Prajwal Revanna Case: ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ವಾಪಸ್ ಕರೆತರಲು ಪ್ರಧಾನಿ ಮೋದಿಗೆ ಸಿಎಂ ಪತ್ರ 

Prajwal Revanna Case: ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ

Written by - Manjunath N | Last Updated : May 1, 2024, 07:00 PM IST
  • ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.
  • ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ
Prajwal Revanna Case: ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ವಾಪಸ್ ಕರೆತರಲು ಪ್ರಧಾನಿ ಮೋದಿಗೆ ಸಿಎಂ ಪತ್ರ  title=

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಲು ನೆರವಾಗಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮಹಿಳಾ ದೌರ್ಜನ್ಯದಂತಹ ಗುರುತರ ಆರೋಪ ಹೊತ್ತಿರುವ ಹಾಲಿ‌ ಸಂಸದ ಹಾಗೂ ಎನ್‌ಡಿಎ ಮೈತ್ರಿಕೂಟದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿದೆ ಎಂದು ಅವರು ತಿಳಿಸಿದ್ದಾರೆ.

May be an image of text

ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ. ಹಾಗಾಗಿ ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ತಕ್ಷಣ ಕಾರ್ಯಪ್ರವೃತ್ತವಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯುವ ಜೊತೆಗೆ ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳನ್ನು ಬಳಸಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ನೆರವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News