ಅಮರನಾಥ ಯಾತ್ರೆಯಲ್ಲಿ ಹವಾಮಾನ ವೈಪರೀತ್ಯ: ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

ಹವಾಮಾನ ವೈಪರೀತ್ಯ ಹಿನ್ನೆಲೆ ಅಮರನಾಥ ಯಾತ್ರೆಗೆ ತೆರಳಿದ್ದ ರಾಜ್ಯದ 80 ಮಂದಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ರಕ್ಷಣೆಗೆ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Written by - Puttaraj K Alur | Last Updated : Jul 9, 2023, 01:41 PM IST
  • ಅಮರನಾಥ ಯಾತ್ರೆಯಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು
  • ರಾಜ್ಯದ 80 ಮಂದಿ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
  • ಗದಗ ಜಿಲ್ಲೆಯ 23 ಮಂದಿ ಸೇರಿ 80 ಮಂದಿಯ ರಕ್ಷಣೆಗೆ ಕ್ರಮವೆಂದ ಡಿಸಿಎಂ ಡಿ.ಕೆ.ಶಿವಕುಮಾರ್
ಅಮರನಾಥ ಯಾತ್ರೆಯಲ್ಲಿ ಹವಾಮಾನ ವೈಪರೀತ್ಯ: ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ title=
ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ರಕ್ಷಣೆ ಸರ್ಕಾರ ಕ್ರಮ

ಬೆಂಗಳೂರು: ಹವಾಮಾನ ವೈಪರೀತ್ಯ ಹಿನ್ನೆಲೆ ಅಮರನಾಥ ಯಾತ್ರೆಗೆ ತೆರಳಿದ್ದ ರಾಜ್ಯದ 80 ಮಂದಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ರಕ್ಷಣೆಗೆ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್‌ ತಿದ್ದುಪಡಿ ಮಸೂದೆ ತರಾತುರಿಯಲ್ಲಿ ಬೇಡ: ರೈತ ಸಮುದಾಯ ಕಳವಳ

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ. ಗದಗನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ - ಸಚಿವ ಪ್ರಿಯಾಂಕ್ ಖರ್ಗೆ 

ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಹವಾಮಾನ ವೈಪರೀತ್ಯದಿಂದ ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಮಂದಿ ಸೇರಿದಂತೆ ಒಟ್ಟು 80 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿರುವ ವಿಷಯವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಂಕಷ್ಟದಲ್ಲಿ ಸಿಲುಕಿರುವ ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆತರುವ ವ್ಯವಸ್ಥೆ ಮಾಡಲಾಗಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News