ದೆಹಲಿಯಲ್ಲಿ ಪಿಎಂ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ

ಸಿಎಂ ಬೊಮ್ಮಾಯಿ ಅವರು ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅರಣ್ಯ, ಆಹಾರ ಮತ್ತು  ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಉಪಸ್ಥಿತರಿದ್ದರು.

Written by - Channabasava A Kashinakunti | Last Updated : Nov 11, 2021, 03:48 PM IST
  • ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
  • ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ
  • ಇದಕ್ಕೂ ಮೊದಲು ಸಿಎಂ ಬೊಮ್ಮಾಯಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿಯಾಗಿದ್ದರು
ದೆಹಲಿಯಲ್ಲಿ ಪಿಎಂ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ title=

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದಕ್ಕೂ ಮೊದಲು ಸಿಎಂ ಬೊಮ್ಮಾಯಿ ಅವರು ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ(Pralhad Joshi) ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅರಣ್ಯ, ಆಹಾರ ಮತ್ತು  ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಉಪಸ್ಥಿತರಿದ್ದರು.

ಇದನ್ನೂ ಓದಿ : Basavaraj Bommai : 'ಹಾನಗಲ್ ಕಾಂಗ್ರೆಸ್ ಅಭ್ಯರ್ಥಿ ತಮ್ಮ ಸ್ವಂತ ಪರಿಶ್ರಮದಿಂದ ಗೆದ್ದಿದ್ದಾರೆ'

ನಿನ್ನೆ ರಾತ್ರಿ ದೆಹಲಿಯಲ್ಲಿ ನಡೆದ ಟೈಮ್ಸ್ ನೌ ಸಮ್ಮಿಟ್  ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ(Basavaraj Bommai) ಅವರು ಭಾಗವಹಿಸಿ ಮಾತನಾಡಿದ ಅವರು, ಯಡಿಯೂರಪ್ಪ ಪಕ್ಷದ ಹಿರಿಯ ನಾಯಕರಾಗಿದ್ದು, ಅವರು ಕಲ್ಪಿಸಿದ ಕಾರ್ಯಕ್ರಮಗಳು ಮತ್ತು ಯೋಜನೆಗಳೊಂದಿಗೆ ನಾನು ಮುಂದುವರಿಯುತ್ತಿದ್ದೇನೆ. ಹೆಚ್ಚುವರಿಯಾಗಿ, ನಾನು ಕರ್ನಾಟಕದ ಜನರ ಅಗತ್ಯಗಳಿಗೆ ಸ್ಪಂದಿಸಿದ್ದೇನೆ ಎಂದು ಹೇಳಿದರು.

ನನ್ನ ತಂದೆ ಎಸ್‌ಆರ್ ಬೊಮ್ಮಾಯಿ(SR Bommai) ಅವರ ರಾಜಕೀಯ ಪರಂಪರೆಯನ್ನು ಮುಂದುವರಿಸುವುದು ಎಷ್ಟು ಸವಾಲಿನ ಸಂಗತಿಯಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಜನರು ಹೋಲಿಸಲು ಒಲವು ತೋರುವ ಸಮಯದಲ್ಲಿ ಅದು ಕಷ್ಟವಾಗುತ್ತದೆ ಎಂದು ಒಪ್ಪಿಕೊಂಡರು.

ಇದನ್ನೂ ಓದಿ : ಟಿಪ್ಪು ಮತಾಂಧ ಎನ್ನುವ ಬಿಜೆಪಿಯವರೇ ಟಿಪ್ಪು ಜಯಂತಿ ಮಾಡಿದ್ರು: ಸಿದ್ದರಾಮಯ್ಯ

ನಾನು ತಕ್ಷಣ ನನ್ನ ತಂದೆ ಮತ್ತು ಯಡಿಯೂರಪ್ಪ(BS Yediyurappa)ನವರಂತೆ ಆಗಬೇಕೆಂದು ಜನರು ಬಯಸುತ್ತಿದ್ದಾರೆ. ಆದ್ದರಿಂದ, ನಾನು ಒತ್ತಡವನ್ನು ಅನುಭವಿಸುತ್ತೇನೆ. ಆದರೆ ನಾನು ಐದು ಮುಖ್ಯಮಂತ್ರಿಗಳ ಅಡಿಯಲ್ಲಿ ಕೆಲಸ ಮಾಡಿದ್ದೇನೆ ಮತ್ತು ಅನುಭವವು ಸಾಕಷ್ಟು ಸಹಾಯಕವಾಗಿದೆ. ನಾನು ಈ ಸವಾಲನ್ನು ಒಂದು ಅವಕಾಶವಾಗಿ ತೆಗೆದುಕೊಳ್ಳುತ್ತೇನೆ, ”ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News