ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

Hassan Pen Drive Case: ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಲುಕ್‌ಔಟ್‌ ನೋಟಿಸ್‌ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ.

Written by - Puttaraj K Alur | Last Updated : May 4, 2024, 04:17 PM IST
  • ಪ್ರಜ್ವಲ್‌ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ SITಗೆ ಸಿಎಂ ಸೂಚನೆ
  • ಪ್ರಕರಣ ಸಂಬಂಧ SIT ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
  • ಲುಕ್‌ಔಟ್‌ ನೋಟಿಸ್‌ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದ ಅಧಿಕಾರಿಗಳು
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ title=
ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ

ಬೆಂಗಳೂರು: ಅಶ್ಲೀಲ ವಿಡಿಯೋ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ವಿಶೇಷ ತನಿಖಾ ತಂಡ(SIT)ದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆಂದು ವರದಿಯಾಗಿದೆ. 

ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್‌ ರೇವಣ್ಣ ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಪ್ರಕರಣ ಸಂಬಂಧ SIT ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯನವರು ಇದುವರೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 

ಇದನ್ನೂ ಓದಿ: ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ತಡರಾತ್ರಿವರಗೆ ಪ್ರಚಾರ

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಲುಕ್‌ಔಟ್‌ ನೋಟಿಸ್‌ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸಿಎಂಗೆ ತಿಳಿಸಿದ್ದಾರೆ. ಪ್ರಜ್ವಲ್‌ ಬಂಧನಕ್ಕೇ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸುವುದಿಲ್ಲವೆಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. 

ಸೂಕ್ತ ಕ್ರಮಗಳೊಂದಿಗೆ ಪ್ರಜ್ವಲ್ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್‌ ನೋಟಿಸ್‌ ಹೊರಡಿಸುವ ಸಾಧ್ಯತೆ ಇದ್ದು, ಇದರಿಂದ ತನಿಖೆಗೆ ಮತ್ತಷ್ಟು ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ಸಿಎಂಗೆ ತಿಳಿಸಿದ್ದಾರೆ ಅಂತಾ ತಿಳಿದುಬಂದಿದೆ. 

ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News