ಬಿಎಸ್ವೈ-ಪ್ರಭಾಕರ್ ಕೋರೆ ನೇತೃತ್ವದಲ್ಲಿ ಏ.15ರಂದು ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿಯಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಶಿವಾಜಿ ಸರ್ಕಲ್’ನಿಂದ ಅಸಂಖ್ಯಾತ ಕಾರ್ಯಕರ್ತರೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸುವೆ ಎಂದು ಹೇಳಿದರು.

Written by - Prashobh Devanahalli | Last Updated : Apr 12, 2024, 08:51 PM IST
    • ಧಾರವಾಡ ಲೋಕಸಭೆ ಕ್ಷೇತ್ರಕ್ಕೆ 5ನೇ ಬಾರಿ ಸ್ಪರ್ಧೆ
    • ಏಪ್ರಿಲ್ 15ರಂದು ಬೃಹತ್ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ
    • ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ
ಬಿಎಸ್ವೈ-ಪ್ರಭಾಕರ್ ಕೋರೆ ನೇತೃತ್ವದಲ್ಲಿ ಏ.15ರಂದು ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ title=
File Photo

ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರಕ್ಕೆ 5ನೇ ಬಾರಿ ಸ್ಪರ್ಧೆ ಬಯಸಿ ಏಪ್ರಿಲ್ 15ರಂದು ಬೃಹತ್ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ 3ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಲ್ಲ : ಪ್ರಹ್ಲಾದ ಜೋಶಿ ಸವಾಲು

ಹುಬ್ಬಳ್ಳಿಯಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಶಿವಾಜಿ ಸರ್ಕಲ್’ನಿಂದ ಅಸಂಖ್ಯಾತ ಕಾರ್ಯಕರ್ತರೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸುವೆ ಎಂದು ಹೇಳಿದರು.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮತ್ತು ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆದಿದೆ. ಶಾಸಕ ಅರವಿಂದ ಬೆಲ್ಲದ್, ಮಹೇಶ ತೆಂಗಿನಕಾಯಿ, ಶಂಕರಣ್ಣ ಮುನವಳ್ಳಿ ಮುಂತಾದ ಪ್ರಮುಖರು ಅಂದು ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾಫಿಗೆ ಈ ಹಣ್ಣಿನ ರಸ ಬೆರೆಸಿ ಕುಡಿದರೆ ಕೇವಲ 5 ದಿನದಲ್ಲಿ ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಸುಲಭವಾಗಿ ಕರಗಿಹೋಗುತ್ತೆ!

ಅಂದು ಬೆಳಗ್ಗೆ 10 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

Trending News