Lok Sabha Elections: ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಪಶುಪತಿ ಪಾರಸ್, ಎನ್‌ಡಿ‌ಎಯಿಂದ ಬೇರ್ಪಡಲಿದೆಯೇ ಆರ್‌ಎಲ್‌ಜೆಪಿ!

Lok Sabha Elections:  ಕೇಂದ್ರ ಸಚಿವ ಮತ್ತು ಆರ್‌ಎಲ್‌ಜೆಪಿ ನಾಯಕ ಪಶುಪತಿ ಕುಮಾರ್ ಪಾರಸ್ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷವು ಎನ್‌ಡಿಎಯಿಂದ ಬೇರ್ಪಡಲಿದೆಯೇ ಎಂಬ ಅನುಮಾನಗಳು ಕೂಡ ವ್ಯಕ್ತವಾಗಿವೆ. 

Written by - Yashaswini V | Last Updated : Mar 19, 2024, 12:24 PM IST
  • ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಎನ್‌ಡಿಎ ತನ್ನ ಸೀಟು ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಿದೆ
  • ಎನ್‌ಡಿಎ ಮೈತ್ರಿಕೂಟವು ಬಿಹಾರ ಲೋಕಸಭೆಗೆ 40 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
  • ಆದರೆ, ಬಿಹಾರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಆರ್‌ಎಲ್‌ಜೆಪಿಗೆ ಯಾವುದೇ ಸೀಟು ಹಂಚಿಕೆಯಾಗಿಲ್ಲ
Lok Sabha Elections:  ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ  ಪಶುಪತಿ ಪಾರಸ್, ಎನ್‌ಡಿ‌ಎಯಿಂದ ಬೇರ್ಪಡಲಿದೆಯೇ ಆರ್‌ಎಲ್‌ಜೆಪಿ! title=

Lok Sabha Elections: ಲೋಕಸಭಾ ಚುನಾವಣೆಗೆ ಚಿರಾಗ್ ಪಾಸ್ವಾನ್ ಅವರೊಂದಿಗೆ ಎನ್‌ಡಿ‌ಎ ಮೈತ್ರಿಕೂಟ ತನ್ನ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ ಬೆನ್ನಲ್ಲೇ, ಲೋಕ ಜನಶಕ್ತಿ ಪಕ್ಷದ ಮತ್ತೊಂದು ಬಣವನ್ನು ಮುನ್ನಡೆಸುತ್ತಿರುವ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಸ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾತ್ರವಲ್ಲದೆ, ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷವು ಎನ್‌ಡಿಎಯಿಂದ ಹೊರಬರುವ ಮುನ್ಸೂಚನೆಯನ್ನೂ ನೀಡಿದ್ದಾರೆ. 

ಪ್ರಧಾನಿ ಮೋದಿ ದೊಡ್ಡ ನಾಯಕ ಆದರೆ ನನಗೆ ಮತ್ತು ನನ್ನ ಪಕ್ಷಕ್ಕೆ ಅನ್ಯಾಯವಾಗಿದೆ. ಹಾಗಾಗಿ ನಾನು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಆರ್‌ಎಲ್‌ಜೆ‌ಪಿ ನಾಯಕ ಪಶುಪತಿ ಕುಮಾರ್ ಪಾರಸ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ ನಂತರ ಹೇಳಿಕೆ ನೀಡಿದ್ದಾರೆ. 

ಇದನ್ನೂ ಓದಿ- ಬಿಜೆಪಿ ಅಭ್ಯರ್ಥಿ ಬಾಲರಾಜ್ ಗೆ ಬೆಂಬಲ‌ ಘೋಷಿಸಿದ ಸಂಸದ ಶ್ರೀನಿವಾಸಪ್ರಸಾದ ಅಳಿಯ

ವಾಸ್ತವವಾಗಿ, ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಎನ್‌ಡಿಎ ತನ್ನ ಸೀಟು ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಿದ್ದು ಎನ್‌ಡಿಎ ಮೈತ್ರಿಕೂಟವು ಬಿಹಾರ ಲೋಕಸಭೆಗೆ 40 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಭಾರತೀಯ ಜನತಾ ಪಕ್ಷವು 17 ಕ್ಷೇತ್ರಗಳಲ್ಲಿ, ಜೆಡಿಯು 16 ಮತ್ತು ಚಿರಾಗ್ ಪಾಸ್ವಾನ್ ಅವರ ಪಕ್ಷವು ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಆದರೆ, ಬಿಹಾರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಆರ್‌ಎಲ್‌ಜೆಪಿಗೆ ಯಾವುದೇ ಸೀಟು ಹಂಚಿಕೆಯಾಗದ ಹಿನ್ನೆಲೆಯಲ್ಲಿ ಪಶುಪತಿ ಕುಮಾರ್ ಪರಾಸ್ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ- ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ‌ವೈ ವಿಜಯೇಂದ್ರ

ಈ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿರುವ ಆರ್‌ಎಲ್‌ಜೆ‌ಪಿ ಅಧ್ಯಕ್ಷ ಪಶುಪತಿ ಕುಮಾರ್ ಪಾರಸ್, ನಮ್ಮ ಪಕ್ಷದ ಐವರು ಸಂಸದರಿದ್ದು, ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇವೆ. ಆದರೆ, ಈಗ ನನಗೆ ಮತ್ತು ನಮ್ಮ ಪಕ್ಷಕ್ಕೆ ಅನ್ಯಾಯವಾಗಿದೆ. ಹಾಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾವೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News