Odisha Train tragedy: 290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ!

Odisha Train tragedy: ರೈಲು ದುರಂತದ ಬಗ್ಗೆ ಸಿಬಿಐನಿಂದಲೂ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆಯಿರುವ ಹಿನ್ನೆಲೆ ಸಿಬಿಐ ತನಿಖೆ ಕೈಗೊಂಡಿದೆ. ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಮಾನವ ತಪ್ಪು ಕಾರಣವೆಂದು ರೈಲ್ವೆ ಸುರಕ್ಷತಾ ಆಯುಕ್ತರು(CRS) ತಿಳಿಸಿದ್ದಾರೆ.

Written by - Puttaraj K Alur | Last Updated : Jul 2, 2023, 04:19 PM IST
  • ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ದುರಂತದ ರಹಸ್ಯ ಬಯಲು
  • ಈ ದುರಂತಕ್ಕೆ ಇಲಾಖೆ ಸಿಬ್ಬಂದಿಯ ಎಡವಟ್ಟೇ ಕಾರಣವೆಂದು ರೈಲ್ವೆ ಸುರಕ್ಷಿತ ಆಯುಕ್ತರಿಂದ ವರದಿ
  • ರೈಲು ಅಪಘಾತಕ್ಕೆ ರೈಲ್ವೆಯ ಸಿಗ್ನಲ್ ಮತ್ತು ಕಾರ್ಯನಿರ್ವಹಣೆ ಸಿಬ್ಬಂದಿ ಕಾರಣ
Odisha Train tragedy: 290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ! title=
ಒಡಿಶಾ ರೈಲು ದುರಂತದ ರಹಸ್ಯ ಬಯಲು!

ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿಯ ಎಡವಟ್ಟೇ ಕಾರಣವೆಂದು ರೈಲ್ವೆ ಸುರಕ್ಷಿತ ಆಯುಕ್ತರು (CRS) ವರದಿ ನೀಡಿದ್ದಾರೆ.

ಜೂನ್ 2ರಂದು ಸಂಭವಿಸಿದ ರೈಲು ಅಪಘಾತದಲ್ಲಿ 290ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. 1,200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ರೈಲುಗಳ ಅಪಘಾತಕ್ಕೆ ಎರಡು ಇಲಾಖೆಯ ಸಿಬ್ಬಂದಿಯೇ ಕಾರಣವೆಂದು ತಿಳಿದುಬಂದಿದೆ. ಈ ದೊಡ್ಡ ಲೋಪಕ್ಕೆ ರೈಲ್ವೆಯ ಸಿಗ್ನಲ್ ಮತ್ತು ಕಾರ್ಯನಿರ್ವಹಣೆ ಸಿಬ್ಬಂದಿ ಕಾರಣವೆಂದು ರೈಲ್ವೆ ಆಯುಕ್ತರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಯೋಧದ ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ವಿಮಾನ ನಿಲ್ದಾಣದ ನಿರ್ಮಾಣ ಸೆಪ್ಟೆಂಬರ್ ವೇಳೆಗೆ ಪೂರ್ಣ

ಸಿಬಿಐನಿಂದಲೂ ದುರಂತದ ತನಿಖೆ!

ರೈಲು ದುರಂತದ ಬಗ್ಗೆ ಸಿಬಿಐನಿಂದಲೂ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆಯಿರುವ ಹಿನ್ನೆಲೆ ಸಿಬಿಐ ತನಿಖೆ ಕೈಗೊಂಡಿದೆ. ಜೂನ್ 2ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ಮಾನವ ತಪ್ಪು ಕಾರಣವೆಂದು ರೈಲ್ವೆ ಸುರಕ್ಷತಾ ಆಯುಕ್ತರು(CRS) ತಿಳಿಸಿದ್ದಾರೆ. ಕೇಂದ್ರೀಯ ತನಿಖಾ ದಳ(ಸಿಬಿಐ) ನಡೆಸುತ್ತಿರುವ ಸಮಾನಾಂತರ ತನಿಖೆಯ ಮೇಲೆ ಪ್ರಭಾವ ಬೀರದಂತೆ ನೋಡಿಕೊಳ್ಳಲು ಮುಚ್ಚಿಟ್ಟಿರುವ ವರದಿಯಲ್ಲಿ ತೋರಿಸಿರುವ ದೋಷಗಳ ಕುರಿತು ಯಾವುದೇ ವಿವರ ಬಹಿರಂಗಪಡಿಸದಿರಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ಈ ವರದಿಯು ಮಾನವ ದೋಷವನ್ನು ಸ್ಪಷ್ಟವಾಗಿ ಎತ್ತಿ ತೋರಿಸಿದೆ. ವಿಧ್ವಂಸಕ ಕೃತ್ಯದ ಬಗ್ಗೆ ಸಿಬಿಐ ತನಿಖೆ ನಡೆಸುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. CRS ವರದಿಯನ್ನು ಅಪಘಾತ ಸಂಭವಿಸಿದ ವಿಭಾಗದ ಆಗ್ನೇಯ ರೈಲ್ವೆಯ(SER) ಪ್ರಧಾನ ವ್ಯವಸ್ಥಾಪಕರಿಗೆ ಮತ್ತು ಅಧ್ಯಕ್ಷ ರೈಲ್ವೆ ಮಂಡಳಿ(CRB) ಅನಿಲ್ ಕುಮಾರ್ ಲಹೋಟಿ ಅವರಿಗೆ ಇಮೇಲ್ ಮೂಲಕ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಏಕನಾಥ್ ಸಿಂಧೆ ಸರ್ಕಾರಕ್ಕೆ ಅಜಿತ್ ಸೇರ್ಪಡೆ, ಡಿಸಿಎಂ ಆಗಿ ಪ್ರಮಾಣ ವಚನ 

ವರದಿಯನ್ನು ಈ ಇಬ್ಬರು ಅಧಿಕಾರಿಗಳಿಗೆ ಮಾತ್ರ ಹಂಚಿಕೊಳ್ಳಲಾಗಿದೆ ಮತ್ತು ಸಚಿವಾಲಯದ ಬೆರಳೆಣಿಕೆಯ ಉನ್ನತ ಅಧಿಕಾರಿಗಳಿಗೆ ಮಾತ್ರ ಇದನ್ನು ತಿಳಿದುಕೊಳ್ಳುವ ಅವಕಾಶ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ‘ಇನ್ನೊಂದು ಸ್ವತಂತ್ರ ತನಿಖೆ (ಸಿಬಿಐ) ನಡೆಯುತ್ತಿರುವುದರಿಂದ ನಾವು CRS ವರದಿಯನ್ನು ಬಹಿರಂಗಪಡಿಸುವುದಿಲ್ಲ. ಈ ವರದಿಯು ಇತರ ವರದಿಯ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರುವುದಿಲ್ಲ ಅಥವಾ ಹಸ್ತಕ್ಷೇಪ ಮಾಡುವುದಿಲ್ಲವೆಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ‘ನಾವು ಎರಡೂ ವರದಿಗಳ ಮಾಹಿತಿಯನ್ನು ತೆಗೆದುಕೊಳ್ಳುತ್ತೇವೆ. ಈ ಘಟನೆಯ ಒಟ್ಟಾರೆ ಮೌಲ್ಯಮಾಪನವನ್ನು ಮಾಡುತ್ತೇವೆ ಮತ್ತು ನಂತರ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News