ರಾವ್ ಅವರಿಗೆ ಧನ್ಯವಾದ. ಮುಂದಿನವಾರ ಚಿತ್ರದ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ಕಡ್ಡಿಪುಡಿ ಚಂದ್ರು ತಿಳಿಸಿದರು.ನಾನು ಹಾಗೂ ಮಿಲನ ನಾಗರಾಜ್ "ಲವ್ ಮಾಕ್ಟೇಲ್" ಚಿತ್ರದ ನಂತರ ಮಾಡಿರುವ ಚಿತ್ರವಿದು. ಅದರಲ್ಲಿ ಆದಿ ಹಾಗೂ ನಿಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆವು. ಇದರಲ್ಲಿ ದೀಪಕ್ - ಪೂಜಾ ಪಾತ್ರದಲ್ಲಿ ಅಭಿನಯಿಸಿದ್ದೇವೆ. ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳು ಚೆನ್ನಾಗಿದೆ. ನಿರ್ದೇಶಕ ಪಿ.ಸಿ.ಶೇಖರ್ ಚಿತ್ರವನ್ನು ಚೆನ್ನಾಗಿ ಮಾಡಿದ್ದಾರೆ. ನಿರ್ಮಾಪಕ ಚಂದ್ರು ಅವರಿಗೆ ಧನ್ಯವಾದ ಎಂದರು ಡಾರ್ಲಿಂಗ್ ಕೃಷ್ಣ.

ನಿರ್ಮಾಪಕ ಚಂದ್ರು ಅವರು ತುಂಬಾ ಫಾಸ್ಟ್. ನಾನಿದ್ದ ಜಾಗಕ್ಕೆ ಬಂದು ಈ ಚಿತ್ರದ ಕುರಿತು ಹೇಳಿದರು. ಕಥೆ ಇಷ್ಟವಾಯಿತು. ಪಿ.ಸಿ.ಶೇಖರ್ ಸುಂದರವಾದ ಕಥೆ ಬರೆದಿದ್ದಾರೆ. "ಲವ್ ಬರ್ಡ್ಸ್" ಚಿತ್ರದಲ್ಲಿ ಲವ್ ಅಷ್ಟೇ ಅಲ್ಲ. ಬೇರೆ ವಿಷಯಗಳು ಇದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹ ನೀಡಿ ಎಂದು ಮಿಲನ ನಾಗರಾಜ್ ಹೇಳಿದರು.ಹೊಸಪ್ರತಿಭೆ ಗೌರವ್ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News