ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು!

BJP complaint against Yatindra Siddaramaiah: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ, ಗುಜರಾತ್‌ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ರಾಜಕೀಯ ಮಾಡಿದ್ದಾರೆ ಅಂತಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು.

Written by - Puttaraj K Alur | Last Updated : Mar 30, 2024, 05:12 PM IST
  • ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ನಿಂದನಾತ್ಮಕ ಪದ ಬಳಕೆ
  • ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
  • ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ ಎಂದಿದ್ದ ಯತೀಂದ್ರ
ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು!  title=
ಯತೀಂದ್ರ ವಿರುದ್ಧ ಬಿಜೆಪಿ ದೂರು!

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ರಣಕಣ ರಂಗೇರಿದೆ. ಚುನಾವಣಾ ಪ್ರಚಾರದ ಮೂಲಕ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಮತಬೇಟೆ ನೆಡಸುತ್ತಿದ್ದಾರೆ. ಇದೇ ವೇಳೆ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತಿರುವ ರಾಜಕೀಯ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಬಿಜೆಪಿ, ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹೀಗೆ ಪ್ರಚಾರದ ವೇಳೆ ಟೀಕಾಪ್ರಹಾರದ ಭಾಷಣಗಳು ಕೇಳಿಬರುತ್ತಿವೆ.

ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದಾರೆಂದು ಆರೋಪಿಸಿ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಯತೀಂದ್ರ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಮಾದರಿ ನೀತಿ ಸಂಹಿತೆ (MCC) ಉಲ್ಲಂಘಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮಾರ್ಚ್ 29ರ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ

ಈ ವಿಷಯವಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ರಾಜ್ಯ ಘಟಕವು ಯತೀಂದ್ರರ ವಿರುದ್ಧ ಆರೋಪ ಹೊರಿಸಿದೆ. ಚುನಾವಣಾ ಆಯೋಗ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಯತೀಂದ್ರ ಅವರು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಕಿಡಿಕಾರಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ʼಇದು ನಮ್ಮ ನಾಯಕರ ಮೇಲಿನ ವೈಯಕ್ತಿಕ ದಾಳಿ. ಯತೀಂದ್ರ ಅವರ ಹೇಳಿಕೆ ಖಂಡನೀಯ. ಇದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮೇಲೆ ನಡೆದಿರುವ ವೈಯಕ್ತಿಕ ದಾಳಿʼಯಾಗಿದೆ ಎಂದು ಬಿಜೆಪಿ ಪತ್ರದಲ್ಲಿ ತಿಳಿಸಿದೆ

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕಾಂಗ್ರೆಸ್ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ ಎಂದು ಖಾರವಾಗಿ ಟೀಕಿಸಿದ್ದರು. ಗುಜರಾತ್‌ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ರಾಜಕೀಯ ಮಾಡಿದ್ದಾರೆʼ ಅಂತಾ ಹೇಳಿದ್ದರು.

ಯತೀಂದ್ರ ಸಿದ್ದರಾಮಯ್ಯರ ಹೇಳಿಕೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ಖಂಡನೆ ವ್ಯಕ್ತಪಡಿಸಿದ್ದರು. ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ, ಕೂಡಲೇ ಅವರು ಕ್ಷಮೆಯಾಚಿಸಬೇಕು ಅಂತಾ ಆಗ್ರಹಿಸಿದ್ದರು. 

ಇದನ್ನೂ ಓದಿ: ಬೀದರ್‌ನಲ್ಲಿ ರಂಗೇರಿದ ಲೋಕಸಭೆ ಚುನಾವಣೆ ಅಖಾಡ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News