Kidnapping Case: ಕಿಡ್ನಾಪ್ ಕೇಸಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಬಂಧನ..!

Kidnapping Case: ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಎಚ್.ಡಿ.ರೇವಣ್ಣನನ್ನು SIT ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ​

Written by - Puttaraj K Alur | Last Updated : May 4, 2024, 07:17 PM IST
  • ಸಂತ್ರಸ್ತೆಯನ್ನು ಕಿಡ್ನಾಪ್‌ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ
  • ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ರೇವಣ್ಣ ಬಂಧನ
  • ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ರೇವಣ್ಣನನ್ನು ವಶಕ್ಕೆ ತೆಗೆದುಕೊಂಡ SIT
Kidnapping Case: ಕಿಡ್ನಾಪ್ ಕೇಸಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಬಂಧನ..! title=
ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ!

ಬೆಂಗಳೂರು: ಮಹಿಳೆಯೊಬ್ಬರನ್ನು ಕಿಡ್ನಾಪ್‌ ಮಾಡಿದ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣರನ್ನು ಬಂಧಿಸಲಾಗಿದೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಎಚ್.ಡಿ.ರೇವಣ್ಣರನ್ನು SIT ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. 

ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಚ್.ಡಿ.ರೇವಣ್ಣ ಅವರು ಮಹಿಳೆಯೊಬ್ಬರನ್ನು ಕಿಡ್ನಾಪ್‌ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಕೆ.ಆರ್.ನಗರದಲ್ಲಿ ಕಿಡ್ನಾಪ್‌ ಆಗಿದ್ದ ಸಂತ್ರಸ್ತೆಯನ್ನು ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ SIT ಅಧಿಕಾರಿಗಳು ರಕ್ಷಿಸಿದ್ದರು. 

ಇದನ್ನೂ ಓದಿ: Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!

ರೇವಣ್ಣ ಆಪ್ತ ಸಹಾಯಕ ರಾಜಶೇಖರ್‌ ತೋಟದ ಮನೆಯಿಂದ SIT ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿ ಕರೆದೊಯ್ದಿದ್ದಾರೆ. ಏಪ್ರಿಲ್‌ 29ರಂದು ಸಂತ್ರಸ್ತೆಯ ಮನೆಯಿಂದ ರೇವಣ್ಣ ಸಂಬಂಧಿ ಸತೀಶ್ ಬಾಬು ಎಂಬಾತ ಆಕೆಯನ್ನು ಕರೆದೊಯ್ದಿದ್ದ. ಅಂದಿನಿಂದಲೂ ಹುಣಸೂರು ತಾಲೂಕಿನ ಕಾಳೇನಳ್ಳಿಯಲ್ಲಿರುವ ರೇವಣ್ಣ ಆಪ್ತ ಸಹಾಯಕ ರಾಜಶೇಖರ್ ತೋಟದಲ್ಲಿ ಸಂತ್ರಸ್ತೆಯನ್ನು ಇರಿಸಲಾಗಿತ್ತು. ತಮ್ಮ ತಾಯಿಯನ್ನು ಕಿಡ್ನಾಪ್‌ ಮಾಡಲಾಗಿದೆ ಎಂದು ಸಂತ್ರಸ್ತೆಯ ಮಗ ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದ.

ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಎಚ್.ಡಿ.ರೇವಣ್ಣನನ್ನು SIT ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಜಾಮೀನು ನಿರಾಕರಣೆಯಾಗುತ್ತಿದ್ದಂತೆಯೇ ಎಚ್.ಡಿ.ದೇವೇಗೌಡರ ನಿವಾಸಕ್ಕೆ 5-6 SIT ಅಧಿಕಾರಿಗಳ ತಂಡ ಭೇಟಿ‌ ನೀಡಿತ್ತು. ಈ ವೇಳೆ ಮನೆಯಲ್ಲಿದ್ದ ರೇವಣ್ಣನನ್ನು SIT ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News