Earthquake Today: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು

Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯಷ್ಟು ದಾಖಲಾಗಿದೆ. 

Written by - Yashaswini V | Last Updated : Mar 21, 2024, 08:07 AM IST
  • ಇಂದು ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದಲ್ಲಿ ಕಂಪಿಸಿದ ಭೂಮಿ
  • ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಸಂಭವಿಸಿರುವ ಭೂಕಂಪ
  • ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು
Earthquake Today: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು  title=

Earthquake In Maharashtra: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು (ಮಾರ್ಚ್ 21) ಗುರುವಾರ  ಬೆಳಿಗ್ಗೆ  6:08ರ ಸುಮಾರಿಗೆ ಭೂಕಂಪದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 4.5ರಷ್ಟಿತ್ತು ಎಂದು ತಿಳಿದುಬಂದಿದೆ. ಆದಾಗ್ಯೂ, ಇದುವರೆಗೂ ಯಾವುದೇ ಆಸ್ತಿ-ಪಾಸ್ತಿ, ಜೀವಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. 

ಈ ಕುರಿತಂತೆ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿ‌ಎಸ್)  , "21-03-2024, 06:08:30 ISTಗೋಲಿ, ಮಹಾರಾಷ್ಟ್ರದ ಹಿಂಗೋಲಿಯಲ್ಲಿ (ಅಕ್ಷಾಂಶ: 19.48 ಮತ್ತು ರೇಖಾಂಶ: 77.30) 10 ಕಿಮೀ ಆಳದಲ್ಲಿ  4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ. 

ಇದನ್ನೂ ಓದಿ- Lok Sabha Election 2024: ಲೋಕಸಭೆ ಚುನಾವಣೆಗೆ 21 ರಾಜ್ಯಗಳ 102 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಗಮನಾರ್ಹವಾಗಿ, ನಿನ್ನೆ ಮಹಿಪುರದಲ್ಲಿ ಸಹ ಭೂಕಂಪದ ಅನುಭವವಾಗಿತ್ತು. ಭೂಕಂಪದ ತೀವ್ರತೆ 3.0ರಷ್ಟಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿ‌ಎಸ್)  ಟ್ವೀಟ್ ಮಾಡಿತ್ತು. 

ಇದನ್ನೂ ಓದಿ- Lok Sabha Election 2024: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ

ಕಳೆದ ವಾರ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ 3.1 ತೀವ್ರತೆಯ ಭೂಕಂಪ, ಸಿಯೋನಿಯಲ್ಲಿ 3.6ತೀವ್ರತೆಯ ಭೂಕಂಪ ವರದಿಯಾಗಿತ್ತು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News