ಗಾಂಧಿ ಜಯಂತಿ ನಿಮಿತ್ತ 150 ಕಿಮೀ ಪಾದಯಾತ್ರೆ ಕೈಗೊಳ್ಳಲು ಸಂಸದರಿಗೆ ಪ್ರಧಾನಿ ಮೋದಿ ಸೂಚನೆ

ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆ ಅಕ್ಟೋಬರ್ 2ರಿಂದ 31 ರ ನಡುವೆ ಸಂಸದರು ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ 150 ಕಿ.ಮೀ ಪಾದಯಾತ್ರೆ ಕಾರ್ಯಕ್ರಮ ಆಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Last Updated : Jul 9, 2019, 06:08 PM IST
ಗಾಂಧಿ ಜಯಂತಿ ನಿಮಿತ್ತ 150 ಕಿಮೀ ಪಾದಯಾತ್ರೆ ಕೈಗೊಳ್ಳಲು ಸಂಸದರಿಗೆ ಪ್ರಧಾನಿ ಮೋದಿ ಸೂಚನೆ  title=
Photo courtesy: Facebook

ನವದೆಹಲಿ: ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆ ಅಕ್ಟೋಬರ್ 2ರಿಂದ 31 ರ ನಡುವೆ ಸಂಸದರು ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ 150 ಕಿ.ಮೀ ಪಾದಯಾತ್ರೆ ಕಾರ್ಯಕ್ರಮ ಆಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಬಿಜೆಪಿಯ ಸಂಸದೀಯ ಪಕ್ಷದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ ಸಭೆಯಲ್ಲಿ ತಮ್ಮ ಭಾಷಣದಲ್ಲಿ "ಮಹಾತ್ಮ ಗಾಂಧಿಯವರ 150 ನೇ ಜನ್ಮದಿನಾಚರಣೆ ನಿಮ್ಮಿತ 'ಗಾಂಧಿ 150' ಗೆ ಸಂಬಂಧಿಸಿದ ಮಹತ್ವದ ಕಾರ್ಯಕ್ರಮವನ್ನು ಪ್ರಸ್ತಾಪಿಸಿದ್ದಾರೆ. ಅಕ್ಟೋಬರ್ 2 ಮತ್ತು 31 ರ ನಡುವೆ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ 150 ಕಿ.ಮೀ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯಸಭಾ ಸಂಸದರಿಗೆ ಕ್ಷೇತ್ರವೊಂದನ್ನು ಮಂಜೂರು ಮಾಡಲಾಗುವುದು, ಅಲ್ಲಿ ಅವರು ಮಹಾತ್ಮ ಗಾಂಧೀಜಿ ಮತ್ತು ಸ್ವಾತಂತ್ರ್ಯ ಹೋರಾಟದ ಕುರಿತು ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗುತ್ತದೆ ಎಂದು ಜೋಶಿ ಮಾಹಿತಿ ನೀಡಿದರು."ರಾಜ್ಯಸಭಾ ಸಂಸದರಿಗೆ ಒಂದು ಕ್ಷೇತ್ರವನ್ನು ಮಂಜೂರು ಮಾಡಲಾಗುವುದು. ಪ್ರತಿ ಕ್ಷೇತ್ರದಲ್ಲಿ 15-20 ತಂಡಗಳನ್ನು ರಚಿಸಲಾಗುವುದು. ಅವರು ಪ್ರತಿದಿನ 15 ಕಿ.ಮೀ ಪಾದಯಾತ್ರೆ ಕೈಗೊಳ್ಳಲಿದ್ದಾರೆ. ಸಂಸದರು ಗಾಂಧಿಜೀ, ಸ್ವಾತಂತ್ರ್ಯ ಹೋರಾಟ, ಮರ ನೆಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ.  ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಕ್ಷದ ಮಟ್ಟದಲ್ಲಿ ಸಮಿತಿಯೊಂದು  ಇರುತ್ತದೆ ' ಎಂದು ಜೋಶಿ ಹೇಳಿದರು.

ಮಂಗಳವಾರ ನಡೆದ ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮುಖ್ಯಸ್ಥ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉಭಯ ಸದನಗಳ ಸಂಸತ್ ಸದಸ್ಯರು ಸೇರಿದಂತೆ ಇತರ ಹಿರಿಯ ಮುಖಂಡರು ಉಪಸ್ಥಿತರಿದ್ದರು.
 

Trending News