Harda blast Madhya Pradesh: ಪಟಾಕಿ ಕಾರ್ಖಾನೆ ಸ್ಫೋಟ: 7 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ… 50 ಮನೆಗಳಿಗೆ ಬೆಂಕಿ

Madhya Pradesh factory blast: ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ರಿಷಿ ಗರ್ಗ್ ತಿಳಿಸಿದ್ದಾರೆ. ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ

Written by - Bhavishya Shetty | Last Updated : Feb 6, 2024, 02:06 PM IST
    • ಮಗರ್ಧಾ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ
    • ದುರಂತದಲ್ಲಿ 7 ಮಂದಿ ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ
    • ಘಟನೆ ಕುರಿತು ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ತುರ್ತು ಸಭೆ ಕರೆದಿದ್ದಾರೆ
Harda blast Madhya Pradesh: ಪಟಾಕಿ ಕಾರ್ಖಾನೆ ಸ್ಫೋಟ: 7 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ… 50 ಮನೆಗಳಿಗೆ ಬೆಂಕಿ title=
Cracker factory blasts

Madhya Pradesh cracker factory blasts: ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಭೀತಿ ಆವರಿಸಿದೆ. ಮಗರ್ಧಾ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ! ಕೊಹ್ಲಿ ಸೇರಿ ಮೂವರು ಪ್ರಮುಖ ಆಟಗಾರರೇ ಇಲ್ಲ!

ಹರ್ದಾದಲ್ಲಿ ನಡೆದ ಈ ಘಟನೆ ಕುರಿತು ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ತುರ್ತು ಸಭೆ ಕರೆದಿದ್ದಾರೆ. ಸಚಿವರಾದ ಪ್ರದ್ಯುಮನ್ ಸಿಂಗ್ ತೋಮರ್, ಉದಯ್ ಪ್ರತಾಪ್ ಸಿಂಗ್, ಎಸಿಎಸ್ ಅಜಿತ್ ಕೇಸರಿ, ಡಿಜಿ ಗೃಹ ರಕ್ಷಕ ದಳ ಅರವಿಂದ್ ಕುಮಾರ್ ಅವರನ್ನು ಹೆಲಿಕಾಪ್ಟರ್ ಮೂಲಕ ತೆರಳುವಂತೆ ಸೂಚಿಸಿದ್ದಾರೆ.

ಇನ್ನೊಂದೆಡೆ ಗಾಯಾಳುಗಳನ್ನು ಏರ್ ಲಿಫ್ಟ್ ಮಾಡಿ, ಇಂದೋರ್‌ ಭೋಪಾಲ್‌’ನಲ್ಲಿರುವ ವೈದ್ಯಕೀಯ ಕಾಲೇಜು ಮತ್ತು ಭೋಪಾಲ್‌’ನ ಏಮ್ಸ್‌’ನಲ್ಲಿರುವ ವೈದ್ಯಕೀಯ ಘಟಕಕ್ಕೆ ಕಳುಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲು ತಿಳಿಸಲಾಗಿದೆ.

ಇದನ್ನೂ ಓದಿ: ವಯನಾಡ್ ಕ್ಷೇತ್ರದ ಮೇಲೆ CPI ಕಣ್ಣು! ಲೋಕ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕುತ್ತುತರುತ್ತಾ?

ಇಂದು ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ರಿಷಿ ಗರ್ಗ್ ತಿಳಿಸಿದ್ದಾರೆ. ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ. 20-25 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಂಬ್ಯುಲೆನ್ಸ್‌’ಗಳು, ವೈದ್ಯರ ತಂಡ, ರಾಜ್ಯ ವಿಪತ್ತು ನಿರ್ವಹಣಾ ತಂಡ ಮತ್ತು ಹತ್ತಿರದ ಜಿಲ್ಲೆಗಳಿಂದ ಎನ್‌’ಡಿಆರ್‌ಎಫ್ ತಂಡಗಳನ್ನು ಕರೆಸಿದ್ದೇವೆ ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News