ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ; ಔಷಧಿ ಸಿಂಪಡಣೆ & ಸೊಳ್ಳೆ ನಿಯಂತ್ರಣದ ಅರಿವು ಕಾರ್ಯಕ್ರಮ

Dengue outbreak in Bangalore: ಬೆಂಗಳೂರಿನಲ್ಲಿ ತೀವ್ರತರ ಸೊಳ್ಳೆ ನಿಯಂತ್ರಣ ಕಾರ್ಯವನ್ನು ಮುಂದಿನ ಆದೇಶದವರೆಗೆ ಮುಂದುವರೆಸಲಾಗುತ್ತದೆ. ಜೊತೆಗೆ ಡೆಂಗ್ಯೂ ಕುರಿತಂತೆ ಶಾಲಾ-ಕಾಲೇಜುಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

Written by - Zee Kannada News Desk | Last Updated : Sep 6, 2023, 09:08 PM IST
  • ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗಿದೆ
  • BBMP ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ
  • ಸೊಳ್ಳೆ ನಿಯಂತ್ರಣದ ಅರಿವು ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ರಮ
ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ; ಔಷಧಿ ಸಿಂಪಡಣೆ & ಸೊಳ್ಳೆ ನಿಯಂತ್ರಣದ ಅರಿವು ಕಾರ್ಯಕ್ರಮ title=
ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ನಗರದ ಎಲ್ಲಾ 198 ವಾರ್ಡ್ ಗಳಲ್ಲಿಯೂ ಸೊಳ್ಳೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ರಮವನ್ನು ಹೆಚ್ಚಿಸಲಾಗಿದೆ.

ಬೆಂಗಳೂರಿನಲ್ಲಿ ತೀವ್ರತರ ಸೊಳ್ಳೆ ನಿಯಂತ್ರಣ ಕಾರ್ಯವನ್ನು ಮುಂದಿನ ಆದೇಶದವರೆಗೆ ಮುಂದುವರೆಸಲಾಗುತ್ತದೆ. ಜೊತೆಗೆ ಡೆಂಗ್ಯೂ ಕುರಿತಂತೆ ಶಾಲಾ-ಕಾಲೇಜುಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪತಿಯನ್ನು ಸಂಸತ್ ಉದ್ಘಾಟನೆಗೆ ಆಹ್ವಾನಿಸದೆ ಇರುವುದು ಸನಾತನಕ್ಕೆ ಉದಾಹರಣೆ- ಉದಯನಿಧಿ ಸ್ಟಾಲಿನ್ 

ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಣೆ ಕಾರ್ಯ ಮಾಡಲಾಗುತ್ತದೆ. ಪಾಲಿಕೆಯ ಕಸದ ವಾಹನಗಳಲ್ಲಿಯೂ ಸಹ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ ಕಾಯಿಲೆಯ ಬಗ್ಗೆ ಅರಿವು ಮೂಡಿಸುವ ಪ್ರಚಾರ ಮಾಡಿಸಲಾಗುತ್ತಿದೆ.

ಕೊಳಚೆ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ತಂಡಗಳನ್ನು ರಚಿಸಿಕೊಂಡು ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಹೊಸ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯವರನ್ನ ಆಹ್ವಾನಿಸಲಿಲ್ಲ : ಸನಾತನ ಜಾತಿ ತಾರತಮ್ಯಕ್ಕೆ ಅತ್ಯುತ್ತಮ ಉದಾಹರಣೆ

ಈ ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ ಎಂದು ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 94806 88300 ಸಂಖ್ಯೆಯನ್ನು ಸಂಪರ್ಕಿಸಬಹುದು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News