Lok sabha Election 2024: ಲೋಕಸಭಾ ಚುನಾವಣೆಯ ನಂತರ ಬದಲಾಗ್ತಾರಾ ಸಿಎಂ?

Lok sabha Election 2024: ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸದಿದ್ದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀ‌ನಿವಾಸ್‌ ಹೇಳಿದ್ದಾರೆ.

Written by - Puttaraj K Alur | Last Updated : Mar 23, 2024, 05:38 PM IST
  • ಲೋಕಸಭಾ ಚುನಾವಣೆಯ ನಂತರ ಬದಲಾಗುತ್ತಾರಾ ಸಿಎಂ..?
  • ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜಿನಾಮೆ ಕೊಡಬೇಕಾಗುತ್ತದೆ
  • ಸಿಎಂ ಬದಲಾವಣೆ ಬಗ್ಗೆ ಶಾಸಕ ಎಸ್.ಆರ್.ಶ್ರಿನಿವಾಸ್ ಸ್ಫೋಟಕ ಹೇಳಿಕೆ
Lok sabha Election 2024: ಲೋಕಸಭಾ ಚುನಾವಣೆಯ ನಂತರ ಬದಲಾಗ್ತಾರಾ ಸಿಎಂ? title=
ಮತ್ತೆ ಸಿಎಂ ಬದಲಾವಣೆಯ ಕೂಗು!

ತುಮಕೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರಮುಖ ಪಕ್ಷಗಳ ನಾಯಕರು ಮತದಾರರನ್ನು ಒಲಿಸಿಕೊಳ್ಳಲು ಇನ್ನಿಲ್ಲದ ಸರ್ಕಸ್‌ ಮಾಡುತ್ತಿದ್ದಾರೆ. ಈ ಬಾರಿ ನಾವು ಹೆಚ್ಚು ಸ್ಥಾನ ಗೆಲ್ತೀವಿ ಅಂತಾ ಬಿಜೆಪಿಯವರು ಹೇಳಿದ್ರೆ, ಬಿಜೆಪಿಯವರಿಗಿಂತಲೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ತೀವಿ ಅಂತಾ ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ. 

ಇದೆಲ್ಲದರ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಸುದ್ದಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರ ನಡೆಸಿದ ಗುಬ್ಬಿ ಶಾಸಕ ಎಸ್.ಆರ್.ಶ್ರೀ‌ನಿವಾಸ್‌ ಸ್ಫೋಟಕ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶನಿವಾರ ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯ ಪ್ರಚಾರ ಭಾಷಣದ ವೇಳೆ ಅವರು ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಿಕ್ಸ್‌ ಆಗ್ತಿದ್ದಂತೆ BJP ಅಲರ್ಟ್‌

ಸಿಎಂ ಬದಲಾವಣೆಯ ಸುಳಿವು ನೀಡಿರುವ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಹೇಳಿಕೆಯಿಂದ ಲೋಕಸಭೆ ಚುನಾವಣೆ ನಂತರ ಬದಲಾಗ್ತಾರಾ ಸಿಎಂ ಅನ್ನೋ ಪ್ರಶ್ನೆ ಮೂಡಿದೆ. ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸದಿದ್ದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ. ಈ ಹಿನ್ನೆಲೆ ಬಡವರ ಪರ ಕೆಲಸ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಉಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕುʼ ಅಂತಾ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆಯ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಸಿಎಂ ಹುದ್ದೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಮೂರ್ನಾಲ್ಕು ಮಂದಿ ಸಚಿವರುಗಳು ಸಹ ಸಿಎಂ ಹುದ್ದೆ ಬಗ್ಗೆ ಆಗಾಗ ಹೇಳಿಕೆ ನೀಡಿ ಸುದ್ದಿ ಮಾಡುತ್ತಾರೆ. ಇದೀಗ ಪಕ್ಷದ ಶಾಸಕರೇ ಈ ರೀತಿ ಹೇಳಿಕೆ ನೀಡಿರುವುದು ಹಲವು ಅನುಮಾನುಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಗ್ರಾಹಕರ ಹಣ ಜಮಾ ಮಾಡದೇ 26 ಲಕ್ಷ ಗುಳುಂ ಮಾಡಿದ ಬ್ಯಾಂಕ್ ಕ್ಯಾಷಿಯರ್!

ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚಿನ ಸ್ಥಾನಗಳನ್ನು ಗೆಲ್ಲಲೇಬೇಕಾದ ಒತ್ತಡವು ಸಿಎಂ ಸಿದ್ದರಾಮಯ್ಯರ ಮೇಲಿದೆ. ಹೀಗಾಗಿ ಅವರು ಬಿಜೆಪಿಯನ್ನು ಸೋಲಿಸಲು ರಣತಂತ್ರ ರೂಪಿಸುತ್ತಿದ್ದಾರೆ. ನಾವು ಬಿಜೆಪಿಗಿಂತಲೂ ಹೆಚ್ಚಿನ ಸೀಟುಗಳನ್ನು ಗೆಲ್ಲುತ್ತೇವೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ರಾಜ್ಯದ ಮತದಾರರು ಯಾರಿಗೆ ಹೆಚ್ಚಿನ ಸ್ಥಾನ ನೀಡುತ್ತಾರೆ ಅನ್ನೋದರ ಬಗ್ಗೆ ಚುನಾವಣಾ ಫಲಿತಾಂಶದವರೆಗೂ ಕಾದು ನೋಡಬೇಕಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News