ಮಹಿಳೆಯರು ಸುರಕ್ಷಿತವಾಗಿ ಮನೆಗೆ ಬರಬೇಕೆಂದರೆ ಬಿಜೆಪಿಗೆ ಮತ ಹಾಕಿ: ಬಸವರಾಜ ಬೊಮ್ಮಾಯಿ

ಇದು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ ನಮ್ಮ ತಾಯಂದಿರು, ಹೆಣ್ಣು ಮಕ್ಕಳು ಸುರಕ್ಷಿತವಾಗಿ ಮನೆಗೆ ಬರಲು ಬಿಜೆಪಿಗೆ ಮತ ಹಾಕಿ. ಅವರು ಆತಂಕದಲ್ಲಿಯೇ ಇರಬೇಕೆಂದರೆ ಕಾಂಗ್ರೆಸ್ ಗೆ ಮತ ಹಾಕಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Written by - Prashobh Devanahalli | Edited by - Krishna N K | Last Updated : Apr 25, 2024, 10:50 PM IST
    • ಹೆಣ್ಣು ಮಕ್ಕಳು ಸುರಕ್ಷಿತವಾಗಿ ಮನೆಗೆ ಬರಬೇಕೆಂದರೆ ಬಿಜೆಪಿಗೆ ಮತ ಹಾಕಿ
    • ಆತಂಕದಲ್ಲಿಯೇ ಇರಬೇಕೆಂದರೆ ಕಾಂಗ್ರೆಸ್ ಗೆ ಮತ ಹಾಕಿ
    • ಮತದಾರರಿಗೆ ಮನವಿ ಮಾಡಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
ಮಹಿಳೆಯರು ಸುರಕ್ಷಿತವಾಗಿ ಮನೆಗೆ ಬರಬೇಕೆಂದರೆ ಬಿಜೆಪಿಗೆ ಮತ ಹಾಕಿ: ಬಸವರಾಜ ಬೊಮ್ಮಾಯಿ title=

ಹಾವೇರಿ: ನಿಮ್ಮ ಮನೆಯ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಮನೆಗೆ ಬರಬೇಕೆಂದರೆ ಬಿಜೆಪಿಗೆ ಮತ ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಅವರು ಇಂದು ಬ್ಯಾಡಗಿ ವಿಧಾನಸಭಾ ಕ್ಷೇತ್ತದ ಹಿರೇ ಅಣಜಿ, ಸೂಡಂಬಿ, ಗಾಳಪೂಜಿ, ಹಿರೇಹಳ್ಳಿ ಗ್ರಾಮದಲ್ಲಿ ರೋಡ್ ಶೋ ಮೂಲಕ ಮತ ಯಾಚನೆ ಮಾಡಿ, ಇದು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ ನಮ್ಮ ತಾಯಂದಿರು, ಹೆಣ್ಣು ಮಕ್ಕಳು ಸುರಕ್ಷಿತವಾಗಿ ಮನೆಗೆ ಬರಲು ಬಿಜೆಪಿಗೆ ಮತ ಹಾಕಿ. ಅವರು ಆತಂಕದಲ್ಲಿಯೇ ಇರಬೇಕೆಂದರೆ ಕಾಂಗ್ರೆಸ್ ಗೆ ಮತ ಹಾಕಿ ಎಂದರು.  

ಇದನ್ನೂ ಓದಿ:ಚಾಮರಾಜನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್‌ ಕಾರ್ಯ

ರೈತರ ಕಿಸಾನ್ ಸಮ್ಮಾನ ಯೋಜನೆ ಮುಂದುವರೆಯಬೇಕೆಂದರೆ ಬಿಜೆಪಿಗೆ ಹಾಕಿ, ರೈತ ವಿದ್ಯಾನಿಧಿ ಯೋಜನೆ ಮತ್ತೆ ಬರಬೇಕು ಎಂದರೆ ಬಿಜೆಪಿಗೆ ಮತ ಹಾಕಿ, ಕೊವಿಡ್ ಸಂದರ್ಭದಲ್ಲಿ ಮೋದಿಯವರು ಲಸಿಕೆ ಹಾಕಿಸಿ ಜೀವ ಉಳಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಟ್ಟರು. ಈಗಲೂ ಮೋದಿಯವರು ಐದು ಕೆಜಿ ಕೊಡುತ್ತಿದ್ದಾರೆ. ಮೋದಿಯವರ ಅಕ್ಕಿ, ಕಾಂಗ್ರೆಸ್ ಭಾಗ್ಯ ಎಂದು ಹೇಳಿಕೊಳ್ಳುತ್ತಿದೆ. ರೈತರ ಪಂಪ್ ಸೆಟ್ ಗಳಿಗೆ ಟಿಸಿಗಳನ್ನು ನಮ್ಮ ಅವಧಿಯಲ್ಲಿ 25. ಸಾವಿರಕ್ಕೆ ಕೊಡುತ್ತಿದ್ದೇವು. ಈಗ ಎರಡೂವರೆ ಲಕ್ಷ ರೂ. ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್ ಹೊಸದಾಗಿ ಗ್ಯಾರೆಂಟಿ ಕಾರ್ಡ್ ಗಳನ್ನು ಹಂಚುತ್ತಿದ್ದಾರೆ. ಗ್ಯಾರೆಂಟಿ ಕಾರ್ಡ್ ಹಂಚದಂತೆ ಚುನಾವಣಾ ಆಯೋಗದ ಆದೇಶ ಆಗಿದೆ. ಇನ್ನು ಮುಂದೆ ಅವರು ಗ್ಯಾರೆಂಟಿ ಕಾರ್ಡ್ ಹಂಚುವಂತಿಲ್ಲ. ಗ್ಯಾರೆಂಟಿ ಕಾರ್ಡ್ ಗಳನ್ನು ಹಂಚಲು ಬಂದರೆ, ಅದನ್ನು ತಡೆದು ಆಯೋಗಕ್ಕೆ ದೂರು ನೀಡಿ, ಅನಿಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ, ಒಂದೇ ವರ್ಷದಲ್ಲಿ ಮತ್ತೆ ಚುನಾವಣೆ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ವಿರೂಪಾಕ್ಷಪ್ಪ ಬಳ್ಳಾರಿ ಮತ್ತೆ ಶಾಸಕರಾಗಿ ಆಯ್ಕೆಯಾಗಲಿದ್ದಾರೆ ಎಂದರು. 

ಇದನ್ನೂ ಓದಿ:ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ನವರು ಹೊಸ ಕಾಯ್ದೆ ತರುತ್ತಿದ್ದು, ನಾವು ನಮ್ಮ ಪಿತ್ರಾರ್ಜಿತ ಆಸ್ತಿಯನ್ನು ಪಡೆಯಬೇಕಾದರೆ, ನಾವು ಶೇ 55% ರಷ್ಟು ತೆರಿಗೆ ಕಟ್ಟಬೇಕು. ಇಲ್ಲದಿದ್ದರೆ ಆಸ್ತಿ ಬಿಟ್ಟು ಕೊಡಬೇಕು. ಈ ರೀತಿಯ ಕಾನೂನು ತರುವುದಾಗಿ ರಾಹುಲ್  ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಗೆ ಮತ ಹಾಕಿದರೆ, ಆಸ್ತಿ ಹಂಚಿಕೆ ಕಾಯ್ದೆ ಜಾರಿಗೆ ತರಿತ್ತಾರೆ. ಇದರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಈ ಕಾಯ್ದೆ ಬಂದರೆ ದೇಶದಲ್ಲಿ ಕ್ಷೋಭೆ ಉಂಟಾಗಲಿದೆ ಎಂದು ಹೇಳಿದರು. ನಿಮ್ಮ ಉತ್ಸಾಹ ನೋಡಿ ನನಗೆ ಶಕ್ತಿ ಬಂದಿದೆ. ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News