ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಉಳಿತಾಯ: ಡಿ.ಕೆ.ಶಿವಕುಮಾರ್

Congress guarantee schemes: 1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಇದಕ್ಕೆ ಉತ್ತರಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.  

Written by - Prashobh Devanahalli | Edited by - Puttaraj K Alur | Last Updated : Mar 1, 2024, 06:26 PM IST
  • ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ರೂ. ಉಳಿತಾಯ
  • ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ 1.20 ಸಾವಿರ ಕೋಟಿ ಹಣವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ
  • 1.56 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್‌ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ
ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಉಳಿತಾಯ: ಡಿ.ಕೆ.ಶಿವಕುಮಾರ್ title=
ಬಿಜೆಪಿ ವಿರುದ್ಧ ಡಿಕೆಶಿ ಆಕ್ರೋಶ!

ಹಾಸನ: ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ರೂ. ಉಳಿತಾಯವಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಹೊರತಾಗಿ ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ 1.20 ಸಾವಿರ ಕೋಟಿ ರೂ. ಹಣವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಹಾಸನದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ʼ1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಇದಕ್ಕೆ ಉತ್ತರಿಸಲಿʼ ಎಂದು ಕುಟುಕಿದರು. 

ಬಿಜೆಪಿ ಸರ್ಕಾರದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು. ಬಿಜೆಪಿಯವರು ವಿದ್ಯುತ್‌ ಬೆಲೆ ಏರಿಕೆ ಮಾಡಿದ್ದರು. ನಾವು ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ ಬೆಲೆ ಇಳಿಕೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ಜಗಳವಾಡುತ್ತಾರೆ ಎಂದು ಗುಲ್ಲೆಬ್ಬಿಸಿದರು. ಯಾವುದಾದರೂ ಮನೆಯಲ್ಲಿ ಜಗಳ ಉಂಟಾಗಿದೆಯೇ? ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರು, ʼಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಹೆಚ್ಚು ಜನರು ಬರುತ್ತಿದ್ದಾರೆ. ಹುಂಡಿ ತುಂಬಿ ತುಳುಕುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ಹೆಸರಿನಲ್ಲಿ ಮಹಿಳೆಯರು ಅರ್ಚನೆ ಮಾಡಿಸುತ್ತಿದ್ದಾರೆʼ ಎಂದು ಪತ್ರ ಬರೆದಿದ್ದರು. ಜನರ ಪ್ರಾರ್ಥನೆ ಎಂದಿಗೂ ಮೋಸ ಮಾಡುವುದಿಲ್ಲ. ಮಹಿಳೆಯರು ರಾಜ್ಯದ ನಾನಾ ದೇವಸ್ಥಾನಗಳನ್ನು ನೋಡುತ್ತಿದ್ದಾರೆ. ಮಕ್ಕಳನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸುತ್ತಿದ್ದಾರೆ. ತವರು ಮನೆಗೆ ಹೋಗಿ ಬರುತ್ತಿದ್ದಾರೆʼ ಎಂದು ಹೇಳಿದರು.

ಇದನ್ನೂ ಓದಿ: ಲೋಕಸಭೆಯಲ್ಲಿ ಗೆಲ್ಲಲು ಬಿಜೆಪಿ ಭರ್ಜರಿ ತಯಾರಿ

ನಮ್ಮ ಯೋಜನೆಗಳಿಂದ ಆರ್ಥಿಕತೆಗೆ ಉತ್ತೇಜನ ನೀಡಲಾಗಿದೆ. ದುಡ್ಡು ಮತ್ತು ಬ್ಲಡ್‌ ಎರಡೂ ಚಲಾವಣೆಯಲ್ಲಿರಬೇಕು. ದುಡ್ಡು ಒಂದೇ ಕಡೆ ಇದ್ದರೆ ಕಳ್ಳರ, ಆದಾಯ ತೆರಿಗೆ ಅಧಿಕಾರಿಗಳ ಭಯ. ಬ್ಲಡ್‌ ಒಂದೇ ಕಡೆ ಇದ್ದರೆ ಅನಾರೋಗ್ಯ ಉಂಟಾಗುತ್ತದೆ. ನಾವು ಧರ್ಮವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ದೇವರು ಬೇರೆ, ರಾಜಕಾರಣ ಬೇರೆ. ಈ ಬಾರಿಯ ಸದನದಲ್ಲಿ ನಮ್ಮ ಸರ್ಕಾರ ಸಣ್ಣ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತು ಅರ್ಚಕರಿಗೆ ಸಹಾಯ ಮಾಡುವ ಕಾನೂನು ತರಲು ಹೊರಟೆವು. ಆದರೆ ಬಿಜೆಪಿಯವರು ಅದಕ್ಕೆ ವಿರೋಧಿಸಿದರು ಎಂದು ಡಿಕೆಶಿ ಕಿಡಿಕಾರಿದರು.

ಪ್ರತಿ ಗ್ರಾಮದಲ್ಲಿರುವ ಹನುಮಂತ, ಮಾರಮ್ಮ ಸೇರಿದಂತೆ ಸಣ್ಣ ದೇವಾಲಯಗಳನ್ನು ಅಭಿವೃದ್ಧಿ ಮಾಡಲು ಕಾನೂನು ತಂದರೆ ವಿರೋಧಿಸಿದರು. ʼಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃʼ ಅಂದರೆ ಅರ್ಚಕನ ಪ್ರಭಾವ ಮತ್ತು ಸಂಸ್ಕಾರದಿಂದ ಶಿಲೆಯಾದ ಮೂರ್ತಿ ಶಂಕರನಾಗುತ್ತೆ. ಇಂತಹ ಅರ್ಚಕರ ಅಭಿವೃದ್ಧಿಗೆ ಬಿಜೆಪಿಗರು ತಡೆಯೊಡ್ಡಿದರು. ನಮಗೆ ಜಾತಿ ಮುಖ್ಯವಲ್ಲ ನೀತಿ ಮುಖ್ಯ. ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಮೇಲೆ ಅಲ್ಲ. ನಾವು ಕೇವಲ ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆಗಳನ್ನು ನೀಡಿಲ್ಲ. ಎಲ್ಲರಿಗೂ ನೀಡಿದ್ದೇವೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದೆವು. ಆದರೆ ಆ ಹಣ ಬಿಡುಗಡೆಯಾಗಿರಲಿಲ್ಲ. ಸಿಎಂ ಸಿದ್ದರಾಮಯ್ಯ ಮತ್ತು ರಾಜಣ್ಣ ಅವರ ಕಾಳಜಿಯಿಂದ ಈ ಹಣ ಬಿಡುಗಡೆ ಮಾಡಿ ಸಹಕಾರಿ ಸಂಘ ಮತ್ತು ರೈತರಿಗೆ ಬೆನ್ನೆಲುಬಾಗಿದ್ದೇವೆ ಎಂದು ತಿಳಿಸಿದರು. 

ನಿಮ್ಮ ಸೇವೆಗೆ ನಾವು ಸದಾ ಸಿದ್ಧರಾಗಿದ್ದೇವೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮವಾದ ಆಡಳಿತ ನೀಡುತ್ತೇವೆ. ಮುಂದಕ್ಕೂ ನೀವು ನಮ್ಮ ಕೈ ಹಿಡಿಯುತ್ತೀರಾ ಎಂದು ನಂಬಿದ್ದೇವೆ. ಬಡವರ ಪರವಾಗಿ ನಾವು ಹೋರಾಟ ಮಾಡುತ್ತೇವೆ. ಬಡತನದ ವಿರುದ್ದ ಹೋರಾಟ ಮಾಡುತ್ತೇವೆ. ಇಂದಿರಾ ಗಾಂಧಿ, ದೇವರಾಜ ಅರಸು, ಬಂಗಾರಪ್ಪ ಅವರ ಕಾಲದಲ್ಲಿ ಜನರಿಗೆ ಮನೆ, ಭೂಮಿಯನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಡಿಕೆಶಿ ಹೇಳಿದರು.

ಇದನ್ನೂ ಓದಿ:  ಜಾತಿ ಸಮೀಕ್ಷೆ ವರದಿ ಸ್ವೀಕಾರ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ : ಬಸವರಾಜ ಬೊಮ್ಮಾಯಿ

ಶಿವಲಿಂಗೇಗೌಡರಿಗೆ ಬಂಪರ್‌ ಹೊಡೆದಿದೆ!

ಹಾಸನ ಜಿಲ್ಲೆಯ ಜನಪ್ರತಿನಿಧಿಗಳು ಒಂದಷ್ಟು ಅನುದಾನಗಳ ಬಿಡುಗಡೆಗೆ ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ನಮ್ಮ ಶಿವಲಿಂಗೇಗೌಡರು ಬಂಪರ್‌ ಹೊಡೆದಿದ್ದಾರೆ. ಈ ವರ್ಷ ಮಳೆ ಬಿದ್ದು ನೀರು ಬಂದರೆ, ಎತ್ತಿನಹೊಳೆ ಮೂಲಕ ಎಲ್ಲಾ ಕೆರೆಗಳನ್ನು ತುಂಬಿಸುವ ಕೆಲಸವಾಗುತ್ತದೆ. ನಿಮ್ಮೆಲ್ಲರ ಮತ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಯಿತು. ಹಾಸನದ ಕಾರ್ಯಕ್ರಮಕ್ಕೆ ಬರಲೇಬೇಕು ಎಂದು ಶಿಮ್ಲಾದಿಂದ ರಾತ್ರೋರಾತ್ರಿ ನಿಮ್ಮನ್ನು ನೋಡಲು ಬಂದಿದ್ದೇನೆ ಎಂದರು.

ಪ್ರತಿವರ್ಷ ನಾನು ಹಾಸನಾಂಭ ದೇವಿಯ ದರ್ಶನ ಮಾಡತ್ತೇನೆ. ನಮ್ಮ ಸರ್ಕಾರ ಬಂದ ಹೊಸತರಲ್ಲಿ ಸಚಿವರಾದ ಕೆ.ಎನ್.ರಾಜಣ್ಣರ ನೇತೃತ್ವದಲ್ಲಿ ಲಕ್ಷಾಂತರ ಭಕ್ತರು ದೇವಿಯ  ದರ್ಶನ ಮಾಡಿದರು. ʼನಿಂಬೆಗಿಂ ಹುಳಿಯಿಲ್ಲ, ತುಂಬೆಗಿಂ ಕರಿದಿಲ್ಲ,  ನಂಬಿಗೆಯಿಂದಧಿಕ ಗುಣವಿಲ್ಲ, ದೈವವುಂ ಶುಭವಿಂದಿಲ್ಲʼ ಈ ವಚನದ ಆಶಯದಂತೆ ನಾವೆಲ್ಲಾ ನಡೆಯಬೇಕು. ʼಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕುಮಾರಣ್ಣ ತೆನೆ ಕಿತ್ತು ಎಸೆದು ಕಮಲ ತಬ್ಬಿಕೊಂಡರು. ಅದಕ್ಕೆ ನಾನು ಪದೇ, ಪದೇ ಈ ಮಾತನ್ನು ಹೇಳುತ್ತೇನೆ. ಕಮಲ ಕೆರೆಯಲ್ಲಿ ಇದ್ದರೆ ಚೆಂದ, ದಾನ ಮಾಡುವ ಕೈ ಅಧಿಕಾರದಲ್ಲಿ ಇದ್ದರೆ ಚೆಂದʼವೆಂದು ಡಿಕೆಶಿ ಕುಟುಕಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News