ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಸಿಎಂ ಬೊಮ್ಮಾಯಿ ಖುಷ್..!

2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್ಎಲ್‌ಸಿ  ಪರೀಕ್ಷಾ ಫಲಿತಾಂಶಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.  

Written by - Zee Kannada News Desk | Last Updated : May 19, 2022, 05:23 PM IST
  • 2021-22ನೇ ಸಾಲಿನಲ್ಲಿ 8,53,436 ವಿದ್ಯಾರ್ಥಿಗಳು ಹಾಜರಾಗಿದ್ದು, 7,30,881 ಉತ್ತೀರ್ಣರಾಗಿ ಶೇಕಡವಾರು ಫಲಿತಾಂಶ 85.63% ರಷ್ಟು ಆಗಿದೆ.
  • ಈ ಸಲದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಔಟ್ ಆಫ್ ಔಟ್ 625 ಅಂಕಕ್ಕೆ 625 ಅಂಕವನ್ನ 145 ಮಕ್ಕಳು ಪಡೆದುಕೊಂಡಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಸಿಎಂ ಬೊಮ್ಮಾಯಿ ಖುಷ್..! title=

ಬೆಂಗಳೂರು:  2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್ಎಲ್‌ಸಿ  ಪರೀಕ್ಷಾ ಫಲಿತಾಂಶಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು 'ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯವು, ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಫಲಿತಾಂಶ 85.63% ನ್ನು ಸಾಧಿಸಿದ್ದು ಹೆಮ್ಮೆಯ ಸಂಗತಿ. ಉತ್ತಮ ಅಂಕಗಳಿಸಿ ತೇರ್ಗಡೆಯಾದ ಎಲ್ಲ ವಿದ್ಯಾರ್ಥಿ ವೃಂದಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಸಿಎಂ ಬೊಮ್ಮಾಯಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು ಮುಂದುವರೆದು 'ಈ ಮಹತ್ಸಾಧನೆಗೆ ಕಾರಣವಾದ ಎಲ್ಲ ಶಿಕ್ಷಕ-ಶಿಕ್ಷಕಿಯರು, ತರಬೇತುದಾರರು ಅಭಿನಂದನಾರ್ಹರು. ವಿದ್ಯಾರ್ಥಿಗಳ ವಿಜಯ ಯಾತ್ರೆ ಹೀಗೆ ಮುಂದುವರಿಯಲಿ, ನಾಡಿಗೆ ಕೀರ್ತಿ ತರುವಂತಾಗಲಿ.ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದದೇ ಮುಂದಿನ ಭಾರಿ ಮತ್ತಷ್ಟು ಪರಿಶ್ರಮದಿಂದ ಪರೀಕ್ಷೆ ಬರೆದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ‌' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: SSLC Result 2022: 85.63% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

2021-22ನೇ ಸಾಲಿನಲ್ಲಿ 8,53,436 ವಿದ್ಯಾರ್ಥಿಗಳು ಹಾಜರಾಗಿದ್ದು, 7,30,881 ಉತ್ತೀರ್ಣರಾಗಿ ಶೇಕಡವಾರು ಫಲಿತಾಂಶ 85.63% ರಷ್ಟು ಆಗಿದೆ.ಈ ಸಲದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಔಟ್ ಆಫ್ ಔಟ್ 625 ಅಂಕಕ್ಕೆ 625 ಅಂಕವನ್ನ 145 ಮಕ್ಕಳು ಪಡೆದುಕೊಂಡಿದ್ದಾರೆ. 

ಇದನ್ನೂ ಓದಿ: Karnataka SSLC Result 2022: ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೆಕ್‌ ಮಾಡಲು ಲಿಂಕ್‌ ಇಲ್ಲಿದೆ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News