Lok Sabha Election 2024: ಐದನೇ ಹಂತದಲ್ಲಿ ಇಂದು 49 ಸ್ಥಾನಗಳಿಗೆ ಮತದಾನ, ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

Lok Sabha Election 2024: ಲೋಕಸಭಾ ಚುನಾವಣೆಗೆ ಇಂದು ಐದನೇ ಹಂತದ ಮತದಾನ ನಡೆಯಲಿದೆ. ಇಂದು 49 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ. 

Written by - Yashaswini V | Last Updated : May 20, 2024, 07:16 AM IST
  • ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಗಾಂಧಿ ಕುಟುಂಬದ ಆಪ್ತ ಕೆಎಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ.
  • ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಕ್ನೋದಿಂದ ಮತ್ತೆ ತಮ್ಮ ಅದೃಷ್ಟ ಪರೀಕ್ಷಿಸುತ್ತಿದ್ದಾರೆ.

    ಈಗಾಗಲೇ ಕೇರಳದ ವಯನಾಡಿನಿಂದ ಸ್ಪರ್ಧಿಸಿರುವ ರಾಹುಲ್ ಗಾಂಧಿ ತಮ್ಮ ತಾಯಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ನೆಹರೂ-ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ರಾಯ್ ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ.
Lok Sabha Election 2024: ಐದನೇ ಹಂತದಲ್ಲಿ ಇಂದು 49 ಸ್ಥಾನಗಳಿಗೆ ಮತದಾನ, ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು  title=

Lok Sabha Election 2024 Fifth Phase Polls: 2024ರ ಲೋಕಸಭಾ ಚುನಾವಣೆಗಾಗಿ ಇಂದು ಐದನೇ ಹಂತದ ಮತದಾನ (Lok Sabha Election fifth phase polls) ನಡೆಯುತ್ತಿದೆ. ಐದನೇ ಹಂತದಲ್ಲಿ  ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ ಉತ್ತರ ಪ್ರದೇಶದ ಎರಡು ವಿಐಪಿ ಸ್ಥಾನಗಳಾದ ರಾಯ್ ಬರೇಲಿ ಮತ್ತು ಅಮೇಠಿಯಲ್ಲಿಯೂ ಮತದಾನ ನಡೆಯಲಿದೆ. 

ಐದನೇ ಹಂತದಲ್ಲಿ ಎಲ್ಲೆಲ್ಲಿ ಮತದಾನ? 
ಲೋಕಸಭಾ ಚುನಾವಣೆಗೆ  (Lok Sabha Election) ಐದನೇ ಹಂತದಲ್ಲಿ ಮಹಾರಾಷ್ಟ್ರದ 13, ಉತ್ತರ ಪ್ರದೇಶದಲ್ಲಿ 14, ಪಶ್ಚಿಮ ಬಂಗಾಳದ 7, ಬಿಹಾರದ 5, ಜಾರ್ಖಂಡ್‌ನಲ್ಲಿ 3, ಒಡಿಶಾದಲ್ಲಿ 5 ಮತ್ತು ಲಡಾಖ್,  ಜಮ್ಮು-ಕಾಶ್ಮೀರದಲ್ಲಿ ತಲಾ ಒಂದು ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ 82 ಮಹಿಳೆಯರು ಸೇರಿದಂತೆ ಒಟ್ಟು 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದನ್ನೂ ಓದಿ- Loksabha Election : ಪುಣೆಯ ಬಾರಾಮತಿ ಮತಗಟ್ಟೆಯಲ್ಲಿ ಇವಿಎಂ ಇಟ್ಟಿದ್ದೆಡೆ 45 ನಿಮಿಷ ಸಿ.ಸಿ.ಟಿ.ವಿ. ಕ್ಯಾಮೆರಾ ಸ್ಥಗಿತ

ಈ ಹಂತದಲ್ಲಿ  4.26 ಕೋಟಿ ಮಹಿಳೆಯರು ಮತ್ತು 5,409 ತೃತೀಯಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಹೆಚ್ಚು ಜನರು ಮತದಾನಕ್ಕೆ (Voting) ಅರ್ಹರಾಗಿದ್ದು, 94,732 ಮತಗಟ್ಟೆಗಳಲ್ಲಿ 9.47 ಲಕ್ಷ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 

ಇದನ್ನೂ ಓದಿ- ಮುಸ್ಲಿಂ ಮಹಿಳೆಯರ ವೋಟರ್ ಐಡಿ ಪರಿಶೀಲಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಎಫ್‌ಐಆರ್ ದಾಖಲು

ಐದನೇ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಪ್ರಮುಖ ಅಭ್ಯರ್ಥಿಗಳು: 
ಲೋಕಸಭಾ ಚುನಾವಣೆಗೆ ಐದನೇ ಹಂತದಲ್ಲಿ ಮತದಾನ (Lok Sabha Election fifth phase polls) ನಡೆಯುತ್ತಿರುವ ಲೋಕಸಭಾ ಕ್ಷೇತ್ರಗಳಲ್ಲಿ ತಮ್ಮ ಅದೃಷ್ಟ ಪರೀಕ್ಷಿಸುತ್ತಿರುವ ಪ್ರಮುಖ ಅಭ್ಯರ್ಥಿಗಳೆಂದರೆ, ರಾಯ್ ಬರೇಲಿಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅಮೇಠಿಯಿಂದ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಣದಲ್ಲಿದ್ದಾರೆ. ಇವರಲ್ಲದೆ, ಕೇಂದ್ರ ಸಚಿವ ರಾಜನಾಥ್ ಸಿಂಗ್  (ಲಕ್ನೋ, ಉತ್ತರ ಪ್ರದೇಶ), ಪಿಯೂಷ್ ಗೋಯಲ್ (ಮುಂಬೈ ಉತ್ತರ, ಮಹಾರಾಷ್ಟ್ರ), ಸಾಧ್ವಿ ನಿರಂಜನ್ ಜ್ಯೋತಿ (ಫತೇಪುರ್, ಯುಪಿ) ಮತ್ತು ಶಾಂತನು ಠಾಕೂರ್ (ಬಂಗಾವ್, ಪಶ್ಚಿಮ ಬಂಗಾಳ), ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ (ಹಾಜಿಪುರ, ಬಿಹಾರ), ಶಿವಸೇನೆಯ ಶ್ರೀಕಾಂತ್ ಶಿಂಧೆ (ಕಲ್ಯಾಣ್, ಮಹಾರಾಷ್ಟ್ರ) ಮತ್ತು ಬಿಜೆಪಿಯ ರಾಜೀವ್ ಪ್ರತಾಪ್ ರೂಡಿ ಮತ್ತು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಪುತ್ರಿ ರೋಹಿಣಿ ಆಚಾರ್ಯ (ಇಬ್ಬರೂ ಸರಣ್, ಬಿಹಾರ) ಕಣದಲ್ಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News