"ಬಸವಾದಿ ಶರಣರು ಬಯಸಿದರೆ ಮಲ್ಲಿಕಾರ್ಜುನ್ ಖರ್ಗೆ ಅವರು ದೇಶದ ಪ್ರಧಾನಿಯಾಗುತ್ತಾರೆ"

Mallikarjun Kharge: ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಸಂವಿಧಾನ 371ಜೆ ತಿದ್ದುಪಡಿಯ ಮೂಲಕ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದರು. ಹೀಗಾಗಿ ಈ ಭಾಗದಲ್ಲಿ ನಮ್ಮ ಸಮುದಾಯ ಸೇರಿದಂತೆ ಎಲ್ಲರಿಗೂ ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ರೀತಿಯ ಅನುಕೂಲವಾಗಿದೆ.

Written by - Manjunath N | Last Updated : May 4, 2024, 01:18 PM IST
  • ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಸಂವಿಧಾನ 371ಜೆ ತಿದ್ದುಪಡಿಯ ಮೂಲಕ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದರು.
  • ಹೀಗಾಗಿ ಈ ಭಾಗದಲ್ಲಿ ನಮ್ಮ ಸಮುದಾಯ ಸೇರಿದಂತೆ ಎಲ್ಲರಿಗೂ ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ರೀತಿಯ ಅನುಕೂಲವಾಗಿದೆ.
  • ಇದು ಕಲ್ಪವೃಕ್ಷ-ಕಾಮಧೇನುವಿದ್ದಂತೆ. 371ಜೆ ತಿದ್ದುಪಡಿ ಜಾರಿಗೊಳಿಸಿದ ಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ನಾವು ಕೃತಜ್ಞರಾಗಿರಬೇಕು
 "ಬಸವಾದಿ ಶರಣರು ಬಯಸಿದರೆ ಮಲ್ಲಿಕಾರ್ಜುನ್ ಖರ್ಗೆ ಅವರು ದೇಶದ ಪ್ರಧಾನಿಯಾಗುತ್ತಾರೆ" title=

ಕಲಬುರಗಿ : ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಏರಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಬಸವಾದಿ ಶರಣರು ಬಯಸಿದರೆ ಪ್ರಧಾನಿಯಾಗಲಿದ್ದಾರೆ. ಅದರಿಂದ ಈ ಹೈದರಾಬಾದ್ ಕರ್ನಾಟಕ ಭಾಗ, ನಮ್ಮ ರಾಜ್ಯ, ರಾಷ್ಟ್ರ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಸಚಿವ ಎಂ ಬಿ ಪಾಟೀಲ್ ಭವಿಷ್ಯ ನುಡಿದರು.

ಅವರು ಕಲಬುರ್ಗಿಯಲ್ಲಿ ನಡೆದ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. 

ಇದನ್ನೂ ಓದಿ: ಕೋವಾಕ್ಸಿನ್ ಅತ್ಯುತ್ತಮ ಸುರಕ್ಷತಾ ದಾಖಲೆಯನ್ನು ಹೊಂದಿದೆ : ಭಾರತ್ ಬಯೋಟೆಕ್

ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಸಂವಿಧಾನ 371ಜೆ ತಿದ್ದುಪಡಿಯ ಮೂಲಕ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದರು. ಹೀಗಾಗಿ ಈ ಭಾಗದಲ್ಲಿ ನಮ್ಮ ಸಮುದಾಯ ಸೇರಿದಂತೆ ಎಲ್ಲರಿಗೂ ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ರೀತಿಯ ಅನುಕೂಲವಾಗಿದೆ. ಇದು ಕಲ್ಪವೃಕ್ಷ-ಕಾಮಧೇನುವಿದ್ದಂತೆ. 371ಜೆ ತಿದ್ದುಪಡಿ ಜಾರಿಗೊಳಿಸಿದ ಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ನಾವು ಕೃತಜ್ಞರಾಗಿರಬೇಕು ಎಂದು ಹೇಳಿದರು.May be an image of 4 people, dais and text

ಶ್ರೀ ಖರ್ಗೆ ಸಾಹೇಬರು ಇಎಸ್ ಐ ಆಸ್ಪತ್ರೆ ಸೇರಿದಂತೆ ಹಲವು ಯೋಜನೆಗಳನ್ನು ತಂದು ಈ ಭಾಗವನ್ನು ಅಭಿವೃದ್ಧಿ ಪಡಿಸಿದ್ದಾರೆ. ಇಷ್ಟೆಲ್ಲಾ ಮಾಡಿದ್ದರೂ ಕಳೆದ ಬಾರಿ ಅವರಿಗೆ ಸೋಲಾಯಿತು. ಈ ಬಾರಿ ಕಲಬುರಗಿಯಲ್ಲಿ ಕಾಂಗ್ರೆಸ್ ಗೆ ಸೋಲಾಗಬಾರದು. ಅವರ ಮನಸ್ಸು ನೋಯಿಸುವ ಕೆಲಸವಾಗಬಾರದು. ಕಲಬುರಗಿ ಮಾತ್ರವಲ್ಲದೆ ಹೈದರಾಬಾದ್ ಭಾಗದಲ್ಲಿರುವ ಎಲ್ಲ 5 ಲೋಕಸಭಾ ಕ್ಷೇತ್ರಗಳಲ್ಲೂ ಸಮುದಾಯದ ಜನ ಕಾಂಗ್ರೆಸ್ ಬೆಂಬಲಿಸಬೇಕು ಎಂದು ಕರೆ ನೀಡಿದರು.

ಸಚಿವರಾದ ಶ್ರೀ ಪ್ರಿಯಾಂಕಾ ಖರ್ಗೆ, ಡಾ|| ಶರಣಪ್ರಕಾಶ್ ಪಾಟೀಲ್ ಶಾಸಕರಾದ ಶ್ರೀ ಎಂ.ವೈ.ಪಾಟೀಲ, ಶ್ರೀ B.R. ಪಾಟೀಲ್, ಡಾ|| ಅಜಯ್ ಧರ್ಮಸಿಂಗ್, ಶ್ರೀ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಸಮಾಜದ ಮುಖಂಡರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News