ಯಡಿಯೂರಪ್ಪ ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ: ಸಚಿವ ಎಂ.ಬಿ.ಪಾಟೀಲ್

Congress guarantee schemes: ಸಿಎಂ ಸಿದ್ದರಾಮಯ್ಯರ ವಿರುದ್ಧ ಟೀಕೆ ಮಾಡುವ ಮೊದಲು ಬಿ.ಎಸ್.ಯಡಿಯೂರಪ್ಪನವರು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ ಎಂದು ಎಂ.ಬಿ.ಪಾಟೀಲ್ ಖಾರವಾಗಿ ಟೀಕಿಸಿದ್ದಾರೆ.

Written by - Puttaraj K Alur | Last Updated : Feb 18, 2024, 05:35 PM IST
  • ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಬಗ್ಗೆ ಟೀಕಿಸಿದ್ದ ಯಡಿಯೂರಪ್ಪಗೆ ಎಂ.ಬಿ.ಪಾಟೀಲ್‌ ತಿರುಗೇಟು
  • ಬೇರೆಯವರಿಗೆ ಹೇಳುವ ಮುನ್ನ ಯಡಿಯೂರಪ್ಪನವರು ಮೊದಲು ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ
  • ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸದ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಂ.ಬಿ.ಪಾಟೀಲ್‌ ಟೀಕೆ
ಯಡಿಯೂರಪ್ಪ ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ: ಸಚಿವ ಎಂ.ಬಿ.ಪಾಟೀಲ್ title=
ಯಡಿಯೂರಪ್ಪ ವಿರುದ್ಧ ಎಂ.ಬಿ.ಪಾಟೀಲ್‌ ಟೀಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್‌ ಬಗ್ಗೆ ಟೀಕಿಸಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ʼಬೇರೆಯವರಿಗೆ ಹೇಳುವ ಮುನ್ನ ಯಡಿಯೂರಪ್ಪನವರು ಮೊದಲು ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿʼ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಾಯ್ತು ಟಿಕೆಟ್‌ ಫೈಟ್!

2018ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ 606 ಭರವಸೆಗಳನ್ನು ನೀಡಿದ್ದರು. ಈ ಪೈಕಿ ಕೇವಲ 55 ಭರವಸೆಗಳನ್ನು ಮಾತ್ರ ಈಡೇರಿಸಿದ್ದರು. ಅವರು ನೀಡಿದ ಭರವಸೆಗಳ ಪೈಕಿ ಶೇ.೧೦ರಷ್ಟು ಭರವಸೆಗಳನ್ನು ಈಡೇರಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ಆದರೆ 2013ರಲ್ಲಿ ಸಿದ್ದರಾಮಯ್ಯ ತಾವು ನೀಡಿದ 165 ಭರವಸೆಗಳಲ್ಲಿ 158 ಈಡೇರಿಸಿದ್ದಲ್ಲದೆ, 30 ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫ್ಲೈ ಓವರ್ ಮೇಲೆ ಮೆಟ್ರೋ ಸೇರಿ ಬೆಂಗಳೂರಿಗೆ ಹೊಸ ರೂಪ ನೀಡಲು ನಾನಾ ಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್

ಪ್ರಸಕ್ತ ಸಾಲಿನಲ್ಲಿ ನಾವು ವಿಶೇಷವಾಗಿ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಭರವಸೆ ನೀಡಿದ್ದೇವು. ಅದರಂತೆ ಆ ಐದೂ ಗ್ಯಾರಂಟಿಗಳನ್ನು ನಾವು ಈಡೇರಿಸಿದ್ದೇವೆ. ಸಿದ್ದರಾಮಯ್ಯರ ವಿರುದ್ಧ ಟೀಕೆ ಮಾಡುವ ಮೊದಲು ಯಡಿಯೂರಪ್ಪನವರು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ ಎಂದು ಎಂ.ಬಿ.ಪಾಟೀಲ್ ಖಾರವಾಗಿ ಟೀಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News