Weather Update: ನಾಳೆಯಿಂದ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ!

Weather Update: ಮೇ 05ರವರೆಗೆ ಭಾರತದ ಕೆಲವು ರಾಜ್ಯಗಳಲ್ಲಿ ತೀವ್ರವಾದ ಶಾಖದ ಅಲೆ ಹೊರತಾಗಿಯೂ ಕೆಲವು ರಾಜ್ಯಗಳಲ್ಲಿ ಲಘು ಮಳೆ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Written by - Yashaswini V | Last Updated : May 3, 2024, 09:15 AM IST
  • ಮೇ 03ರಿಂದ ಮೇ05ರವರೆಗೆ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶಾಖದ ಅಲೆ ಮುಂದುವರೆಯಲಿದೆ.
  • ಈ ಅವಧಿಯಲ್ಲಿ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಶಾಖದ ಅಲೆ ಮುಂದುವರೆದರೆ, ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಬಗ್ಗೆ ಐಎಂಡಿ ಭವಿಷ್ಯ ನುಡಿದಿದೆ.
Weather Update: ನಾಳೆಯಿಂದ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ!  title=

Weather Update: ಇನ್ನೂ ಎರಡು ದಿನಗಳವರೆಗೆ ಎಂದರೆ ಮೇ 05ರವರೆಗೆ ಗಂಗಾನದಿಯ ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಮತ್ತು ಬಿಹಾರದ ಪ್ರತ್ಯೇಕ ಭಾಗಗಳಲ್ಲಿ ಬಿಸಿಗಾಳಿಯಿಂದ ಕೂಡಿದ ತೀವ್ರ ಶಾಖದ ಅಲೆಗಳು ಮುಂದುವರೆಯಲಿವೆ. ಆದಾಗ್ಯೂ, ನಾಳೆಯಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. 

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೇ 03ರಿಂದ ಮೇ05ರವರೆಗೆ  ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳು ಮತ್ತು ತಮಿಳುನಾಡಿನಲ್ಲಿ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶಾಖದ ಪರಿಸ್ಥಿತಿ (Heatwave predictions) ಮುಂದುವರೆಯಲಿದೆ. 

ಆದಾಗ್ಯೂ, ಮುಂದಿನ ಐದು ದಿನಗಳ ಕಾಲ ಸಿಕ್ಕಿಂ, ಅರುಣಾಚಲ ಪ್ರದೇಶ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ  ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. 

ಇದನ್ನೂ ಓದಿ- ನೂರಾರು ಹೆಣ್ಣುಮಕ್ಕಳ ಶೋಷಿಸುವ ರಾಕ್ಷಸನ ಪರ ಮೋದಿ ಪ್ರಚಾರ ಮಾಡಿದ್ದು ಯಾಕೆ?: ರಾಹುಲ್‌ ಗಾಂಧಿ

ಈ ಭಾಗಗಳಲ್ಲಿ ಶಾಖದ ಅಲೆ: 
ಮೇ 05ರವರೆಗೆ ತೆಲಂಗಾಣ, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಗುಜರಾತ್ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಶಾಖದ ಅಲೆ ಮುಂದುವರೆಯಲಿದೆ. ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡ, ವಿದರ್ಭ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್  ರಾಜಸ್ಥಾನದ ದಕ್ಷಿಣ ಭಾಗಗಳಲ್ಲಿಯೂ ಶಾಖದ ಅಲೆ ಮುಂದುವರೆಯಲಿದೆ. 

ದಕ್ಷಿಣ ಭಾರತದ ಈ ಭಾಗಗಳಲ್ಲಿ ಮಳೆ: 
ಮೇ 04ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಭಾಗಗಳಲ್ಲಿ, ತೆಲಂಗಾಣ, ರಾಯಲಸೀಮಾ, ತಮಿಳುನಾಡಿನ ಕೆಲ ಭಾಗಗಳು, ಪುದುಚೇರಿ ಮತ್ತು ಕಾರೈಕಲ್,  ಕೇರಳ ಮತ್ತು ಮಾಹೆಯಲ್ಲಿ ಮಳೆ ಮುನ್ಸೂಚನೆ (Rain Alert) ನೀಡಲಾಗಿದೆ. 

ಇದಲ್ಲದೆ,  ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದ ಪ್ರತ್ಯೇಕ ಭಾಗಗಳಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಸಾಧಾರಣದಿಂದ ಭಾರೀ ಮಲೆಯಾಗುವ ಸಾಧಯ್ತೆ ಇದೆ ಎಂದು ಹವಾನಾನ ಇಲಾಖೆ ತಿಳಿಸಿದೆ. 

ಇದನ್ನೂ ಓದಿ- ದೆಹಲಿಯ 60ಕ್ಕೂ ಹೆಚ್ಚು ಎನ್‌ಸಿಆರ್ ಶಾಲೆಗಳ ಬಾಂಬ್ ಭೀತಿ: ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ

ಮೇ 3 ರಿಂದ ಮೇ 6 ರ ಅವಧಿಯಲ್ಲಿ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಗುಡುಗು ಮಿಂಚಿನ ಜೊತೆಗೆ ಚದುರಿದ ಬೆಳಕಿನಿಂದ ಸಾಧಾರಣ ಮಳೆ/ಹಿಮಪಾತ ಸಾಧ್ಯತೆಯ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News