Neha Murder Case : ನೇಹಾ ಕೊಲೆ ಪ್ರಕರಣ ಖಂಡಿಸಿ, ಏಪ್ರಿಲ್ 22ರಂದು ಸ್ವಯಂ ಪ್ರೇರಿತ ಬಂದ್

Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಈ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Written by - Zee Kannada News Desk | Last Updated : Apr 21, 2024, 08:47 PM IST
  • ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
  • ಸ್ವಯಂ ಪ್ರೇರಿತವಾಗಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಂಗಡಿ ಮಳಿಗೆಗಳನ್ನು ಬಂದ್ ಮಾಡುವುದಾಗಿ ತಿಳಿಸಿದ್ದಾರೆ
  • ಇಂಥ ಪ್ರಕರಣಗಳಿಗೆ ಸರಿಯಾದ ಶಿಕ್ಷೆ ತ್ವರಿತವಾಗಿ ಆಗಲೇಬೇಕು
Neha Murder Case : ನೇಹಾ ಕೊಲೆ ಪ್ರಕರಣ ಖಂಡಿಸಿ, ಏಪ್ರಿಲ್ 22ರಂದು ಸ್ವಯಂ ಪ್ರೇರಿತ ಬಂದ್  title=

Hubballi bandh : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಈ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನು ಓದಿ : ನೇಹಾ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಾಳೆ (ಏ.22) ಹುಬ್ಬಳ್ಳಿಯಲ್ಲಿ ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ಆರೋಪಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಮುಸ್ಲಿಂ ಸಮುದಾಯದವರು ಸ್ವಯಂ ಪ್ರೇರಿತವಾಗಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಂಗಡಿ ಮಳಿಗೆಗಳನ್ನು ಬಂದ್ ಮಾಡುವುದಾಗಿ ತಿಳಿಸಿದ್ದಾರೆ ಎಂದು ಅಂಜುಮನ್ ಇ ಇಸ್ಲಾಂ ಇಸ್ಮಾಯಿಲ್ ತಮಟಗಿ ಹೇಳಿದ್ದಾರೆ

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ 22ರಂದು ಬೆಳಿಗ್ಗೆ 10 ಗಂಟೆಗೆ ಅಂಜುಮನ್ ಸಂಸ್ಥೆ ಆವರಣದಿಂದ ಮೆರವಣಿಗೆ ಹೊರತು ಜುಬಿಲಿ ವೃತ್ತ, ಕೋರ್ಟ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ  ತಲುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ಅಂಗಡಿ ಮತ್ತು ಮಳಿಗೆಯನ್ನು ಸ್ವಯಂ ಪ್ರೇರಿತವಾಗಿ ಮುಸ್ಲಿಂ ಸಮುದಾಯದವರು ಬಂದ್ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿ : ಸೂಪರ್ಮ್ಯಾನ್ ಥರ ಹಾರಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಪಡೆದ ಕ್ಯಾಮರೂನ್ ಗ್ರೀನ್: ಈ ವಿಡಿಯೋ ನೋಡಿ

ನೇಹಾ ಕೊಲೆಗೆ ನ್ಯಾಯ ಸಿಗಬೇಕು, ಇಂತಹ ಅಮಾನವೀಯ ಕೃತ್ಯವನ್ನು ಯಾರು ಮಾಡಿದರೂ ಅದು ಖಂಡನಿಯ. ಇಂಥ ಪ್ರಕರಣಗಳಿಗೆ ಸರಿಯಾದ ಶಿಕ್ಷೆ ತ್ವರಿತವಾಗಿ ಆಗಲೇಬೇಕು. ವಿಚಾರಣೆ ನಡೆಸಿ ಶಿಕ್ಷ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News