Congress 1st Lok Sabha List: ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ!

Geetha shivarajkumar: ಈ ಹಿಂದೆ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ ಕುಮಾರ್‌, ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರ ಎದುರು ಕಣ್ಣಕ್ಕಿಳಿಯಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ..  

Written by - Savita M B | Last Updated : Mar 9, 2024, 12:22 PM IST
  • ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
  • ಶುಕ್ರವಾರ ಬಿಡುಗಡೆಯಾದ ಈ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಲ್ಲಿ ಸರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
Congress 1st Lok Sabha List: ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ! title=

 Congress: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಹುಲ್ ಗಾಂಧಿ,  ಶಶಿ ತರೂರ್ ಸೇರಿದಂತೆ ಒಟ್ಟು 9 ರಾಜ್ಯಗಳ 39 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಿದೆ.. ಶುಕ್ರವಾರ ಬಿಡುಗಡೆಯಾದ ಈ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಲ್ಲಿ ಸರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಎಲ್ಲರ ನಿರೀಕ್ಷೆಯಂತೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸಹ ಟಿಕೆಟ್‌ ಸಿಕ್ಕಿದ್ದು... ಶಿವಮೊಗ್ಗದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.. ಇನ್ನು ಮಂಡ್ಯ ಲೋಕ ಸಭಾ ಕ್ಷೇತ್ರದಿಂದ ವೆಂಕಟರಾಮೇಗೌಡ (ಸ್ಟಾರ್ ಚಂದ್ರು) ಸ್ಪರ್ಧಿಸಲಿದ್ದಾರೆ.. ಇಷ್ಟೇ ಅಲ್ಲ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿ.ಕೆ ಸುರೇಶ್ ಅಖಾಡಕ್ಕಿಳಿಯಲಿದ್ದು.. ಬಿಜೆಪಿ ನಡುವೆ ಮತ್ತೆ ಭರ್ಜರಿ ಪೈಪೋಟಿ ನಡೆಯಲಿದೆ... 

ಇದನ್ನೂ ಓದಿ-Lokasabha Election 2024: ಈ ಬಾರಿ ಏಲಕ್ಕಿ ನಾಡಿನಲ್ಲಿ ಗೆಲ್ಲೋ ಕುದುರೆ ಯಾವುದು?

ಯಾವ ಕ್ಷೇತ್ರದಿಂದ ಯಾವ ಸ್ಪರ್ಧಿ ಕಣಕ್ಕೆ?
ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್
ಮಂಡ್ಯ – ವೆಂಕಟರಾಮೇಗೌಡ  
ತುಮಕೂರು – ಎಸ್.ಪಿ ಮುದ್ದಹನುಮೇಗೌಡ
ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
ಹಾಸನ – ಎಂ. ಶ್ರೇಯಸ್ ಪಟೇಲ್
ವಿಜಯಪುರ – ಹೆಚ್.ಆರ್. ಅಲ್ಗೂರು 

ಇದನ್ನೂ ಓದಿ-ಹವಾಮಾನ ವೈಪರಿತದಿಂದ ಮಾವಿನ ಬೆಳೆಗೆ ತೊಂದರೆಯಾದರೆ ಈ ಸಂರಕ್ಷಣಾ ಕ್ರಮ ಅನುಸರಿಸಿ...!

 

Trending News