ಪರಿಹಾರದ ಹಣ ತರುತ್ತಿರೋ ಅಥವಾ ಬರಿಗೈ ಬೀಸಿ ಹೋಗುತ್ತೀರೋ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ. ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೋದಿ ಜೊತೆಗೆ ಸಿದ್ದರಾಮಯ್ಯನವರೂ ಭಾಗಿಯಾಗಲಿದ್ದಾರೆ.

Written by - Puttaraj K Alur | Last Updated : Jan 19, 2024, 02:04 PM IST
  • ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ & ತಂತ್ರಜ್ಞಾನ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಿ ಮೋದಿ
  • 43 ಎಕರೆ ಕ್ಯಾಂಪಸ್‌ನಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಬಿಐಇಟಿಸಿಯನ್ನು ನಿರ್ಮಿಸಲಾಗಿದೆ
  • ಪ್ರಧಾನಿ ಮೋದಿ ರಾಜ್ಯ ಪ್ರವಾಸ ಹಿನ್ನೆಲೆ ಟೀಕಾಪ್ರಹಾರ ನಡೆಸಿದ ಕಾಂಗ್ರೆಸ್
ಪರಿಹಾರದ ಹಣ ತರುತ್ತಿರೋ ಅಥವಾ ಬರಿಗೈ ಬೀಸಿ ಹೋಗುತ್ತೀರೋ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ title=
ಪ್ರಧಾನಿ ಮೋದಿ ಟೀಕಿಸಿದ ಕಾಂಗ್ರೆಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು(ಜ.19) ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿರುವ ಮೋದಿ, 43 ಎಕರೆ ಕ್ಯಾಂಪಸ್‌ನಲ್ಲಿ 1,600 ಕೋಟಿ ರೂ. ಬಂಡವಾಳದೊಂದಿಗೆ ನಿರ್ಮಿಸಲಾದ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ)ವನ್ನು ಉದ್ಘಾಟಿಸಲಿದ್ದಾರೆ.

ಇದರೊಂದಿಗೆ ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಇದು ಹೆಣ್ಣು ಮಕ್ಕಳಿಗೆ ವಾಯುಯಾನ ಕ್ಷೇತ್ರದಲ್ಲಿ ಕೌಶಲ್ಯ ತರಬೇತಿಯನ್ನು ಪಡೆಯಲು ವಿಫುಲ ಅವಕಾಶಗಳನ್ನು ಒದಗಿಸುತ್ತದೆ. ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.

ಇದನ್ನೂ ಓದಿ: ಖರ್ಗೆ ಫ್ಯಾಮಿಲಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಯವರೇ, ಕರ್ನಾಟಕ ಭೀಕರ ಬರ ಎದುರಿಸಿದೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಲವು ಪತ್ರಗಳನ್ನು ಬರೆದಾಗಿದೆ, ಭೇಟಿಯಾಗಿ ಬರದ ಕುರಿತು ಮನವಿಯನ್ನೂ ಸಲ್ಲಿಸಿದ್ದಾರೆ. ನಿಮ್ಮ ಮೇಕಪ್ ಕಿಟ್ಟಿನಲ್ಲಿ ಅಥವಾ ನಿಮ್ಮ ಬಗೆಬಗೆಯ ಬಣ್ಣದ ಬಟ್ಟೆಗಳ ಸೂಟ್ ಕೇಸಿನಲ್ಲಿ ಕರ್ನಾಟಕಕ್ಕೆ ಬರ ಪರಿಹಾರದ ಹಣವನ್ನು ತುಂಬಿಕೊಂಡು ಬರುತ್ತಿದ್ದೀರಾ? ಅಥವಾ ಬರಿಗೈ ಬೀಸಿ ಹೋಗಲು ಬರುತ್ತಿದ್ದೀರಾ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.

ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ

ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ 7 ಗಂಟೆಗೆ ದೆಹಲಿಯಿಂದ ಹೊರಟು ಬೆಳಗ್ಗೆ 9:35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಿದ ಮೋದಿ ಅಲ್ಲಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಧ್ಯಾಹ್ನ ಮತ್ತೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: ರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌‌ಗೆ ಜಾಮೀನು ಪ್ರಕರಣ

ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. 2.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣಿಸಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ. ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೋದಿ ಜೊತೆಗೆ ಸಿದ್ದರಾಮಯ್ಯನವರೂ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಇಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ನಿರ್ಬಂಧಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News